• Home  
  • ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ವಿರುದ್ಧ ಸ್ಪೋಟಕ ಮಾಹಿತಿ ನೀಡಿದ ದೆಹಲಿ ಪೊಲೀಸರು
- ಅಪರಾಧ

ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ವಿರುದ್ಧ ಸ್ಪೋಟಕ ಮಾಹಿತಿ ನೀಡಿದ ದೆಹಲಿ ಪೊಲೀಸರು

Share: ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ವಿರುದ್ಧ ಸ್ಪೋಟಕ ಮಾಹಿತಿ ನೀಡಿದ ದೆಹಲಿ ಪೊಲೀಸರು ನವದೆಹಲಿ; ಭಾರತೀಯ ಕುಸ್ತಿ ಫೆಡರೇಶನ್ ನ ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ತನಗೆ ಸಿಕ್ಕ ಪ್ರತಿಯೊಂದು ಅವಕಾಶದಲ್ಲೂ ಮಹಿಳಾ ಕುಸ್ತಿಪಟುಗಳಿಗೆ ಕಿರುಕುಳ ನೀಡಿದ್ದಾರೆ ಎಂದು ದೆಹಲಿ ಪೊಲೀಸರು ಶನಿವಾರ ನ್ಯಾಯಾಲಯಕ್ಕೆ ತಿಳಿಸಿದರು. ದೆಹಲಿ ಪೊಲೀಸರನ್ನು ಪ್ರತಿನಿಧಿಸುವ ಹೆಚ್ಚುವರಿ ಪಬ್ಲಿಕ್ ಪ್ರಾಸಿಕ್ಯೂಟರ್ ಅತುಲ್ ಶ್ರೀವಾಸ್ತವ ಅವರು ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಹರ್ಜೀತ್ ಸಿಂಗ್ ಜಸ್ಪಾಲ್ ಅವರ […]

ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ವಿರುದ್ಧ ಸ್ಪೋಟಕ ಮಾಹಿತಿ ನೀಡಿದ ದೆಹಲಿ ಪೊಲೀಸರು

ನವದೆಹಲಿ; ಭಾರತೀಯ ಕುಸ್ತಿ ಫೆಡರೇಶನ್ ನ ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ತನಗೆ ಸಿಕ್ಕ ಪ್ರತಿಯೊಂದು ಅವಕಾಶದಲ್ಲೂ ಮಹಿಳಾ ಕುಸ್ತಿಪಟುಗಳಿಗೆ ಕಿರುಕುಳ ನೀಡಿದ್ದಾರೆ ಎಂದು ದೆಹಲಿ ಪೊಲೀಸರು ಶನಿವಾರ ನ್ಯಾಯಾಲಯಕ್ಕೆ ತಿಳಿಸಿದರು.

ದೆಹಲಿ ಪೊಲೀಸರನ್ನು ಪ್ರತಿನಿಧಿಸುವ ಹೆಚ್ಚುವರಿ ಪಬ್ಲಿಕ್ ಪ್ರಾಸಿಕ್ಯೂಟರ್ ಅತುಲ್ ಶ್ರೀವಾಸ್ತವ ಅವರು ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಹರ್ಜೀತ್ ಸಿಂಗ್ ಜಸ್ಪಾಲ್ ಅವರ ಪೀಠದ ಮುಂದೆ ಈ ಮಹತ್ವದ ಹೇಳಿಕೆ ನೀಡಿದ್ದು, ಸಿಂಗ್ ಅವರಿಗೆ ಅವರು ಉದ್ದೇಶಪೂರ್ವಕವಾಗಿಯೇ ಈ ರೀತಿ ಮಾಡುತ್ತಿದ್ದರು ಎಂದು ಹೇಳಿದ್ದಾರೆ.

