ಕೋಟ: ಪಂಚವರ್ಣ ಮಹಿಳಾ ಮಂಡಲ ಸಾಧಕ ಮಹಿಳಾ ಪುರಸ್ಕಾರಕ್ಕೆ ರೇವತಿ ತೆಕ್ಕಟ್ಟೆ ಆಯ್ಕೆ
(Kota) ಕೋಟ: ಇಲ್ಲಿನ ಕೋಟದ ಪಂಚವರ್ಣ ಮಹಿಳಾ ಮಂಡಲ ಸಾಧಕ ಮಹಿಳಾ ಪುರಸ್ಕಾರಕ್ಕೆ ತೆಕ್ಕಟ್ಟೆ ಗ್ರಾ.ಪಂನ ಘನ ಹಾಗೂ ದ್ರವ ತ್ಯಾಜ್ಯ ಘಟಕದ ಮುಖ್ಯಸ್ಥೆ ರೇವತಿ ತೆಕ್ಕಟ್ಟೆ (Revathi Tekkatte) ಆಯ್ಕೆಮಾಡಲಾಗಿದೆ.
ಮಾತೃ ಸಂಸ್ಥೆ ಪಂಚವರ್ಣ ಯುವಕ ಮಂಡಲದ ಸಹಯೋಗದೊಂದಿಗೆ ವಿಶ್ವಮಹಿಳಾ ದಿನಾಚರಣೆ ಅಂಗವಾಗಿ ಶನಿವಾರ ರೇವತಿ ತೆಕ್ಕಟ್ಟೆ ಸ್ವಗೃಹದಲ್ಲಿ ಈ ಕಾರ್ಯಕ್ರಮ ಜರಗಿತು.
ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಶ್ರೀಮತಿ ಲಲಿತಾ ಪೂಜಾರಿ ಮತ್ತು ಸದಸ್ಯರು ಉಪಸ್ಥಿತರಿದ್ದರು.

