• Home  
  • ಕೊರಗ ಬುಡಕಟ್ಟು ಸಮುದಾಯದ ಯುವತಿಗೆ ಮೊತ್ತ ಮೊದಲ ಬಾರಿಗೆ ವೈದ್ಯಕೀಯ ಪದವಿ (A young woman from the Koraga tribal community receives a medical degree for the first time)
- CONGARTULATIONS

ಕೊರಗ ಬುಡಕಟ್ಟು ಸಮುದಾಯದ ಯುವತಿಗೆ ಮೊತ್ತ ಮೊದಲ ಬಾರಿಗೆ ವೈದ್ಯಕೀಯ ಪದವಿ (A young woman from the Koraga tribal community receives a medical degree for the first time)

Share: ಕೊರಗ ಬುಡಕಟ್ಟು ಸಮುದಾಯದ ಯುವತಿಗೆ ಮೊತ್ತ ಮೊದಲ ಬಾರಿಗೆ ವೈದ್ಯಕೀಯ ಪದವಿ ಉಳ್ಳೂರು ನಿವಾಸಿ ಗಣೇಶ್ ವಿ. ಮತ್ತು ಜಯಶ್ರೀ ದಂಪತಿಯ ಹಿರಿಯ ಪುತ್ರಿ ಡಾ.ಕೆ. ಸ್ನೇಹಾ  (Kundapura) ಕುಂದಾಪುರ: ಉಡುಪಿ ಜಿಲ್ಲೆಯ ಕೊರಗ ಬುಡಕಟ್ಟು ಸಮುದಾಯದ ಯುವತಿಯೊಬ್ಬರು ಮೊತ್ತ ಮೊದಲ ಬಾರಿಗೆ ವೈದ್ಯಕೀಯ ಪದವಿ ಪಡೆದು ಸಾಧನೆ ಮಾಡಿದ್ದಾರೆ.    ಕುಂದಾಪುರ ತಾಲೂಕಿನ ಉಳ್ಳೂರು ನಿವಾಸಿ ಗಣೇಶ್ ವಿ. ಮತ್ತು ಜಯಶ್ರೀ ದಂಪತಿಯ ಹಿರಿಯ ಪುತ್ರಿ ಡಾ.ಕೆ. ಸ್ನೇಹಾ ಅವರು ಎ.ಜೆ. ಮೆಡಿಕಲ್ ಕಾಲೇಜಿನಲ್ಲಿ […]

 (Kundapura) ಕುಂದಾಪುರ: ಉಡುಪಿ ಜಿಲ್ಲೆಯ ಕೊರಗ ಬುಡಕಟ್ಟು ಸಮುದಾಯದ ಯುವತಿಯೊಬ್ಬರು ಮೊತ್ತ ಮೊದಲ ಬಾರಿಗೆ ವೈದ್ಯಕೀಯ ಪದವಿ ಪಡೆದು ಸಾಧನೆ ಮಾಡಿದ್ದಾರೆ.

   ಕುಂದಾಪುರ ತಾಲೂಕಿನ ಉಳ್ಳೂರು ನಿವಾಸಿ ಗಣೇಶ್ ವಿ. ಮತ್ತು ಜಯಶ್ರೀ ದಂಪತಿಯ ಹಿರಿಯ ಪುತ್ರಿ ಡಾ.ಕೆ. ಸ್ನೇಹಾ ಅವರು ಎ.ಜೆ. ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ಪದವಿ ಪೂರೈಸಿ ಈಗ ನ್ಯೂಡೆಲ್ಲಿ ಯುನಿವರ್ಸಿಟಿ ಕಾಲೇಜ್ ನಲ್ಲಿ ಆಫ್ ಪದವಿ ಪಡೆಯುವ ಮೂಲಕ ಸಮುದಾಯದ ಕೀರ್ತಿ ಬೆಳಗಿದ್ದಾರೆ.

