• Home  
  • ಕುತ್ಯಾರು ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿ ಶಾಲೆಯಲ್ಲಿ ಶಿಕ್ಷಕರಿಗಾಗಿ ಜಿಲ್ಲಾ ಮಟ್ಟದ ಪ್ರಶಿಕ್ಷಣ ವರ್ಗ ಸಂಪನ್ನ(Training camp for Teachers at Kutyaru Sooraya chaithanya Global School)
- ಶಾಲಾ ಕಾಲೇಜು

ಕುತ್ಯಾರು ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿ ಶಾಲೆಯಲ್ಲಿ ಶಿಕ್ಷಕರಿಗಾಗಿ ಜಿಲ್ಲಾ ಮಟ್ಟದ ಪ್ರಶಿಕ್ಷಣ ವರ್ಗ ಸಂಪನ್ನ(Training camp for Teachers at Kutyaru Sooraya chaithanya Global School)

Share: ಕುತ್ಯಾರು ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿ ಶಾಲೆಯಲ್ಲಿ ಶಿಕ್ಷಕರಿಗಾಗಿ ಜಿಲ್ಲಾ ಮಟ್ಟದ ಪ್ರಶಿಕ್ಷಣ ವರ್ಗ ಸಂಪನ್ನ ಉಡುಪಿ; ವಿದ್ಯಾಭಾರತಿ  ಉಡುಪಿ ಆಯೋಜಿಸಿದ ಜಿಲ್ಲಾ ಮಟ್ಟದ ಪ್ರಶಿಕ್ಷಣ ವರ್ಗ ದ್ವಿತೀಯ ಭಾಷೆ ಇಂಗ್ಲೀಷ್ ಕಾರ್ಯಾಗಾರ ಕುತ್ಯಾರಿನ ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿ  ಶಾಲೆಯಲ್ಲಿ ನಡೆಯಿತು.   ಶಿಕ್ಷಕರಿಗಾಗಿ ಆಯೋಜಿಸಿದ ಈ ಕಾರ್ಯಾಗಾರದಲ್ಲಿ12 ಸಂಸ್ಥೆಗಳ ದ್ವಿತೀಯ ಭಾಷೆ ಇಂಗ್ಲಿಷ್ ನ 22  ಶಿಕ್ಷಕರು ಇದರ ಪ್ರಯೋಜನ ಪಡೆದರು. ದ್ವಿತೀಯ ಭಾಷೆ ಇಂಗ್ಲಿಷ್ ಸಂಪನ್ಮೂಲ ವ್ಯಕ್ತಿಯಾಗಿ ಬ್ರಹ್ಮಾವರ ವಲಯದ ಸಮೂಹ ಸಂಪನ್ಮೂಲ […]

ಕುತ್ಯಾರು ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿ ಶಾಲೆಯಲ್ಲಿ ಶಿಕ್ಷಕರಿಗಾಗಿ ಜಿಲ್ಲಾ ಮಟ್ಟದ ಪ್ರಶಿಕ್ಷಣ ವರ್ಗ ಸಂಪನ್ನ

ಉಡುಪಿ; ವಿದ್ಯಾಭಾರತಿ  ಉಡುಪಿ ಆಯೋಜಿಸಿದ ಜಿಲ್ಲಾ ಮಟ್ಟದ ಪ್ರಶಿಕ್ಷಣ ವರ್ಗ ದ್ವಿತೀಯ ಭಾಷೆ ಇಂಗ್ಲೀಷ್ ಕಾರ್ಯಾಗಾರ ಕುತ್ಯಾರಿನ ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿ  ಶಾಲೆಯಲ್ಲಿ ನಡೆಯಿತು.

  ಶಿಕ್ಷಕರಿಗಾಗಿ ಆಯೋಜಿಸಿದ ಈ ಕಾರ್ಯಾಗಾರದಲ್ಲಿ12 ಸಂಸ್ಥೆಗಳ ದ್ವಿತೀಯ ಭಾಷೆ ಇಂಗ್ಲಿಷ್ ನ 22  ಶಿಕ್ಷಕರು ಇದರ ಪ್ರಯೋಜನ ಪಡೆದರು.

