• Home  
  •   ಕೇಂದ್ರದ ತಪ್ಪು ನೀತಿಗಳೇ ಬೆಲೆ ಏರಿಕೆಗೆ ಕಾರಣ : ಮುಖ್ಯಮಂತ್ರಿ ಸಿದ್ದರಾಮಯ್ಯ (The Centre’s wrong policies are the reason for the price hike: Chief Minister Siddaramaiah)
- ರಾಜಕೀಯ

  ಕೇಂದ್ರದ ತಪ್ಪು ನೀತಿಗಳೇ ಬೆಲೆ ಏರಿಕೆಗೆ ಕಾರಣ : ಮುಖ್ಯಮಂತ್ರಿ ಸಿದ್ದರಾಮಯ್ಯ (The Centre’s wrong policies are the reason for the price hike: Chief Minister Siddaramaiah)

Share:   ಕೇಂದ್ರದ ತಪ್ಪು ನೀತಿಗಳೇ ಬೆಲೆ ಏರಿಕೆಗೆ ಕಾರಣ : ಮುಖ್ಯಮಂತ್ರಿ ಸಿದ್ದರಾಮಯ್ಯ  ಬಿಜೆಪಿಗೆ ನಮ್ಮ ಸರ್ಕಾರವನ್ನು ಪ್ರಶ್ನಿಸುವ ನೈತಿಕತೆ ಇಲ್ಲ  (Belagavi) ಬೆಳಗಾವಿ, ಏಪ್ರಿಲ್ 13: ಕೇಂದ್ರದ ಬಿಜೆಪಿಯ ತಪ್ಪು ನೀತಿಗಳಿಂದಾಗಿ ಅಗತ್ಯ ಸಾಮಾಗ್ರಿಗಳ ಬೆಲೆ ಏರಿಕೆ ಹೆಚ್ಚಿದ್ದು, ಬಿಜೆಪಿಯವರು ಸರ್ಕಾರವನ್ನು ಪ್ರಶ್ನಿಸುವ ನೈತಿಕತೆ ಹೊಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದರು.  ರಾಜ್ಯಾದ್ಯಂತ ಬಿಜೆಪಿಯವರು ಜನಾಕ್ರೋಶ ಯಾತ್ರೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪೆಟ್ರೋಲ್ […]

 (Belagavi) ಬೆಳಗಾವಿ, ಏಪ್ರಿಲ್ 13: ಕೇಂದ್ರದ ಬಿಜೆಪಿಯ ತಪ್ಪು ನೀತಿಗಳಿಂದಾಗಿ ಅಗತ್ಯ ಸಾಮಾಗ್ರಿಗಳ ಬೆಲೆ ಏರಿಕೆ ಹೆಚ್ಚಿದ್ದು, ಬಿಜೆಪಿಯವರು ಸರ್ಕಾರವನ್ನು ಪ್ರಶ್ನಿಸುವ ನೈತಿಕತೆ ಹೊಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದರು.

 ರಾಜ್ಯಾದ್ಯಂತ ಬಿಜೆಪಿಯವರು ಜನಾಕ್ರೋಶ ಯಾತ್ರೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪೆಟ್ರೋಲ್ , ಡೀಸೆಲ್, ಗ್ಯಾಸ್ ಬೆಲೆ ಸೇರಿದಂತೆ ಅವಶ್ಯಕ ವಸ್ತುಗಳ ಬೆಲೆ ಏರಲು ಕಾರಣ ಕೇಂದ್ರದ ಬಿಜೆಪಿ ಸರ್ಕಾರದವರೇ. ರಾಜ್ಯಸರ್ಕಾರ ಹೆಚ್ಚಿಸಿರುವ ಹಾಲಿನ ದರದಿಂದ ರೈತರಿಗೆ ಲಾಭ ಹೋಗುತ್ತದೆ. ಪೆಟ್ರೋಲ್ ಹಾಗೂ ಡೀಸೆಲ್ ನ ಕಚ್ಚಾ ತೈಲದ ಬೆಲೆಯ ಮೇಲೆ ದರ ನಿಗದಿಯಾಗುತ್ತದೆ.

  ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಕಾಲದಲ್ಲಿ ಒಂದು ಬ್ಯಾರೆಲ್ ಕಚ್ಚಾ ತೈಲಕ್ಕೆ 120 ಡಾಲರ್ ಇದ್ದು, ಈಗ 65 ಡಾಲರ್ ಗೆ ಇಳಿದಿದೆ. ಅಂದು ಗ್ಯಾಸ್ ಸಿಲಿಂಡರ್ ಬೆಲೆ 400 ರೂ. ಇದ್ದು, 800 ರೂ. ಕ್ಕೂ ಮೀರಿದೆ. ಆದರೂ ಪೆಟ್ರೋಲ್ ಡೀಸೆಲ್ ಬೆಲೆಯನ್ನು ಕೇಂದ್ರ ಸರ್ಕಾರ ಹೆಚ್ಚಿಸಿರುವ ಬಗ್ಗೆ ಜನರು ಪ್ರಶ್ನೆ ಕೇಳಬೇಕಿದೆ.

