• Home  
  • ಖಾಸಗಿ ಸ್ಲೀಪರ್ ಕೋಚ್ ಬಸ್ಸಿಗೆ ಬೆಂಕಿ: 2೦ ಕ್ಕೂ ಹೆಚ್ಚು ಪ್ರಯಾಣಿಕರು ಸುಟ್ಟು ಕರಕಲು (Private sleeper coach bus catches fire: More than 20 passengers burnt to death)
- Crime

ಖಾಸಗಿ ಸ್ಲೀಪರ್ ಕೋಚ್ ಬಸ್ಸಿಗೆ ಬೆಂಕಿ: 2೦ ಕ್ಕೂ ಹೆಚ್ಚು ಪ್ರಯಾಣಿಕರು ಸುಟ್ಟು ಕರಕಲು (Private sleeper coach bus catches fire: More than 20 passengers burnt to death)

Share: ಖಾಸಗಿ ಸ್ಲೀಪರ್ ಕೋಚ್ ಬಸ್ಸಿಗೆ ಬೆಂಕಿ: 2೦ ಕ್ಕೂ ಹೆಚ್ಚು ಪ್ರಯಾಣಿಕರು ಸುಟ್ಟು ಕರಕಲು ಪ್ರಧಾನಿ ಮೋದಿ, ಆಂದ್ರ ಸಿಎಂ ಚಂದ್ರಬಾಬು ನಾಯ್ಡು ಸಂತಾಪ (Karnool) ಕರ್ನೂಲ್ : ಇಂದು ಬೆಳಗ್ಗಿನ ಜಾವ  ಕರ್ನೂಲ್ ಹೊರವಲಯದಲ್ಲಿರುವ ಚಿನ್ನೇಕೂರಿನಲ್ಲಿ ಬೈಕಿಗೆ ಡಿಕ್ಕಿ ಹೊಡೆದು ಖಾಸಗಿ ಬಸ್ಸೊಂದು ಹೊತ್ತಿ ಉರಿದಿದ್ದು, 25 ಕ್ಕೂ ಹೆಚ್ಚು ಪ್ರಯಾಣಿಕರು ಸುಟ್ಟು ಕರಕಲಾಗಿದ್ದು, ಹಲವಾರು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.      ಸುಮಾರು 40 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಖಾಸಗಿ ಸ್ಲೀಪರ್ ಕೋಚ್, ಬೆಳಗಿನ […]

(Karnool) ಕರ್ನೂಲ್ : ಇಂದು ಬೆಳಗ್ಗಿನ ಜಾವ  ಕರ್ನೂಲ್ ಹೊರವಲಯದಲ್ಲಿರುವ ಚಿನ್ನೇಕೂರಿನಲ್ಲಿ ಬೈಕಿಗೆ ಡಿಕ್ಕಿ ಹೊಡೆದು ಖಾಸಗಿ ಬಸ್ಸೊಂದು ಹೊತ್ತಿ ಉರಿದಿದ್ದು, 25 ಕ್ಕೂ ಹೆಚ್ಚು ಪ್ರಯಾಣಿಕರು ಸುಟ್ಟು ಕರಕಲಾಗಿದ್ದು, ಹಲವಾರು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

     ಸುಮಾರು 40 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಖಾಸಗಿ ಸ್ಲೀಪರ್ ಕೋಚ್, ಬೆಳಗಿನ ಜಾವ 3.30 ರ ಸುಮಾರಿಗೆ ವಿರುದ್ಧ ದಿಕ್ಕಿನಲ್ಲಿ ಬಂದಿದ್ದ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡಿದೆ.

ಬಸ್ಸಿನಲ್ಲಿದ್ದ ಸುಮಾರು 20 ಜನರನ್ನು ರಕ್ಷಿಸಲಾಗಿದೆ ಎಂದು ತಿಳಿದು ಬಂದಿದೆ.

  ಪ್ರಧಾನಿ ಮೋದಿ ಸಂತಾಪ :

ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಸಂಭವಿಸಿದ ಬಸ್ ಬೆಂಕಿಯ ಘಟನೆಯಲ್ಲಿ ಜೀವಹಾನಿ ಸಂಭವಿಸಿದ  ಮತ್ತು ಗಾಯಗೊಂಡವರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ದುಃಖ ವ್ಯಕ್ತಪಡಿಸಿ, “ಈ ಕಷ್ಟದ ಸಮಯದಲ್ಲಿ ಸಂತ್ರಸ್ತ ಜನರು ಮತ್ತು ಅವರ ಕುಟುಂಬಗಳೊಂದಿಗೆ ನಾವಿದ್ದೇವೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಪ್ರಧಾನಿ X ನಲ್ಲಿ ಪೋಸ್ಟ್‌ ಮಾಡಿದ್ದಾರೆ.

 ಮೃತರ ಪ್ರತಿ ಸಂಬಂಧಿಕರಿಗೆ PMNRF ನಿಂದ ₹2 ಲಕ್ಷ ಪರಿಹಾರ ಮತ್ತು ಗಾಯಾಳುಗಳಿಗೆ 50,000 ರೂ. ನೀಡಲಾಗುವುದು,” ಎಂದು ಪ್ರಧಾನಿ ಮೋದಿ ಘೋಷಿಸಿದ್ದಾರೆ.

   ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಪ್ರತಿಕ್ರಯಿಸಿ, ಗಾಯಾಳುಗಳು ಮತ್ತು ಸಂತ್ರಸ್ತ ಕುಟುಂಬಗಳಿಗೆ ತಮ್ಮ ಸರ್ಕಾರ ಸಾಧ್ಯವಿರುವ ಎಲ್ಲ ಬೆಂಬಲವನ್ನು ನೀಡಲಿದೆ. “ಕರ್ನೂಲ್ ಜಿಲ್ಲೆಯ ಚಿನ್ನಾ ಟೇಕೂರ್ ಗ್ರಾಮದ ಬಳಿ ಸಂಭವಿಸಿದ ಭೀಕರ ಬಸ್ ಬೆಂಕಿ ಅಪಘಾತದ ಬಗ್ಗೆ ತಿಳಿದು ನನಗೆ ಆಘಾತವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಸಂತಾಪಗಳು” ಎಂದು ನಾಯ್ಡು ಅವರು X ನಲ್ಲಿ ಪೋಸ್ಟ್ ಮಾಡಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.