ದ್ವಿತೀಯ ಭಾಷೆ ಇಂಗ್ಲಿಷ್ ಸಂಪನ್ಮೂಲ ವ್ಯಕ್ತಿಯಾಗಿ ಬ್ರಹ್ಮಾವರ ವಲಯದ ಸಮೂಹ ಸಂಪನ್ಮೂಲ ಅಧಿಕಾರಿ ಶ್ರೀಮತಿ ಸವಿತಾರವರು ಕಾರ್ಯಾಗಾರವನ್ನು ನಡೆಸಿಕೊಟ್ಟಿದ್ದಾರೆ.  

ಸದಸ್ಯರು ವಿದ್ಯಾಭಾರತಿ ಸಂಸ್ಥೆಯ ಸದಸ್ಯ ಶ್ರೀಕಾಂತ ಪ್ರಭುರವರು ಕಾರ್ಯಾಗಾರಕ್ಕೆ ಚಾಲನೆ ನೀಡಿದರು.

ಅವರು ಈ ಸಂದರ್ಭ ಮಾತನಾಡಿ, ಈ ದಿನಗಳಲ್ಲಿ  ಶಿಕ್ಷಕರಿಗೆ ತರಬೇತಿ ಅನಿವಾರ್ಯವಾಗಿದೆ. ಶಿಕ್ಷಕರು ಮತ್ತು ವಿದ್ಯಾರ್ಥಿಗಳಲ್ಲಿ ಸಮನ್ವಯತೆ ಮೂಡಲು ಶಿಕ್ಷಕರು ತಮ್ಮನ್ನು ತೊಡಗಿಸಿಕೊಳ್ಳಬೇಕೆಂದರು.  

ಸಂಸ್ಥೆಯ ಆಡಳಿತಧಿಕಾರಿ ದಿವಾಕರ ಆಚಾರ್ಯ ಮಾತನಾಡಿ, ತರಬೇತಿಯಿಂದ ಶಿಕ್ಷಕರು ಸಂಪನ್ಮೂಲ ವ್ಯಕ್ತಿಗಳಾಗಲು ಸಾಧ್ಯ.  ಶಿಕ್ಷಕರು ನಿರಂತರವಾಗಿ ತರಬೇತಿಯನ್ನು ಪಡೆಯುವುದರಿಂದ ಬೋಧನೆಯಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳಲು ಸಾಧ್ಯ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿ ಶಾಲೆಯ  ಆಡಳಿತ ಮಂಡಳಿ ಉಪಾಧ್ಯಕ್ಷ  ಶ್ರವಿವೇಕ್ ಆಚಾರ್ಯ ವಹಿಸಿದ್ದರು.

  ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿರುವ ಆನೆಗುಂದಿ ಸರಸ್ವತಿ ಪೀಠದ ಕಾರ್ಯದರ್ಶಿ  ಗುರುರಾಜ್ ಆಚಾರ್ಯ ಅವರು ಉಪಸ್ಥಿತರಿದ್ದು,ಅವರು  ಸಂಪನ್ಮೂಲ ವ್ಯಕ್ತಿ ಶ್ರೀಮತಿ ಸವಿತಾ ಅವರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಿದರು.

ವೇದಿಕೆಯಲ್ಲಿ  ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸಂಗೀತ,   ವಿದ್ಯಾಭಾರತಿ ಸಂಸ್ಥೆಯ ಜಿಲ್ಲಾ ಕಾರ್ಯದರ್ಶಿ ಮಹೇಶ್  ಹೈಕಾಡಿ ಉಪಸ್ಥಿತರಿದ್ದರು.

ಮಹೇಶ್‌ ಹೈಕಾಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶ್ರೀಮತಿ ಅನಿತಾ ಸ್ವಾಗತಿಸಿದರು. ಶ್ರೀಮತಿ ರಮ್ಯ ಪ್ರಭು ನಿರೂಪಿಸಿದರು. ಶ್ರೀಮತಿ ಶರೊನ್ ವಂದಿಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.