• Home  
  •  ಕ್ರೀಡಾಪಟುಗಳು ರಾಜ್ಯ ಮಟ್ಟದಲ್ಲಿ ಕೀರ್ತಿ ತರಲಿ: ಯಶ್ ಪಾಲ್ ಸುವರ್ಣ Let the athletes bring glory at the state level : MLA Yash Pal Suvarna)
- ಕ್ರೀಡೆ - ಸನ್ಮಾನ, ಅಭಿನಂದನೆ

 ಕ್ರೀಡಾಪಟುಗಳು ರಾಜ್ಯ ಮಟ್ಟದಲ್ಲಿ ಕೀರ್ತಿ ತರಲಿ: ಯಶ್ ಪಾಲ್ ಸುವರ್ಣ Let the athletes bring glory at the state level : MLA Yash Pal Suvarna)

Share: ಕ್ರೀಡಾಪಟುಗಳು ರಾಜ್ಯ ಮಟ್ಟದಲ್ಲಿ ಕೀರ್ತಿ ತರಲಿ: ಶಾಸಕ ಯಶ್ ಪಾಲ್ ಸುವರ್ಣ ಉಡುಪಿಯಲ್ಲಿ ವಿಭಾಗ ಮಟ್ಟದ ದಸರಾ ಕ್ರೀಡಾಕೂಟ  ಉದ್ಘಾಟಿಸಿದ ಶಾಸಕರು (Udupi) ಉಡುಪಿ: ತಾಲೂಕು ಹಾಗೂ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ವಿಜೇತರಾದ ಕ್ರೀಡಾಪಟುಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದು, ಮುಂದಿನ ದಿನಗಳಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಮಿಂಚಿ ಅವರ ತವರು ಜಿಲ್ಲೆಗಳ ಗೌರವ ಹೆಚ್ಚಿಸುವ ಕಾರ್ಯ ಮಾಡಲಿ ಎಂದು ಶಾಸಕ ಯಶ್ಪಾಲ್‌ ಪಾಲ್ ಸುವರ್ಣ  ಹೇಳಿದರು.     ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ […]

(Udupi) ಉಡುಪಿ: ತಾಲೂಕು ಹಾಗೂ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ವಿಜೇತರಾದ ಕ್ರೀಡಾಪಟುಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದು, ಮುಂದಿನ ದಿನಗಳಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಮಿಂಚಿ ಅವರ ತವರು ಜಿಲ್ಲೆಗಳ ಗೌರವ ಹೆಚ್ಚಿಸುವ ಕಾರ್ಯ ಮಾಡಲಿ ಎಂದು ಶಾಸಕ ಯಶ್ಪಾಲ್‌ ಪಾಲ್ ಸುವರ್ಣ  ಹೇಳಿದರು.

    ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ಕ್ರೀಡಾ ಪ್ರಾಧಿಕಾರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟವನ್ನು ಉದ್ಘಾಟಿಸಿ, ಬಹುಮಾನ ವಿತರಿಸಿ ಅವರು ಮಾತನಾಡಿದರು.

    ವಿವಿಧ ಜಿಲ್ಲೆಗಳಿಂದ ಉಡುಪಿಗೆ ಆಗಮಿಸುವ ಕ್ರೀಡಾಳುಗಳಿಗೆ ಜಿಲ್ಲೆಯ ಪ್ರೋತ್ಸಾಹವಿದೆ. ಕ್ರೀಡಾಂಗಣದ ಸೌಲಭ್ಯಗಳನ್ನು ಉಪಯೋಗಿಸಿ ದೇಶ ವಿದೇಶಗಳಲ್ಲಿ ಹೆಸರು ಮಾಡಲಿ ಎಂದರು.

    ಉಡುಪಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಷನ್ ಅಧ್ಯಕ್ಷ ಹರಿಪ್ರಸಾದ್ ರೈ,  ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಡಾ. ರೋಷನ್ ಶೆಟ್ಟಿ, ವಿವಿಧ ಜಿಲ್ಲೆಗಳ ಕ್ರೀಡಾ ಸಂಚಾಲಕರು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.