ಮಹಿಳಾ ಕುಸ್ತಿಪಟು ನೀಡಿದ ದೂರನ್ನು ಉಲ್ಲೇಖಿಸಿದ ವಕೀಲರು, ತಜಕಿಸ್ತಾನದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸಿಂಗ್ ಅವರು ಮಹಿಳಾ ಕುಸ್ತಿಪಟುವನ್ನು ಕೋಣೆಗೆ ಕರೆದು ಬಲವಂತವಾಗಿ ತಬ್ಬಿಕೊಂಡಿದ್ದರು. ಇದಕ್ಕೆ ಆಕೆ ವಿರೋಧಿಸಿದಾಗ ಕುಸ್ತಿಪಟುವಿಗೆ ನಾನು ನಿನ್ನ ‘ಅಪ್ಪನಂತೆ’ ಅದಕ್ಕಾಗಿ ಈ ರೀತಿ ಮಾಡಿದ್ದೇನೆ ಎಂದು ಹೇಳಿದ್ದಾರೆ. ಈ ಘಟನೆ ನೋಡಿದರೆ ಅವರು ಉದ್ದೇಶಪೂರ್ವಕವಾಗಿಯೇ ಮಾಡಿದ್ದಾರೆಂದು ಸ್ಪಷ್ಟವಾಗಿ ತಿಳಿದು ಬರುತ್ತದೆ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ.

ಕನಿಷ್ಠ ಎರಡು ಸಂದರ್ಭಗಳಲ್ಲಿ ಕ್ರೀಡೆಗೆ ಸಂಬಂಧಿಸಿದ ಸಹಾಯ ಮಾಡಲು ಸಿಂಗ್ ಲೈಂಗಿಕವಾಗಿ ಸಹಕರಿಸುವಂತೆ ಒತ್ತಾಯಿಸಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ. ದೂರುದಾರ ಕ್ರೀಡಾಪಟುಗಳು ಲೈಂಗಿಕ ಕಿರುಕುಳದ 15 ಘಟನೆಗಳನ್ನು ಕೂಡ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಒಲಿಂಪಿಕ್ ಪದಕ ವಿಜೇತರಾದ ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾ ಮತ್ತು ಎರಡು ಬಾರಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತ ವಿನೇಶ್ ಫೋಗಟ್ ಸೇರಿದಂತೆ ಭಾರತದ ಅಗ್ರ ಕುಸ್ತಿಪಟುಗಳು ಜನವರಿಯಲ್ಲಿ ಸಿಂಗ್ ವಿರುದ್ಧ ಮೊದಲು ಪ್ರತಿಭಟನೆಯನ್ನು ಪ್ರಾರಂಭಿಸಿದ್ದರು. ಆರೋಪಗಳ ತನಿಖೆಗಾಗಿ ರಚಿಸಲಾಗಿದ್ದ ಮೇಲ್ವಿಚಾರಣಾ ಸಮಿತಿಯು ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಏಪ್ರಿಲ್‌ನಲ್ಲಿ ಪ್ರತಿಭಟನೆ ಪುನರಾರಂಭಿಸಿದ್ದರು.

ಏಪ್ರಿಲ್‌ನಲ್ಲಿ ಸುಪ್ರೀಂ ಕೋರ್ಟ್ ಈ ವಿಷಯದಲ್ಲಿ ಮಧ್ಯಪ್ರವೇಶಿಸಿದ ನಂತರ ದೆಹಲಿ ಪೊಲೀಸರು ಸಿಂಗ್ ವಿರುದ್ಧ ಪ್ರಥಮ ಮಾಹಿತಿ ವರದಿಯನ್ನು ದಾಖಲಿಸಿದ್ದಾರೆ. ಜೂನ್ 15 ರಂದು ಸಿಂಗ್ ವಿರುದ್ಧ 1,000 ಪುಟಗಳ ಆರೋಪಪಟ್ಟಿ ಸಲ್ಲಿಸಲಾಗಿತ್ತು.

Leave a comment

Your email address will not be published. Required fields are marked *

eMedia Kannada  @2025. All Rights Reserved.