ಟೀಂ ಇಂಡಿಯಾ ಆಟಗಾರ ಕೆ.ಎಲ್ ರಾಹುಲ್ ಇಂದು ಧರ್ಮಸ್ಥಳ ಮಂಜುನಾಥನ ಸನ್ನಿಧಾನಕ್ಕೆ ಭೇಟಿ ನೀಡಿದ್ದಾರೆ. ಮಂಜುನಾಥನ ಸ್ವಾಮಿಯ ದರ್ಶನ ಪಡೆದ ಕೆ.ಎಲ್ ರಾಹುಲ್ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆಯನ್ನೂ ಸಲ್ಲಿಸಿದ್ದಾರೆ.
ದೇವರ ದರ್ಶನದ ಬಳಿಕ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವಿರೇಂದ್ರ ಹೆಗ್ಗಡೆಯವರ ಜೊತೆ ಕೆ.ಎಲ್ ರಾಹುಲ್ ಕೆಲ ಕಾಲ ಮಾತುಕತೆ ನಡೆಸಿದರು.
ಕೆ ಎಲ್ ರಾಹುಲ್ಗೆ ವಿರೇಂದ್ರ ಹೆಗ್ಗಡೆಯವರು ಶಾಲು ಹೊದೆಸಿ ಬೆಳ್ಳಿ ನಾಣ್ಯ ಹಾಗೂ ಗೋವಿನ ಕಂಚಿನ ಪ್ರತಿಮೆ ನೀಡಿ ಗೌರವಿಸಿದ್ದಾರೆ.
ಇದೇ ವರ್ಷ ಜನವರಿ 23ರಂದು ಕ್ರಿಕೆಟಿಗ ಕೆ.ಎಲ್ ರಾಹುಲ್ ಬಾಲಿವುಡ್ ನಟ ಮಂಗಳೂರು ಮೂಲದ ಸುನೀಲ್ ಶೆಟ್ಟಿ ಪುತ್ರಿ ಆಥಿಯಾ ಶೆಟ್ಟಿಯೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ.

