ಕೋಟ – ಲಕ್ಷ್ಮೀ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ
ಕೋಟ – ಲಕ್ಷ್ಮೀ ಸೋಮಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ
ಕೋಟ: ವಿದ್ಯಾರ್ಥಿಗಳಲ್ಲಿ ತಾಳ್ಮೆ ಮತ್ತು ತಮ್ಮ ಜೀವನದ ಗುರಿಯನ್ನು ತಲುಪಲು ಪೂರಕವಾದ ವರ್ತನೆಗಳನ್ನು ರೂಢಿಸಿಕೊಂಡಾಗ ಉತ್ತಮ ಸಾಧನೆಗಳನ್ನು ಮಾಡಲು ಸಾಧ್ಯವಿದೆ ಎಂದು ಸರಕಾರಿ ಪ್ರಥಮ ದರ್ಜೆ ಕಾಲೇಜು ತೆಂಕನಿಡಿಯೂರು ಇಲ್ಲಿನ ನಿವೃತ್ತ ಪ್ರಾಂಶುಪಾಲ ಬಾಲಕೃಷ್ಣ ಹೆಗ್ಡೆ ಹೇಳಿದರು.
ಲಕ್ಷಿ÷್ಮÃಸೋಮಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜು ಕೋಟ-ಪಡುಕರೆ ಇಲ್ಲಿ ಜರುಗಿದ ಕಾಲೇಜು ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದರು.
ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯ ಆನಂದ ಸಿ ಕುಂದರ್ ಶುಭಶಂಸನೆಗೈದು ಮಾತನಾಡಿ, ಈ ಸರ್ಕಾರಿ ಕಾಲೇಜಿನ ಸೌಲಭ್ಯಗಳ ಪ್ರಯೋಜನವನ್ನು ಸ್ಥಳೀಯ ಮಕ್ಕಳು ಹೆಚ್ಚಿನ ರೀತಿಯಲ್ಲಿ ಪಡೆಯುವಂತಾಗಲಿ ಎಂದು ಹಾರೈಸಿದರು.
ಕಾಲೇಜಿನ ಪ್ರಾಂಶುಪಾಲ ಪ್ರೊ. ಸುನೀತ ವಿಕಾಲೇಜಿನ ಚಟುವಟಿಕೆಗಳ ವರದಿ ಮಂಡನೆ ಮಾಡು ಕಾಲೇಜಿನ ಅಭಿವೃದ್ಧಿಯಲ್ಲಿ ಸಹಕರಿಸುತ್ತಿರುವ ಎಲ್ಲರಿಗೂ ಕೃತಜ್ಞತೆಯನ್ನು ಅರ್ಪಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ನ್ಯಾಕ್ ಪ್ರಕ್ರಿಯೆಯಲ್ಲಿ ಸಹಕರಿಸಿದ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಆನಂದಸಿ ಕುಂದರ್, ಕೋಟ ಗ್ರಾಮಪಂಚಾಯತ್ ಅಧ್ಯಕ್ಷ ಅಜಿತ್ ದೇವಾಡಿಗ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ರಮೇಶ್ ಹೆಚ್ ಕುಂದರ್, ಕಾಲೇಜು ಶಿಕ್ಷಕ ರಕ್ಷಕರ ಸಂಘದ ಅಧ್ಯಕ್ಷ ಜನಾರ್ಧನ ಆಚಾರ್ಯ, ಗೀತಾನಂದ ಸಮಾಜಕಾರ್ಯ ವಿಭಾಗದ ರವಿಕಿರಣ್ ಕೋಟ, ಹಾಗೂ ಉಪನ್ಯಾಸಕ ಅನಂತ ಕುಮಾರ ಸಿ.ಎಸ್, ಇವರಿಗೆ ಗೌರವಿಸಲಾಯಿತು.
