ಕ್ಷೇತ್ರ ಧರ್ಮಸ್ಥಳ ಗ್ರಾ. ಯೋಜನೆ : ಹೇರೂರು ಕಾರ್ಯಕ್ಷೇತ್ರದಲ್ಲಿ ಸ್ವಉದ್ಯೋಗ ಪ್ರೇರಣಾ ಕಾರ್ಯಕ್ರಮ
ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ನಡೆದ ಶಿಬಿರ
(Kaup) ಕಾಪು: ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಕಾಪು ತಾಲೂಕು ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಕಾಪು ವಲಯದ ಹೇರೂರು ಕಾರ್ಯಕ್ಷೇತ್ರದಲ್ಲಿ ಸ್ವಉದ್ಯೋಗ ಪ್ರೇರಣಾ ಕಾರ್ಯಕ್ರಮ ನೆರವೇರಿತು.
ಕಾರ್ಯಕ್ರಮದಲ್ಲಿ ರುಟ್ ಸೆಟ್ ಸಂಸ್ಥೆಯ ಉಪನ್ಯಾಸಕರಾದ ಸಂತೋಷ್ ಅವರು ಭಾಗವಹಿಸಿ ರುಟ್ ಸೆಟ್ ಸಂಸ್ಥೆಯಲ್ಲಿ ಉಚಿತವಾಗಿ ನೀಡುತ್ತಿರುವ ತರಬೇತಿಗಳ ಬಗ್ಗೆ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಎಲ್ಲಾ ಮಹಿಳೆಯರು ಸ್ವಾವಲಂಬಿಯಾಗಿ ಬದುಕಬೇಕೆಂಬ ಉದ್ದೇಶದಿಂದ ಮಹಿಳೆಯರಿಗಾಗಿ ತರಬೇತಿಯನ್ನು ನೀಡುತ್ತಿದ್ದು, ಈ ತರಬೇತಿಯ ಪ್ರಯೋಜನವನ್ನು ಎಲ್ಲರೂ ಪಡೆದುಕೊಳ್ಳಿ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ವಿಶಾಲಾಕ್ಷಿ ಆಚಾರ್ಯ, ಒಕ್ಕೂಟದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

