• Home  
  • ಕುಂದಾಪುರ : ಟಿಪ್ಪರ್ ಡಿಕ್ಕಿ – ಬಿಎಸ್ಸಿ ವಿದ್ಯಾರ್ಥಿ ಮೃತ್ಯು (Kundapura :Tipper collision -BSC Student dies)
- ಅಪಘಾತ

ಕುಂದಾಪುರ : ಟಿಪ್ಪರ್ ಡಿಕ್ಕಿ – ಬಿಎಸ್ಸಿ ವಿದ್ಯಾರ್ಥಿ ಮೃತ್ಯು (Kundapura :Tipper collision -BSC Student dies)

Share: ಕುಂದಾಪುರ : ಟಿಪ್ಪರ್ ಡಿಕ್ಕಿ – ಬಿಎಸ್ಸಿ ವಿದ್ಯಾರ್ಥಿ ಮೃತ್ಯು  (Kundapura) ಕುಂದಾಪುರ: ಕಾಲೇಜು ಮುಗಿಸಿ ಸ್ನೇಹಿತರೊಂದಿಗೆ ಫುಟ್ಪಾತಿನಲ್ಲಿ ನಡೆದು ಕೊಂಡು ಹೋಗುತ್ತಿದ್ದ ವಿದ್ಯಾರ್ಥಿಗೆ ಹಿಂದಿನಿಂದ ಬಂದ ಟಿಪ್ಪರ್ ಡಿಕ್ಕಿ ಹೊಡೆದು ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟ ಘಟನೆ ಕೋಟೇಶ್ವರ ಪ್ರಥಮ ದರ್ಜೆ ಕಾಲೇಜು ಸಮೀಪ ಕೋಟೇಶ್ವರ ಹಾಲಾಡಿ ರಸ್ತೆಯ ಕಟ್ಕೇರಿ ಎಂಬಲ್ಲಿ ಮಂಗಳವಾರ ಘಟಿಸಿದೆ.  ಅಪಘಾತದಲ್ಲಿ ಸಾವನ್ನಪ್ಪಿದ ವಿದ್ಯಾರ್ಥಿಯನ್ನು ನಾಗೂರು ನಿವಾಸಿ ಪ್ರಸ್ತುತ ಕೋಟೇಶ್ವರದ ಕಾಳಾವರ ವರದರಾಜ ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ […]

ಕುಂದಾಪುರ : ಟಿಪ್ಪರ್ ಡಿಕ್ಕಿಬಿಎಸ್ಸಿ ವಿದ್ಯಾರ್ಥಿ ಮೃತ್ಯು

 (Kundapura) ಕುಂದಾಪುರ: ಕಾಲೇಜು ಮುಗಿಸಿ ಸ್ನೇಹಿತರೊಂದಿಗೆ ಫುಟ್ಪಾತಿನಲ್ಲಿ ನಡೆದು ಕೊಂಡು ಹೋಗುತ್ತಿದ್ದ ವಿದ್ಯಾರ್ಥಿಗೆ ಹಿಂದಿನಿಂದ ಬಂದ ಟಿಪ್ಪರ್ ಡಿಕ್ಕಿ ಹೊಡೆದು ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟ ಘಟನೆ ಕೋಟೇಶ್ವರ ಪ್ರಥಮ ದರ್ಜೆ ಕಾಲೇಜು ಸಮೀಪ ಕೋಟೇಶ್ವರ ಹಾಲಾಡಿ ರಸ್ತೆಯ ಕಟ್ಕೇರಿ ಎಂಬಲ್ಲಿ ಮಂಗಳವಾರ ಘಟಿಸಿದೆ.

 ಅಪಘಾತದಲ್ಲಿ ಸಾವನ್ನಪ್ಪಿದ ವಿದ್ಯಾರ್ಥಿಯನ್ನು ನಾಗೂರು ನಿವಾಸಿ ಪ್ರಸ್ತುತ ಕೋಟೇಶ್ವರದ ಕಾಳಾವರ ವರದರಾಜ ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಬಿಎಸ್ಸಿ ವಿದ್ಯಾರ್ಥಿ ಧನುಷ್ ಎಂದು ಗುರುತಿಸಲಾಗಿದೆ.

 ಧನುಷ್ ತನ್ನ ಇಬ್ಬರು ಸ್ನೇಹಿತರೊಂದಿಗೆ ಕಾಲೇಜು ಮುಗಿಸಿ ಕೋಟೇಶ್ವರದತ್ತ ರಸ್ತೆ ಬದಿಯ ಇಂಟರ್ ಲಾಕ್ ಮೇಲೆ ನಡೆದುಕೊಂಡು ಬರುತ್ತಿದ್ದ. ಅತೀ ವೇಗವಾಗಿ ಹಿಂದಿನಿಂದ ಬಂದ ಶ್ರೀ ಮಹಾಗಣಪತಿ ಪ್ರಸನ್ನ ಎಂಬ ಹೆಸರಿನ ಟಿಪ್ಪರ್ ಎದುರಿನಿಂದ ಬರುತ್ತಿದ್ದ ಕಾರನ್ನು ತಪ್ಪಿಸಲು ತೀರಾ ಬಲಬದಿಗೆ ಬಂದು ಧನುಷ್ ನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮ ಧನುಷ್ ಲಾರಿಯಡಿಗೆ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

 ಕುಂದಾಪುರ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.