• Home  
  • ಕುಂತಳ ನಗರ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ : 5ನೇ ಬೃಹತ್ ಉದ್ಯೋಗ ಮೇಳ (Kuntala Nagara Gramina Bantara Sangha Charitable Trust: 5th Mega Job Fair)
- ವ್ಯವಹಾರ - ಸಂಘ, ಸಂಸ್ಥೆಗಳು - ಸಹಾಯ ಹಸ್ತ

ಕುಂತಳ ನಗರ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ : 5ನೇ ಬೃಹತ್ ಉದ್ಯೋಗ ಮೇಳ (Kuntala Nagara Gramina Bantara Sangha Charitable Trust: 5th Mega Job Fair)

Share: ಕುಂತಳ ನಗರ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ : 5ನೇ ಬೃಹತ್ ಉದ್ಯೋಗ ಮೇಳ ಎಂ.ಆರ್.ಜಿ. ಗ್ರೂಪ್, ನಿಟ್ಟೆಯ ಎನ್ಎಂಎಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಹಯೋಗ   (Udupi) ಉಡುಪಿ: ಅ.10: ಉದ್ಯೋಗದ ಮೂಲಕ ಬದುಕನ್ನು ಭದ್ರಗೊಳಿಸುವ ಯುವಜನರ ಕನಸು ನನಸಾಗುವಲ್ಲಿ 5ನೇ ಬೃಹತ್ ಉದ್ಯೋಗ ಮೇಳ ಆಯೋಜಿಸಿದ ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ನ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ಇರಿಸಿದ ಪರಿಣಾಮಕಾರಿ ಹೆಜ್ಜೆಯು ಕರಾವಳಿ ಜಿಲ್ಲೆಗಳಲ್ಲಿಯೇ ಮಾದರಿಯಾಗಿದೆ   ಎಂದು ಬೆಂಗಳೂರು […]

(Udupi) ಉಡುಪಿ: ಅ.10: ಉದ್ಯೋಗದ ಮೂಲಕ ಬದುಕನ್ನು ಭದ್ರಗೊಳಿಸುವ ಯುವಜನರ ಕನಸು ನನಸಾಗುವಲ್ಲಿ 5ನೇ ಬೃಹತ್ ಉದ್ಯೋಗ ಮೇಳ ಆಯೋಜಿಸಿದ ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ನ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ಇರಿಸಿದ ಪರಿಣಾಮಕಾರಿ ಹೆಜ್ಜೆಯು ಕರಾವಳಿ ಜಿಲ್ಲೆಗಳಲ್ಲಿಯೇ ಮಾದರಿಯಾಗಿದೆ   ಎಂದು ಬೆಂಗಳೂರು ಎಂ.ಆರ್.ಜಿ. ಗ್ರೂಪ್ ಸಂಸ್ಥಾಪಕ ಡಾ. ಕೆ. ಪ್ರಕಾಶ್ ಶೆಟ್ಟಿ ಹೇಳಿದರು.

 ಅವರು ಶುಕ್ರವಾರ ಕುಂತಳನಗರದ ಆಶಾ ಪ್ರಕಾಶ್ ಶೆಟ್ಟಿ ಕನ್ವೆನ್ಷನ್ ಸೆಂಟರ್ ನಲ್ಲಿ ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ನ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ವತಿಯಿಂದ, ನಿಟ್ಟೆಯ ಎನ್ಎಂಎಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಹಯೋಗ, ಎಂ.ಆರ್.ಜಿ. ಗ್ರೂಪ್ ಪ್ರಾಯೋಜಕತ್ವದಲ್ಲಿ ನಡೆದ ಉಚಿತವಾಗಿ 5ನೇ ಬೃಹತ್ ಉದ್ಯೋಗ ಮೇಳ ಮತ್ತು ಸ್ಟಡಿ ಅಬ್ರಾಡ್ ಎಕ್ಸ್ಪೋ–2026 ನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.

  ಸ್ಟಡಿ ಅಬ್ರಾಡ್ ಎಕ್ಸ್ಪೋವನ್ನು ಉದ್ಘಾಟಿಸಿದ ನಿಟ್ಟೆ ಛಾನ್ಸಲರ್ ಎನ್. ವಿಶಾಲ್ ಹೆಗ್ಡೆ ಮಾತನಾಡಿ, ಎಐ ತಂತ್ರಜ್ಙಾನದಿಂದ ಮತ್ತಷ್ಟು ಉದ್ಯೋಗವಕಾಶ ಸೃಷ್ಟಿಯಾಗಲಿದೆ. ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ನ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ಹೆಚ್ಚು ಕಂಪೆನಿಗಳನ್ನು ಕರೆಸುವ ಮೂಲಕ ಯುವಜನಾಂಗಕ್ಕೆ ಹೆಚ್ಚಿನ ಉದ್ಯೋಗವಕಾಶ ನೀಡುವ ಪ್ರಯತ್ನ ಶ್ಲಾಘನೀಯ ಎಂದರು.

