ಕುಂದಾಪುರ : ಹೊಸಂಗಡಿಯ ಭಾಗಿಮನೆ ಬಳಿ ಟ್ರಕ್ಕಿಂಗ್ ಹೋಗಿದ್ದ ಮಹಿಳೆ ನದಿಯಲ್ಲಿ ಮುಳುಗಿ ಸಾವು
ಕುಂದಾಪುರದ ಮೆಡಿಕಲ್ ಶಾಪ್ ವೊಂದರ ಮಾಲಕಿ ಶುಭಶ್ರೀ ಕಾರಂತ್ ಮೃತ ದುರ್ದೈವಿ
(Kundapora) ಕುಂದಾಪುರ : ಹೊಸಂಗಡಿಯ ಭಾಗಿಮನೆ ಬಳಿ ಟ್ರಕ್ಕಿಂಗ್ ತೆರಳಿದ್ದ ಮಹಿಳೆಯೋರ್ವರು ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಭಾನುವಾರ ಘಟಿಸಿದೆ.
ಕುಂದಾಪುರದ ಮೆಡಿಕಲ್ ಶಾಪ್ ವೊಂದರ ಮಾಲಕಿ ಶುಭಶ್ರೀ ಕಾರಂತ್ ( 53) ಮೃತಪಟ್ಟ ಮಹಿಳೆ
ಕುಂದಾಪುರದಿಂದ 8-10 ಜನರ ತಂಡವೊಂದು ಹೊಸಂಗಡಿಯ ಮೆಟ್ಕಲ್ ಗುಡ್ಡ ಕಡೆಗೆ ಟ್ರಕ್ಕಿಂಗ್ ಗೆ ತೆರಳಿದ್ದರು. ಈ ವೇಳೆ ಶುಭಶ್ರೀ ಅವರು ನದಿಯಲ್ಲಿ ಕಾಲು ಜಾರಿ ಮುಳುಗಿದರೆಂದು ತಿಳಿದುಬಂದಿದೆ.
ಸಹಯಾತ್ರಿಕರು ತಕ್ಷಣ ರಕ್ಷಣಾ ಕಾರ್ಯಾಚರಣೆ ನಡೆಸಿದರೂ ಪ್ರಯೋಜನವಾಗಿಲ್ಲ. ಮೃತದೇಹವನ್ನು ಕುಂದಾಪುರ ಸರಕಾರಿ ಆಸ್ಪತ್ರೆಗೆ ರವಾನಿಸಲಾಯಿತು.
ಅಮಾಸೆಬೈಲು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ತನಿಖೆ ನಡೆಸುತ್ತಿದ್ದಾರೆ.