ಕಾಲೇಜು ಮತ್ತು ಇತರ ಕಾಲೇಜುಗಳಲ್ಲಿ ಜರುಗಿದ ಸಾಂಸ್ಕöÈತಿಕ ಸ್ಪರ್ಧೆ, ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನಗಳಿಸಿದ ವಿದ್ಯಾರ್ಥಿಗಳನ್ನು ಈ ವೇಳೆ ಸನ್ಮಾನಿಸಲಾಯಿತು. ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಸುದಿನ, ಡಾ. ಸುಬ್ರಮಣ್ಯ ಎ, ಡಾ.ಮನೋಜ್ ಕುಮಾರ್ ಎಂ, ಮನೋಹರ್ ಬಿ, ರಾಜಣ್ಣಎಂ, ಡಾ. ಲೀಲಾವತಿಎನ್, ಮುರಳಿ ಎಂ.ಜಿ ಹಾಗೂ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಪ್ರಥಮ, ದ್ವಿತೀಯ ಹಾಗೂ ತೃತೀಯ ಪದವಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಹಾಗೂ ೨೦೨೧-೨೨ರಲ್ಲಿ ತೇರ್ಗಡೆಯಾಗಿ ವಿಶಿಷ್ಟ ಶ್ರೇಣಿಯಲ್ಲಿ ಅಂಕ ಪಡೆದ ಒಟ್ಟು ೭೬ ವಿದ್ಯಾರ್ಥಿಗಳಿಗೆ ಗೀತಾನಂದ ಫೌಂಡೇಶನ್ ಮಣೂರು ಪಡುಕರೆ ವತಿಯಿಂದ ನಗದು ಬಹುಮಾನವನ್ನು ನೀಡಲಾಯಿತು.
ಕಾಲೇಜು ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಶಂಕರನಾಯ್ಕ ಬಿ ಸ್ವಾಗತಿಸಿ, ವಿದ್ಯಾರ್ಥಿ ಸಂಘದ ಅಧ್ಯಕ್ಷ ನಂದನ್, ತೃತೀಯ ಬಿ.ಕಾಂವAದನಾರ್ಪಣೆ ಸಲ್ಲಿಸಿದರು. ಕಾರ್ಯಕ್ರಮವನ್ನು ವಾಣಿಜ್ಯ ಶಾಸ್ತçವಿಭಾಗ ಸಹಾಯಕ ಪ್ರಾಧ್ಯಾಪಕ ಪುರುಷೋತ್ತಮ ನಿರೂಪಿಸಿದರು.
ಲಕ್ಷಿ÷್ಮÃಸೋಮಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜು ಕೋಟ-ಪಡುಕರೆ ಇಲ್ಲಿ ಜರುಗಿದ ಕಾಲೇಜು ವಾರ್ಷಿಕೋತ್ಸವ ಸಮಾರಂಭವನ್ನು ಉದ್ದೇಶಿಸಿ ಸರಕಾರಿ ಪ್ರಥಮ ದರ್ಜೆ ಕಾಲೇಜು ತೆಂಕನಿಡಿಯೂರು ಇಲ್ಲಿನ ನಿವೃತ್ತ ಪ್ರಾಂಶುಪಾಲ ಬಾಲಕೃಷ್ಣ ಹೆಗ್ಡೆ ಮಾತನಾಡಿದರು.
ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಆನಂದಸಿ ಕುಂದರ್,ಕೋಟ ಗ್ರಾಮಪಂಚಾಯತ್ ಅಧ್ಯಕ್ಷ ಅಜಿತ್ ದೇವಾಡಿಗ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ರಮೇಶ್ ಹೆಚ್ ಕುಂದರ್, ಕಾಲೇಜು ಶಿಕ್ಷಕ ರಕ್ಷಕರ ಸಂಘದ ಅಧ್ಯಕ್ಷ ಜನಾರ್ಧನ ಆಚಾರ್ಯ ಮತ್ತಿತರರು ಇದ್ದರು.