• Home  
  • ಗಾಂಧಿ ಜಯಂತಿ ಅಂಗವಾಗಿ ಗ್ರಾಮೀಣ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್ ನೇತೃತ್ವದಲ್ಲಿ ಕ್ರೀಡಾಕೂಟ (Sports meet organized by the Rural Congress and Women’s Congress to mark Gandhi Jayanti.)
- ಕ್ರೀಡೆ

ಗಾಂಧಿ ಜಯಂತಿ ಅಂಗವಾಗಿ ಗ್ರಾಮೀಣ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್ ನೇತೃತ್ವದಲ್ಲಿ ಕ್ರೀಡಾಕೂಟ (Sports meet organized by the Rural Congress and Women’s Congress to mark Gandhi Jayanti.)

Share:      ಗಾಂಧಿ ಜಯಂತಿ ಅಂಗವಾಗಿ ಗ್ರಾಮೀಣ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್ ನೇತೃತ್ವದಲ್ಲಿ ಕ್ರೀಡಾಕೂಟ ಹೆಜಮಾಡಿಯ ರಾಜೀವಗಾಂಧಿ ಕ್ರೀಡಾಂಗಣದಲ್ಲಿ ನಡೆದ ಕ್ರೀಡಾಕೂಟ  (Hejamadi) ಹೆಜಮಾಡಿ: ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್ ನೇತೃತ್ವದಲ್ಲಿ ಕಾಪು ಬ್ಲಾಕ್ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರಿಗಾಗಿ ಕ್ರಿಕೆಟ್ ಹಾಗೂ ಮಹಿಳೆಯರ ತ್ರೋಬಾಲ್ ಪಂದ್ಯಾಕೂಟವನ್ನು ಗಾಂಧಿ ಜಯಂತಿಯ ಅಂಗವಾಗಿ ಹೆಜಮಾಡಿಯ ರಾಜೀವಗಾಂಧಿ ಕ್ರೀಡಾಂಗಣದಲ್ಲಿಆಯೋಜಿಸಲಾಯಿತು.  ಈ ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿ ಕಾಪು “ಬ್ಲಾಕ್‌ನಿಂದ ಗ್ರಾಮೀಣ ಜೋಡೋ” ಕಾರ್ಯಕ್ರಮಕ್ಕೆ ಮಾಜಿ ಸಚಿವ ವಿನಯಕುಮಾರ್‌ ಸೊರಕೆ […]

 (Hejamadi) ಹೆಜಮಾಡಿ: ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್ ನೇತೃತ್ವದಲ್ಲಿ ಕಾಪು ಬ್ಲಾಕ್ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರಿಗಾಗಿ ಕ್ರಿಕೆಟ್ ಹಾಗೂ ಮಹಿಳೆಯರ ತ್ರೋಬಾಲ್ ಪಂದ್ಯಾಕೂಟವನ್ನು ಗಾಂಧಿ ಜಯಂತಿಯ ಅಂಗವಾಗಿ ಹೆಜಮಾಡಿಯ ರಾಜೀವಗಾಂಧಿ ಕ್ರೀಡಾಂಗಣದಲ್ಲಿಆಯೋಜಿಸಲಾಯಿತು.

 ಈ ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿ ಕಾಪು “ಬ್ಲಾಕ್‌ನಿಂದ ಗ್ರಾಮೀಣ ಜೋಡೋ” ಕಾರ್ಯಕ್ರಮಕ್ಕೆ ಮಾಜಿ ಸಚಿವ ವಿನಯಕುಮಾರ್‌ ಸೊರಕೆ ಚಾಲನೆ ನೀಡಿದರು.

 ಅವರು ಮಾತನಾಡಿ, ಗಾಂಧೀಜಿಯವರ ಸತ್ಯ, ಅಹಿಂಸೆ, ಏಕತೆ ಹಾಗೂ ಸಾಮರಸ್ಯದ ಸಂದೇಶವನ್ನು ಜನಸಾಮಾನ್ಯರೊಂದಿಗೆ ಹಂಚಿಕೊಳ್ಳುವುದರ ಜೊತೆಗೆ, ಗ್ರಾಮೀಣ ಪ್ರದೇಶಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಬಾಂಧವ್ಯ ಮತ್ತು ಸಂಘಟನಾ ಚಟುವಟಿಕೆಗಳನ್ನು ಮತ್ತಷ್ಟು ಬಲಪಡಿಸುವುದು “ಬ್ಲಾಕ್‌ನಿಂದ ಗ್ರಾಮೀಣ ಜೋಡೋ” ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ. ಕ್ರೀಡೆಯು ನಮ್ಮಲ್ಲಿ ಬಂಧುತ್ವವನ್ನು ಬೆಸೆಯುತ್ತದೆ ಎಂದರು.   

  ಕರ್ನಾಟಕ ಸರಕಾರದ ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಿ, ಯುವಜನರು ಹಾಗೂ ಪಕ್ಷದ ಕಾರ್ಯಕರ್ತರು ಕ್ರೀಡೆ ಮತ್ತು ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ಆರೋಗ್ಯಕರ ಹಾಗೂ ಸಂಘಟಿತ ಸಮಾಜ ನಿರ್ಮಾಣಕ್ಕೆ ಕೊಡುಗೆ ನೀಡಬೇಕು ಎಂದು ಹೇಳಿದರು.

ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್ ನೇತೃತ್ವದಲ್ಲಿ ನಡೆದ ಈ ಕ್ರೀಡಾಕೂಟದಲ್ಲಿ ಕಾಪು ಬ್ಲಾಕ್ ವ್ಯಾಪ್ತಿಯ ಕಾಂಗ್ರೆಸ್ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉತ್ಸಾಹದಿಂದ ಭಾಗವಹಿಸಿದರು.

ವಿಜೇತ ತಂಡಗಳಿಗೆ ಬಹುಮಾನ ವಿತರಣೆ

 ಕ್ರೀಡಾಕೂಟದ ಅಂತ್ಯದಲ್ಲಿ ವಿವಿಧ ಗ್ರಾಮೀಣ ಕಾಂಗ್ರೆಸ್ ತಂಡಗಳ ನಡುವೆ ನಡೆದ ಪಂದ್ಯಾವಳಿಯಲ್ಲಿ ವಿಜೇತ ಹಾಗೂ ರನ್ನರ್‌ಅಪ್ ತಂಡಗಳಿಗೆ ಗಣ್ಯರ ಸಮ್ಮುಖದಲ್ಲಿ ಬಹುಮಾನ ವಿತರಿಸಲಾಯಿತು.

 ಮಹಿಳೆಯರ ತ್ರೋಬಾಲ್ ಪಂದ್ಯಾವಳಿ:

 ಪ್ರಥಮ ಸ್ಥಾನ – ಶಿರ್ವ ಗ್ರಾಮೀಣ ಕಾಂಗ್ರೆಸ್, ದ್ವಿತೀಯ ಸ್ಥಾನ – ಹೆಜಮಾಡಿ ಗ್ರಾಮೀಣ ಕಾಂಗ್ರೆಸ್.

 ಕ್ರಿಕೆಟ್ ಪಂದ್ಯಾವಳಿ:

 ಪ್ರಥಮ ಸ್ಥಾನ – ಕೋಟೆ ಗ್ರಾಮೀಣ ಕಾಂಗ್ರೆಸ್

 ದ್ವಿತೀಯ ಸ್ಥಾನ – ಬೆಳ್ಳೆ ಗ್ರಾಮೀಣ ಕಾಂಗ್ರೆಸ್.

 ಈ ಸಂದರ್ಭದಲ್ಲಿ  ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವೈ. ಸುಕುಮಾರ್,  ವಿಧಾನ ಪರಿಷತ್‌ ಸದಸ್ಯ ಐವನ್ ಡಿಸೋಜಾ, ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ. ಗಫೂರ್, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು, ಕಾಪು ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಮೊಹಮ್ಮದ್ ನಿಯಾಜ್, ಕಾಪು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಶಾಂತಲತಾ ಶೆಟ್ಟಿ, ಕಾಪು ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ನವೀನ್ ಚಂದ್ರ ಸುವರ್ಣ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ದಿವಾಕರ್ ಶೆಟ್ಟಿ, ಕೆಪಿಸಿಸಿ ಕೋಆರ್ಡಿನೇಟರ್ ಅಬ್ದುಲ್ ಅಜೀಜ್, ಉಡುಪಿ ಜಿಲ್ಲಾ ಮೀನುಗಾರಿಕಾ ಘಟಕದ ಅಧ್ಯಕ್ಷರಾದ ವಿಶ್ವಾಸ್ ವಿ. ಅಮೀನ್, ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರಾದ ಪ್ರಭೋದ್‌ ಚಂದ್ರ, ಪಡುಬಿದ್ರಿ ಸಿಎ ಬ್ಯಾಂಕ್ ಅಧ್ಯಕ್ಷರಾದ ವೈ. ಸುಧೀರ್ ಕುಮಾರ್, ಕಾಪು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಸುಧೀರ್, ಕಾಂಗ್ರೆಸ್ ಪಕ್ಷದ ಮುಖಂಡರಾದ ಪ್ರಶಾಂತ್ ಜತ್ತಣ್ಣ, ಫಾರೂಕ್ ಚಂದ್ರನಗರ, ರಿಯಾಜ್ ಮುದರಂಗಡಿ, ರಚನ್ ಸಾಲಿಯಾನ್, ಕೇಶವ ಸಾಲಿಯಾನ್, ಶರೀಫ್ ಉಸ್ಮಾನ್,  ಸನ ಇಬ್ರಾಹಿಂ, ಸಂತೋಷ್ ಪಡುಬಿದ್ರಿ, ಕಬೀರ್ ಹೆಜಮಾಡಿ ಸೇರಿದಂತೆ ಹಲವಾರು ಕಾಂಗ್ರೆಸ್‌ ಕಾರ್ಯಕರ್ತರು ಉಪಸ್ಥಿತರಿದ್ದರು.              

Leave a comment

Your email address will not be published. Required fields are marked *

eMedia Kannada  @2025. All Rights Reserved.