• Home  
  • ಕೇರಳ ವಿಧಾನಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆ ವಿರುದ್ಧ ನಿರ್ಣಯ  
- ರಾಜಕೀಯ

ಕೇರಳ ವಿಧಾನಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆ ವಿರುದ್ಧ ನಿರ್ಣಯ  

Share: ಕೇರಳ ವಿಧಾನಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆ ವಿರುದ್ಧ ನಿರ್ಣಯ    ಕೇರಳ: ದೇಶದಲ್ಲಿ ಏಕರೂಪ ನಾಗರಿಕತೆ ಹೇರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ನಿರ್ಧಾರವನ್ನು ವಿರೋಧಿಸುವ ನಿರ್ಣಯವನ್ನು ಕೇರಳ ವಿಧಾನಸಭೆ ಸರ್ವಾನುಮತದಿಂದ ಅಂಗೀಕರಿಸಿದೆ. ಫೆಬ್ರವರಿಯಲ್ಲಿ, ಮಿಜೋರಾಂ ವಿಧಾನಸಭೆಯು ದೇಶದಲ್ಲಿ ಯುಸಿಸಿಯನ್ನು ಜಾರಿಗೊಳಿಸುವ ಯಾವುದೇ ಕ್ರಮವನ್ನು ವಿರೋಧಿಸುವ ಅಧಿಕೃತ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿತ್ತು. ಇದೀಗ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಏಕರೂಪ ನಾಗರಿಕ ಸಂಹಿತೆ ವಿರುದ್ಧ ಸದನದಲ್ಲಿ ನಿರ್ಣಯವನ್ನು ಮಂಡಿಸಿದರು. ಇದು ಕೇಂದ್ರ ಸರ್ಕಾರದ ಕಡೆಯಿಂದ ಏಕಪಕ್ಷೀಯ […]

ಕೇರಳ ವಿಧಾನಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆ ವಿರುದ್ಧ ನಿರ್ಣಯ  

 ಕೇರಳ: ದೇಶದಲ್ಲಿ ಏಕರೂಪ ನಾಗರಿಕತೆ ಹೇರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ನಿರ್ಧಾರವನ್ನು ವಿರೋಧಿಸುವ ನಿರ್ಣಯವನ್ನು ಕೇರಳ ವಿಧಾನಸಭೆ ಸರ್ವಾನುಮತದಿಂದ ಅಂಗೀಕರಿಸಿದೆ.

ಫೆಬ್ರವರಿಯಲ್ಲಿ, ಮಿಜೋರಾಂ ವಿಧಾನಸಭೆಯು ದೇಶದಲ್ಲಿ ಯುಸಿಸಿಯನ್ನು ಜಾರಿಗೊಳಿಸುವ ಯಾವುದೇ ಕ್ರಮವನ್ನು ವಿರೋಧಿಸುವ ಅಧಿಕೃತ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿತ್ತು.

ಇದೀಗ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಏಕರೂಪ ನಾಗರಿಕ ಸಂಹಿತೆ ವಿರುದ್ಧ ಸದನದಲ್ಲಿ ನಿರ್ಣಯವನ್ನು ಮಂಡಿಸಿದರು. ಇದು ಕೇಂದ್ರ ಸರ್ಕಾರದ ಕಡೆಯಿಂದ ಏಕಪಕ್ಷೀಯ ಮತ್ತು ಆತುರದ ಕ್ರಮ. ಸಂಘಪರಿವಾರದಿಂದ ಪ್ರೇರಿಸಲ್ಪಟ್ಟ ಏಕರೂಪ ನಾಗರಿಕ ಸಂಹಿತೆ ಸಂವಿಧಾನಿಕವಾಗಿಲ್ಲ, ಬದಲಿಗೆ ಅದು ಹಿಂದೂ ಕಾನೂನು ಪಠ್ಯ ಮನುಸ್ಮೃತಿ ಅನ್ನು ಆಧರಿಸಿದೆ ಎಂದು ಅವರು ವಾದಿಸಿದರು̤

