ಕೋಟ ಅಮೃತೇಶ್ವರಿ ದೇಗುಲಕ್ಕೆ ಕೋಟ ಶ್ರೀನಿವಾಸ ಪೂಜಾರಿ ಭೇಟಿ
(Kota) ಕೋಟ: ಇದೇ ಬರುವ ಎ.26 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಬುಧವಾರ ನಾಮಪತ್ರ ಸಲ್ಲಿಸಿದ ಬಳಿಕ ದಂಪತಿ ಸಮೇತರಾಗಿ ಹುಟ್ಟೂರಿನ ಗ್ರಾಮ ದೇವತೆ ಕೋಟ ಅಮೃತೇಶ್ವರಿ ಹಲವು ಮಕ್ಕಳ ತಾಯಿ ಸನ್ನಿದಾನಕ್ಕೆ ಭೇಟಿ ನೀಡಿ ಶ್ರೀ ದೇವಿಯ ದರ್ಶನ ಪಡೆದರು.
ಈ ವೇಳೆ ದೇಗುಲದ ಅರ್ಚಕರು ವಿಷೇಶ ಪೂಜೆ ಸಲ್ಲಿಸಿ ಪ್ರಸಾದ ವಿತರಿಸಿದರು.