ಸರ್ಕಾರ ಆರ್ಥಿಕ ದಿವಾಳಿಯಾಗಿದೆ ಎಂಬ ಬಿಜೆಪಿಯವರ ಆರೋಪಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ,  ಬಿಜೆಪಿಯವರ ಕಾಲದಲ್ಲಿ ಅನುದಾನವಿಲ್ಲದಿದ್ದರೂ, ಕಾಮಗಾರಿಗಳಿಗೆ ಮಂಜೂರಾತಿ ನೀಡಿ, ಟೆಂಡರ್ ಪ್ರಕ್ರಿಯೆ ಕೈಗೊಂಡಿದ್ದರು. ಈಗ ನಮಗೆ ಪಾಠ ಹೇಳುತ್ತಿದ್ದು, ಆರ್ಥಿಕ ದಿವಾಳಿಯಾಗಿದ್ದರೆ, ಅದಕ್ಕೆ ಬಿಜೆಪಿಯವರೇ ಕಾರಣ ಎಂದರು.

ಗ್ಯಾರಂಟಿಗಳಿಂದಲೇ ಆರ್ಥಿಕತೆ ಹಾಳಾಗಿದೆ ಎಂದು ಬಿಜೆಪಿ ಸಂಸದ ಜಗದೀಶ್ ಶೆಟ್ಟರ್ ಹೇಳಿರುವ ಬಗ್ಗೆ ಉತ್ತರ ನೀಡುತ್ತಾ, ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್ ಅವರ ಸರ್ಕಾರದ ಅವಧಿಯಲ್ಲಿಯೇ ರಾಜ್ಯದ ಆರ್ಥಿಕತೆ ಕುಸಿದಿತ್ತು. ನಾವು  ಹಿಂದಿನ ವರ್ಷಕ್ಕಿಂತ ಈ ಸಾಲಿನ ಬಜೆಟ್ ನ ಪ್ರಮಾಣ ಸುಮಾರು 38 ಸಾವಿರ ಕೋಟಿಯಷ್ಟು ಹೆಚ್ಚಿಸಲಾಗಿದೆ. ಇದು ನಮ್ಮ ಸರ್ಕಾರದ ಆರ್ಥಿಕ ದಿವಾಳಿತನವೇ ಎಂದು ಪ್ರಶ್ನಿಸಿದರು.

ನರೇಂದ್ರ ಮೋದಿಯವರು ಅಧಿಕಾರಕ್ಕೆ ಬರುವ ಮುಂಚೆ ದೇಶದ ಮೇಲೆ 5311000 ಕೋಟಿ ಸಾಲವಿತ್ತು. ಆದರೆ ಈಗ 200 ಲಕ್ಷ ಕೋಟಿಗೆ ಸಾಲ ಹೆಚ್ಚಿದೆ. ದೇಶದ ಸಾಲ ಮೊತ್ತ ನಾಲ್ಕು ಪಟ್ಟು ಹೆಚ್ಚಲು ನರೇಂದ್ರ ಮೋದಿಯವರೇ ಕಾರಣ ಎಂದರು.

ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳುವ ಸಲುವಾಗಿ ಜಾತಿಗಣತಿಯನ್ನು ಮುನ್ನಲೆಗೆ ತಂದಿರುವುದಾಗಿ ಜಗದೀಶ್ ಶೆಟ್ಟರ್ ತಿಳಿಸಿರುವ ಬಗ್ಗೆ  ಪ್ರತಿಕ್ರಿಯೆ ನೀಡುತ್ತಾ, ಅವರು ಮುಖ್ಯಮಂತ್ರಿಯಾಗಿ, ವಿರೋಧ ಪಕ್ಷದ ನಾಯಕರಾಗಿಯೂ ಅಸಮರ್ಥರಾಗಿದ್ದರು. ಕಾಂಗ್ರೆಸ್ ಪಕ್ಷಕ್ಕೆ ವಲಸೆ ಬಂದಾಗ ಬಿಜೆಪಿಯವರ ವಿರೋಧವೇ ಹಲವು ಹೇಳಿಕೆಗಳನ್ನು ನೀಡಿದ್ದರು. ಜಾತಿಗಣತಿ ಜಾರಿಗೆ ತರಬೇಕೆಂಬುದು ಕಾಂಗ್ರೆಸ್ ನ ಭರವಸೆಯಾಗಿದೆ. ಒಂದು ಕುಟುಂಬದಲ್ಲಿ ಆರ್ಥಿಕವಾಗಿ, ಸಾಮಾಜಿಕವಾದ ಪರಿಸ್ಥಿತಿಯ ಬಗ್ಗೆ ಮಾಹಿತಿ ತಿಳಿಯುವುದು ಅವಶ್ಯಕ. ಸ್ವಾತಂತ್ರ್ಯ ನಂತರ ಜಾತಿಗಣತಿ ನಡೆಯದೇ, ಅನೇಕ ನ್ಯಾಯಾಲಯಗಳಲ್ಲಿ ಈ ಬಗ್ಗೆ ಮಾಹಿತಿ ಕೇಳಲಾಗಿತ್ತು.  ಆದ್ದರಿಂದ ಜಾತಿಗಣತಿ ಮಾಡಬೇಕಾದ್ದು ಅಗತ್ಯ ಎಂದರು.

