ಕೋಟ : ಕೇರಳದಿಂದ ಕೊಲ್ಲೂರಿಗೆ ಹೊರಟಿದ್ದ ಟಿಟಿ ವಾಹನ ಪಲ್ಟಿ – ಹಲವರಿಗೆ ಗಾಯ
(Kota) ಕೋಟ: ಟಿಟಿ ವಾಹನ ಪಲ್ಟಿ ಹೊಡೆದ ಪರಿಣಾಮ ಹಲವರು ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೋಟ ಹೈಸ್ಕೂಲ್ ಬಳಿ ಗುರುವಾರ ಮಧ್ಯಾಹ್ನ ಸಂಭವಿಸಿದೆ.
ಕೇರಳದಿಂದ ಕೊಲ್ಲೂರಿಗೆ ಪ್ರವಾಸಕ್ಕೆ ಹೊರಟ್ಟಿದ್ದ ಟಿಟಿ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರಿಗೆ ಹೊಡೆದು ರಾಷ್ಟ್ರೀಯ ಹೆದ್ದಾರಿ ಪಕ್ಕದ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಂದಕಕ್ಕೆ ಉರುಳಿದೆ.
ಈ ವೇಳೆ ವಾಹನದಲ್ಲಿ ಸುಮಾರು 15 ಜನ ಪ್ರಯಾಣಿಕರಿದ್ದು, ಅಪಘಾತದಲ್ಲಿ 10 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಜೀವನ್ ಮಿತ್ರ ನಾಗರಾಜ್ ಪುತ್ರನ್ ಅವರು ಆಂಬುಲೆನ್ಸ್ ನಲ್ಲಿ ಖಾಸಗಿ ಆಸ್ಪತ್ರೆಗೆ ಸಾಗಿಸಿದರು.
ಕೋಟ ಠಾಣಾ ಎಸ್ಸೈ ಸುಧಾ ಪ್ರಭು ಸಿಬ್ಬಂದಿಯೊಡನೆ ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

