• Home  
  • ‘ಗೃಹ ಲಕ್ಷ್ಮೀ’ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜೂ.16 ರಿಂದ ಪ್ರಾರಂಭ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
- ರಾಜಕೀಯ

‘ಗೃಹ ಲಕ್ಷ್ಮೀ’ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜೂ.16 ರಿಂದ ಪ್ರಾರಂಭ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Share: ಬೆಂಗಳೂರು: ರಾಜ್ಯ ವಿಧಾನ ಸಭೆ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕಾಂಗ್ರೆಸ್ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಒಂದಾಗಿರುವ ‘ಗೃಹ ಲಕ್ಷ್ಮೀ’ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜೂ.16 ಶುಕ್ರವಾರದಿಂದ ಆರಂಭಿಸುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕ ತಿಳಿಸಿದ್ದಾರೆ.  ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜೂ.16 ಶುಕ್ರವಾರದಿಂದ ಆರಂಭಿಸಲಾಗುವುದು. ಅರ್ಜಿ ಸಲ್ಲಿಸಲು ಯಾವುದೇ ಕೊನೆಯ ದಿನಾಂಕ ಇರುವುದಿಲ್ಲ. ಅರ್ಜಿ ಸಲ್ಲಿಸಲು ಪ್ರಕ್ರಿಯೆ ವರ್ಷ […]

ಬೆಂಗಳೂರು: ರಾಜ್ಯ ವಿಧಾನ ಸಭೆ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕಾಂಗ್ರೆಸ್ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಒಂದಾಗಿರುವ ‘ಗೃಹ ಲಕ್ಷ್ಮೀ’ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜೂ.16 ಶುಕ್ರವಾರದಿಂದ ಆರಂಭಿಸುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕ ತಿಳಿಸಿದ್ದಾರೆ.

 ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜೂ.16 ಶುಕ್ರವಾರದಿಂದ ಆರಂಭಿಸಲಾಗುವುದು. ಅರ್ಜಿ ಸಲ್ಲಿಸಲು ಯಾವುದೇ ಕೊನೆಯ ದಿನಾಂಕ ಇರುವುದಿಲ್ಲ. ಅರ್ಜಿ ಸಲ್ಲಿಸಲು ಪ್ರಕ್ರಿಯೆ ವರ್ಷ ಪೂರ್ತಿ ನಿರಂತರವಾಗಿರುತ್ತದೆ’, ‘ಈ ಬಗ್ಗೆ ಯಾವುದೇ ಗೊಂದಲಗಳಿದ್ದರೆ ಸಹಾಯವಾಣಿ ಸಂಖ್ಯೆ 1902ಕ್ಕೆ ಕರೆ ಮಾಡಬಹುದು ಎಂದು ಅವರು ಮಾಹಿತಿ ನೀಡಿದರು.

‘ಸೇವಾಸಿಂಧು ಪೋರ್ಟಲ್, ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ಉಚಿತವಾಗಿ ಅರ್ಜಿ ಸಲ್ಲಿಸಬಹುದು. ಮಹಿಳೆ ಆಧಾರ್ ಕಾರ್ಡ್, ಪತಿ ಆಧಾರ್ ಕಾರ್ಡ್ ಮಾಹಿತಿ ನೀಡಬೇಕು’ ಎಂದು ಅವರು ತಿಳಿಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.