• Home  
  • ಕುಂದಾಪುರ : ಬೈಕಿಗೆ ಕಾರು ಡಿಕ್ಕಿ, ಬೈಕ್ ಸವಾರರಿಬ್ಬರ ದುರ್ಮರಣ {Kundapura : Car – Byke accident Two died)
- ಅಪಘಾತ

ಕುಂದಾಪುರ : ಬೈಕಿಗೆ ಕಾರು ಡಿಕ್ಕಿ, ಬೈಕ್ ಸವಾರರಿಬ್ಬರ ದುರ್ಮರಣ {Kundapura : Car – Byke accident Two died)

Share: ಕುಂದಾಪುರ : ಬೈಕಿಗೆ ಕಾರು ಡಿಕ್ಕಿ, ಬೈಕ್ ಸವಾರರಿಬ್ಬರ ದುರ್ಮರಣ(Kundapura) ಕುಂದಾಪುರ: ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ಬಳ್ಕೂರು ಎಂಬಲ್ಲಿ ಕಾರು ಢಿಕ್ಕಿಯಾದ ಪರಿಣಾಮ ದ್ವಿಚಕ್ರ ವಾಹನ ಸವಾರರಿಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ನಡೆದಿದೆ.ಮೃತಪಟ್ಟ ದ್ವಿಚಕ್ರ ವಾಹನ ಸವಾರರನ್ನು ರಾಜೀವ ಶೆಟ್ಟಿ (55) ಹಾಗೂ ಸುಧೀರ ದೇವಾಡಿಗ (35) ಎಂದು ಗುರುತಿಸಲಾಗಿದೆ.ಕಂಡ್ಲೂರು ಕಡೆಯಿಂದ ಕುಂದಾಪುರ ಕಡೆಗೆ ತೆರಳುತ್ತಿದ್ದ ಕಾರು ಹಾಗೂ ಬಸ್ರೂರು ಸಮೀಪದ ಬಿ.ಎಚ್.ನಿಂದ ಕಂಡ್ಲೂರಿನತ್ತ ತೆರಳುತ್ತಿದ್ದ ಸ್ಕೂಟಿ ಮುಖಾಮುಖಿ ಡಿಕ್ಕಿಯಾಗಿದ್ದು ಪರಿಣಾಮ […]

ಕುಂದಾಪುರ : ಬೈಕಿಗೆ ಕಾರು ಡಿಕ್ಕಿ, ಬೈಕ್ ಸವಾರರಿಬ್ಬರ ದುರ್ಮರಣ
(Kundapura) ಕುಂದಾಪುರ: ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ಬಳ್ಕೂರು ಎಂಬಲ್ಲಿ ಕಾರು ಢಿಕ್ಕಿಯಾದ ಪರಿಣಾಮ ದ್ವಿಚಕ್ರ ವಾಹನ ಸವಾರರಿಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ನಡೆದಿದೆ.
ಮೃತಪಟ್ಟ ದ್ವಿಚಕ್ರ ವಾಹನ ಸವಾರರನ್ನು ರಾಜೀವ ಶೆಟ್ಟಿ (55) ಹಾಗೂ ಸುಧೀರ ದೇವಾಡಿಗ (35) ಎಂದು ಗುರುತಿಸಲಾಗಿದೆ.
ಕಂಡ್ಲೂರು ಕಡೆಯಿಂದ ಕುಂದಾಪುರ ಕಡೆಗೆ ತೆರಳುತ್ತಿದ್ದ ಕಾರು ಹಾಗೂ ಬಸ್ರೂರು ಸಮೀಪದ ಬಿ.ಎಚ್.ನಿಂದ ಕಂಡ್ಲೂರಿನತ್ತ ತೆರಳುತ್ತಿದ್ದ ಸ್ಕೂಟಿ ಮುಖಾಮುಖಿ ಡಿಕ್ಕಿಯಾಗಿದ್ದು ಪರಿಣಾಮ ದ್ವಿಚಕ್ರ ವಾಹನದಲ್ಲಿದ್ದ ಸವಾರರಿಬ್ಬರು ದೂರಕ್ಕೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಹಾಗೂ ಬೈಕ್ ನಜ್ಜುಗುಜ್ಜಾಗಿದೆ.
ಘಟನಾ ಸ್ಥಳಕ್ಕೆ ಕುಂದಾಪುರ ಸಂಚಾರ ಠಾಣೆ ಪೊಲೀಸರು ಹಾಗೂ ಹೈವೇ ಪಟ್ರೋಲ್ ಸಿಬ್ಬಂದಿ ಆಗಮಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಈ ಬಗ್ಗೆ ಕುಂದಾಪುರ ಟ್ರಾಫಿಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಡಿವೈಎಸ್ಪಿ ಎಚ್.ಡಿ. ಕುಲಕರ್ಣಿ, ಪೊಲೀಸ್ ನಿರೀಕ್ಷಕ ನಂಜಪ್ಪ, ಗ್ರಾಮಾಂತರ ಠಾಣೆ ಪಿಎಸ್‌ಐ ನೂತನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.