ಈ ಏಕರೂಪ ನಾಗರಿಕ ಸಂಹಿತೆ ಬಗ್ಗೆ ಸಂಘ ಪರಿವಾರದವರು ಬಹಳ ಹಿಂದೆಯೇ ಸ್ಪಷ್ಟಪಡಿಸಿದ್ದಾರೆ. ಸಂವಿಧಾನದಲ್ಲಿ ಇರುವುದನ್ನು ಅವರು ಜಾರಿಗೆ ತರಲು ಪ್ರಯತ್ನಿಸುತ್ತಿಲ್ಲ. ಅದನ್ನು ತಪ್ಪಾಗಿ ಅರ್ಥೈಸುವ ಅಗತ್ಯವಿಲ್ಲ. ಕೇಂದ್ರದ ಆಡಳಿತಾರೂಢ ಬಿಜೆಪಿ ಸರ್ಕಾರವು ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ವಿಚ್ಛೇದನ ಕಾನೂನುಗಳನ್ನು ಅಪರಾಧೀಕರಿಸಿದೆ. ಆದರೆ ಮಹಿಳೆಯರ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಅಥವಾ ಶೋಷಿತರ ಕಲ್ಯಾಣಕ್ಕಾಗಿ ಕ್ರಮಗಳನ್ನು ಕೈಗೊಳ್ಳಲು ಏನನ್ನೂ ಮಾಡಿಲ್ಲ ಎಂದು ವಿಜಯನ್ ಪ್ರತಿಪಾದಿಸಿದರು.

ನಿರ್ಣಯವನ್ನು ಮುಖ್ಯಮಂತ್ರಿ ಮಂಡಿಸಿದ ನಂತರ ಎಡ ಸರ್ಕಾರದ ಕ್ರಮವನ್ನು ಸ್ವಾಗತಿಸಿದ ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷದ ಯುಡಿಎಫ್ ಹಲವಾರು ತಿದ್ದುಪಡಿಗಳು ಮತ್ತು ಮಾರ್ಪಾಡುಗಳನ್ನು ಸೂಚಿಸಿತು. ಸೂಚಿಸಿದ ಮಾರ್ಪಾಡುಗಳನ್ನು ಗಣನೆಗೆ ತೆಗೆದುಕೊಂಡ ನಂತರ, ಮುಖ್ಯಮಂತ್ರಿಗಳು ಅಂತಿಮಗೊಳಿಸಿದ ನಿರ್ಣಯವನ್ನು ಓದಿದರು.

   ಸಿಪಿಐ(ಎಂ) ನೇತೃತ್ವದ ಸರ್ಕಾರವು ಯುಸಿಸಿ ವಿರುದ್ಧ ರಾಜ್ಯದಲ್ಲಿ ಆಡಳಿತಾರೂಢ ಎಡಪಕ್ಷಗಳು ಮತ್ತು ವಿರೋಧ ಪಕ್ಷವಾದ ಯುಡಿಎಫ್ ಹಾಗೂ ರಾಜ್ಯದ ವಿವಿಧ ಧಾರ್ಮಿಕ ಸಂಘಟನೆಗಳು ನಡೆಸುತ್ತಿರುವ ಅಭಿಯಾನದ ನಡುವೆಯೇ ನಿರ್ಣಯವನ್ನು ಮಂಡಿಸಲು ನಿರ್ಧರಿಸಿತ್ತು.

2019ರ ಡಿಸೆಂಬರ್‌ನಲ್ಲಿ ಕೇರಳ ವಿಧಾನಸಭೆಯು ಪೌರತ್ವ ತಿದ್ದುಪಡೆ ಕಾಯ್ದೆ (ಸಿಎಎ) ವಿರುದ್ಧದ ನಿರ್ಣಯವನ್ನು ಅವಿರೋಧವಾಗಿ ಅಂಗೀಕರಿಸಿತ್ತು.

Leave a comment

Your email address will not be published. Required fields are marked *

eMedia Kannada  @2025. All Rights Reserved.