ಕುರ್ಕಾಲು ಉಮಾಮಹೇಶ್ವರ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ವತಿಯಿಂದ ಐವತ್ತು ಸಾವಿರ ಅನುದಾನ
(Kurkalu) ಕುರ್ಕಾಲು : ಕಾಪು ತಾಲೂಕು ಶಿರ್ವ ವಲಯ ಕುರ್ಕಾಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಿರ್ಮಾಣಗೊಳ್ಳುತ್ತಿರುವ ಭದ್ರಕಾಳಿಯ ಗುಡಿ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ವತಿಯಿಂದ ಐವತ್ತು ಸಾವಿರ ಅನುದಾನ ಮಂಜೂರುಗೊಂಡಿದ್ದು, ಡಿಡಿ ಯನ್ನು ದೇವಸ್ಥಾನದ ಸಮಿತಿಯವರಿಗೆ ತಾಲೂಕು ಯೋಜನಾಧಿಕಾರಿಶ್ರೀಮತಿ ಮಮತಾ ಶೆಟ್ಟಿ ಹಸ್ತಾಂತರಿಸಿದರು.
ಕಾರ್ಯಕ್ರಮದಲ್ಲಿ ಕುರ್ಕಾಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕರು, ಒಕ್ಕೂಟದ ಉಪಾಧ್ಯಕ್ಷರು ಹಾಗೂ ವಲಯದ ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು.