 ಬಿಜೆಪಿಯವರು ಜಾತಿಗಣತಿಯನ್ನು ಸಮರ್ಪಕವಾಗಿ ನಡೆಸಲಾಗಿಲ್ಲ ಎಂದು ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸಮೀಕ್ಷೆಯನ್ನು ಶೇ. 95 ರಷ್ಟು ನಿಖರವಾಗಿ ನಡೆಸಲಾಗಿದೆ. ಶೇ. 98 ರಷ್ಟು ನಿಖರವಾಗಿ ಗ್ರಾಮಾಂತರ ಹಾಗೂ ಶೇ.96 ರಷ್ಟು ನಿಖರವಾಗಿ ನಗರ ಪ್ರದೇಶಗಳಲ್ಲಿ ನಡೆಸಲಾಗಿದೆ. 1,01,60,000  ಜನರು ಈ ಸಮೀಕ್ಷೆಯಲ್ಲಿ ಭಾಗಿಯಾಗಿದ್ದು, ಸುಮಾರು 1,36,000 ಜನ ಶಿಕ್ಷಕರಿದ್ದರು. ಶಿಕ್ಷಕರಲ್ಲಿ ಹೆಚ್ಚಿನವರು ಸಾಮಾನ್ಯ ವರ್ಗದವರೇ ಆಗಿದ್ದು, ಸಮೀಕ್ಷೆಯನ್ನು ವೈಜ್ಞಾನಿಕವಾಗಿ ನಡೆಸಲಾಗಿದೆ.  ಜಾತಿಗಣತಿಯ ವರದಿಯನ್ನು ಸಚಿವ ಸಂಪುಟದಲ್ಲಿ ಚರ್ಚಿಸಿದ ನಂತರವಷ್ಟೇ ವಿಧಾನಸಭೆಯಲ್ಲಿ ಮಂಡಿಸಲು ಸಾಧ್ಯ ಎಂದರು.

 ಮಹಾರಾಷ್ಟ್ರ ಸರ್ಕಾರದವರು ಬೆಳಗಾವಿಯಲ್ಲಿ ಭವನವನ್ನು ನಿರ್ಮಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸರ್ಕಾರ ನವದೆಹಲಿಯಲ್ಲಿ ಕರ್ನಾಟಕ ಭವನವನ್ನು ನಿರ್ಮಿಸಿದೆ. ಒಕ್ಕೂಟ ವ್ಯವಸ್ಥೆಯಲ್ಲಿ ಇದಕ್ಕೆ ಅವಕಾಶವಿದೆ. ಆದರೂ ಮಹಾರಾಷ್ಟ್ರದವರು ನಮ್ಮ ಭೂಮಿಯನ್ನು ಆಕ್ರಮಿಸಿಕೊಳ್ಳಲು ಸಾಧ್ಯವಿಲ್ಲ. ಬೆಳಗಾವಿಯನ್ನು ಯಾವುದೇ ಕಾರಣಕ್ಕೂ ಬಿಟ್ಟುಕೊಡುವುದಿಲ್ಲ ಎಂದರು.

ಒಳ ಮೀಸಲಾತಿ ಜಾರಿಗೆ ತರಲು ನಾಗಮೋಹನ್‌ದಾಸ್‌  ಆಯೋಗ  ರಚಿಸಿ, ಎರಡು ತಿಂಗಳಲ್ಲಿ ವರದಿ ನೀಡಲು ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ ಆದಿ ದ್ರಾವಿಡ, ಆದಿ ಆಂದ್ರ, ಆದಿ ಕರ್ನಾಟಕ, ಎಸ್.ಸಿಗಳು ಸೇರಿದಂತೆ 102 ಜಾತಿಗಳಿವೆ. ಇವರಲ್ಲಿ ಯಾರು ಯಾವ ಜಾತಿಗೆ ಸೇರಿದ್ದಾರೆಂಬ ಬಗ್ಗೆ ಸ್ಪಷ್ಟತೆ ಸಿಗಬೇಕೆಂಬ ಕಾರಣಕ್ಕೆ ಸಮೀಕ್ಷೆ ನಡೆಸಲಾಗುತ್ತಿದೆ ಎಂದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.