ಕುತ್ಯಾರು ವಿದ್ಯಾದಾಯಿನಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವನಮಹೋತ್ಸವ
ಉಡುಪಿ: ಶಿರ್ವ ಸಹಕಾರಿ ವ್ಯವಸಾಯಿಕ ಸಂಘ.ನಿ, ಶಿರ್ವ ಹಾಗೂ ಸಹಕಾರ ಭಾರತಿ ಕಾಪು ತಾಲೂಕು ಸಹಯೋಗದಲ್ಲಿ ಕುತ್ಯಾರು ವಿದ್ಯಾದಾಯಿನಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಸಹಕಾರಿ ಸಂಘದ ಅಧ್ಯಕ್ಷರಾದ ಕುತ್ಯಾರು ಪ್ರಸಾದ್ ಶೆಟ್ಟಿ ಯವರ ಅಧ್ಯಕ್ಷತೆಯಲ್ಲಿ ಜರಗಿಸಲಾಯಿತು.
ಕಳತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಮೊಕ್ತೇಸರರಾದ ಕೇ೦ಜ ಶ್ರೀಧರ ತಂತ್ರಿ ಯವರು ದೀಪ ಬೆಳಗುವ ಮೂಲಕ ಉದ್ಘಾಟಿಸಿದರು.
ಸಹಕಾರ ಭಾರತಿ ಕಾಪು ತಾಲೂಕು ಪ್ರಮುಖರಾದ ಶ್ರೀ ಶಶಿಧರ ವಾಗ್ಲೆ ಬೆಳ್ಳೆಯವರು ಸಸಿ ವಿತರಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು.
ಉಪಾಧ್ಯಕ್ಷರಾದ ಶ್ರೀಮತಿ ವಾರಿಜಾ ಆರ್.ಕಲ್ಮಾಡಿ ಹಾಗೂ ಮುಖ್ಯ ಶಿಕ್ಷಕಿ ಶ್ರೀಮತಿ ಶರ್ಮಿಳಾ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ರವೀಂದ್ರ ಆಚಾರ್ಯ ಅವರು ನಿರ್ವಹಿಸಿದ ಕಾರ್ಯಕ್ರಮದಲ್ಲಿ ಸಂಘದ ನಿರ್ದೇಶಕರಾದ ಶ್ರೀ ಅಶೋಕ್ ರಾವ್, ನಾರಾಯಣ ನಾಯಕ್, ಶ್ರೀ ವಿಲಿಯಂ ಬ್ಯಾಪ್ಟಿಸ್ಟ್ ಮಚಾದೋ, ವಿಜಯ ಪೂಜಾರಿ ಮತ್ತು ಹರಿಣಾಕ್ಷ ಶೆಟ್ಟಿ ಯವರು ಹಾಗೂ ಶಾಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕಿಯರು ಉಪಸ್ಥಿತರಿದ್ದರು.
ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಮಾವಿನ ಸಸಿಗಳನ್ನು ವಿತರಿಸಲಾಯಿತು.