 ಮಣಿಪಾಲ ಮಾಹೆಯ ಪ್ರೊ ಛಾನ್ಸಲರ್ ಡಾ.ಎಚ್.ಎಸ್. ಬಲ್ಲಾಳ್ ಪ್ರಧಾನ ಭಾಷಣದಲ್ಲಿ ಟ್ರಸ್ಟ್ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ ಅವರು ಯುವ ಜನಾಂಗಕ್ಕೆ ಉದ್ಯೋಗವಕಾಶ ಒದಗಿಸುವ ಮೂಲಕ ದಾರಿದೀಪವಾಗಿ ಅತ್ಯುತ್ತಮ ಕೆಲಸ ಮಾಡಿದ್ದಾರೆ ಎಂದರು.

 ಅಧ್ಯಕ್ಷತೆ ವಹಿಸಿದ್ದ ಟ್ರಸ್ಟ್ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ ಮಾತನಾಡಿ, ನಾಲ್ಕು ಬೃಹತ್ ಉದ್ಯೋಗ ಮೇಳಗಳಲ್ಲಿ ಸುಮಾರು 3,500 ಅಭ್ಯರ್ಥಿಗಳ ಆಯ್ಕೆಗೊಂಡಿದ್ದರು. ಈ ಬಾರಿ ವಿವಿಧ ಕ್ಷೇತ್ರಗಳ ಸುಮಾರು 52 ಕಂಪನಿಗಳು ಭಾಗವಹಿಸಿದ್ದು, 1500ಕ್ಕೂ ಅಭ್ಯರ್ಥಿಗಳು ಪಾಲ್ಗೊಂಡಿದ್ದಾರೆ ಎಂದು ಹೇಳಿದರು.

ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಮಾತನಾಡಿದರು.

  ವೇದಿಕೆಯಲ್ಲಿ ಮಾಜಿ ಸಚಿವರುಗಳಾದ ವಿನಯ ಕುಮಾರ್ ಸೊರಕೆ, ಜಯಪ್ರಕಾಶ್ ಹೆಗ್ಡೆ, ಪ್ರಮೋದ್ ಮಧ್ವರಾಜ್, ಜಾಗತಿಕ ಬಂಟರ ಸಂಘದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಎನ್ಎಂಎಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಪ್ರಾಂಶುಪಾಲ ಡಾ. ನಿರಂಜನ್ ಎನ್. ಚಿಪ್ಲೂಂಕರ್, ತರಬೇತಿ ಮತ್ತು ಉದ್ಯೋಗ ನಿಯೋಜನೆ ವಿಭಾಗದ ಭರತ್ ಜಿ. ಕುಮಾರ್, ಕಿದಿಯೂರು ಕ್ರೆಡಿಟ್ ಕೊ ಆಪರೇಟಿವ್ ಸೊಸೈಟಿ ಅಧ್ಯಕ್ಷ ಉದಯ್ ಕುಮಾರ್ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಟ್ಟಾರು ರತ್ನಾಕರ್ ಹೆಗ್ಡೆ, ಮುನಿಯಾಲು ಉದಯ ಕೃಷ್ಣಯ್ಯ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ಮುನಿಯಾಲು ಉದಯ್ ಕುಮಾರ್ ಶೆಟ್ಟಿ, ಪ್ರಸಾದ್ ನೇತ್ರಾಲಯದ ಮೆಡಿಕಲ್ ಡೈರೆಕ್ಟರ್ ಡಾ. ಕೃಷ್ಣಪ್ರಸಾದ್ ಕೂಡ್ಲು, ಬೆಂಗಳೂರು ಕೈಗಾರಿಕೋದ್ಯಮಿ ವಿಜಯ್ ಹೆಗ್ಡೆ, ಪಡುಬಿದ್ರಿ ಬಂಟರ ಸಂಘದ ಮಾಜಿ ಅಧ್ಯಕ್ಷ, ಕೆಪಿಸಿಸಿ ಕೊ ಆರ್ಡಿನೇಟರ್ ನವೀನ್ ಚಂದ್ರ ಜೆ. ಶೆಟ್ಟಿ, ಸಾಯಿರಾಧ ಗ್ರೂಪ್ ಮನೋಹರ್ ಶೆಟ್ಟಿ, ಎಚ್.ಪಿ.ಆರ್. ಗ್ರೂಪ್ ಆಫ್ ಇನ್ ಸ್ಟಿಟ್ಯೂಷನ್ ಹರಿಪ್ರಸಾದ್ ರೈ, ಉಡುಪಿ ಗ್ರಾಮೀಣ ಬಂಟರ ಸಂಘದ ಅಧ್ಯಕ್ಷ ಡಾ. ಎಚ್.ಬಿ. ಶೆಟ್ಟಿ, ಟ್ರಸ್ಟ್ ಕಾರ್ಯದರ್ಶಿ ಕಾರ್ತಿಕ್ ಶೆಟ್ಟಿ, ಟ್ರಸ್ಟಿ ಪದ್ಮನಾಭ ಹೆಗ್ಡೆ, ಟ್ರಸ್ಟಿಗಳು ವೇದಿಕೆಯಲ್ಲಿದ್ದರು.

ಟ್ರಸ್ಟ್ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ ಸ್ವಾಗತಿಸದರು. ಟ್ರಸ್ಟ್ ಕೋಶಾಧಿಕಾರಿ ವಿಜಿತ್ ಶೆಟ್ಟಿ ವಂದಿಸಿದರು. ನಿಟ್ಟೆ ಪ್ರೋಫೆಸರ್ ಡಾ. ಸುಧೀರ್ ರಾಜ್ ನಿರೂಪಿಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.