   ಬಾಲ್ಯದಿಂದಲೂ ಕಲಿಕೆಯಲ್ಲಿ ಚುರುಕಾಗಿದ್ದ ಸ್ನೇಹಾ ಪ್ರಾಥಮಿಕ ಶಾಲೆಯನ್ನು ಅಂಕೋಲಾ, ಕುಂದಾಪುರ, ಹೆಬ್ರಿಯಲ್ಲಿ ಮುಗಿಸಿದರು. ಈಕೆಯ ಪ್ರತಿಭೆ ಗುರುತಿಸಿದ ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಪಿಯುಸಿಗೆ ಉಚಿತವಾಗಿ ಶಿಕ್ಷಣ ವ್ಯವಸ್ಥೆ ಕಲ್ಪಿಸಿದ್ದರು. ಪಿಯುಸಿಯಲ್ಲಿ ಶೇ.96 ಅಂಕ ಪಡೆದು ಸಿಇಟಿಯಲ್ಲಿ 2,264 ಅಂಕ ಗಳಿಸಿದ ಅವರಿಗೆ ಸರಕಾರಿ ಕೋಟಾದಲ್ಲಿ ಮೆಡಿಕಲ್ ಸೀಟು ದೊರೆಯಿತು. ಆದರೆ, ತಮ್ಮೂರಿನ ಹತ್ತಿರದಲ್ಲೇ ಕಲಿಕೆ ಮಾಡಬೇಕೆಂಬ ಹೆತ್ತವರ ಇಚ್ಛೆಯಂತೆ ಮಂಗಳೂರಿನ ಏಜೆ ಮೆಡಿಕಲ್ ಕಾಲೇಜಿಗೆ ದಾಖಲಾದರು. ನ್ಯೂಡೆಲ್ಲಿ ಯುನಿವರ್ಸಿಟಿ ಕಾಲೇಜ್ ಆಫ್ ಮೆಡಿಕಲ್‌ ಸೈನ್ಸ್‌ನಲ್ಲಿ ಎಂಡಿ ಪದವಿ ಮುಗಿಸಿ ವೃತ್ತಿ ನಿರತರಾಗಿದ್ದಾರೆ.

   ಗಣೇಶ್ ವಿ. ತಾಲೂಕು ಕೊರಗ ಶ್ರೇಯೋಭಿವೃದ್ಧಿ ಸಮಿತಿ ಅಧ್ಯಕ್ಷರಾಗಿದ್ದು, ನಾಲ್ಕು ದಶಕಗಳಿಂದ ಸಮುದಾಯದ ಮಕ್ಕಳ ಕಲ್ಯಾಣಕ್ಕಾಗಿ ಕೆಲಸ ಮಾಡುತ್ತಿದ್ದಾರೆ. ಸಾಂಸ್ಕೃತಿಕ, ಕೊರಗ ಮಕ್ಕಳ ಶೈಕ್ಷಣಿಕ, ಸಾಮಾಜಿಕ ಉನ್ನತಿಗಾಗಿ ಕುಂಭಾಶಿಯಲ್ಲಿ ಕೊರಗ ಮಕ್ಕಳ ಮನೆ ಸ್ಥಾಪಿಸಿ ನಿರಂತರ ಸಮುದಾಯ ಜಾಗೃತಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಶಿಕ್ಷಕಿಯಾಗಿರುವ ಅವರ ಪತ್ನಿ ಜಯಶ್ರೀ ಕೂಡ ಸಮುದಾಯದ ಕಲ್ಯಾಣ ಕಾರ್ಯದಲ್ಲಿ ತೊಡಗಿಸಿಕೊಂಡವರು. ಅವರ ಕಿರಿಯ ಪುತ್ರಿ ಕೆ. ಸಾಕ್ಷಿ ಸಹ ಪ್ರತಿಭಾನ್ವಿತೆ. ಪ್ರಸ್ತುತ ಗುಜರಾತ್ ನ್ಯಾಶನಲ್ ಇನ್‌ಸ್ಟಿಟ್ಯೂಟ್ ಆಫ್ ಡಿಸೈನ್ಸ್‌ನಲ್ಲಿ ವಿದ್ಯಾರ್ಜನೆ ಮಾಡುತ್ತಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.