# Tags
#ರಾಜಕೀಯ

ಗ್ಯಾರಂಟಿಗೆ ಟೀಕೆ, ಜನರಿಂದ ಉತ್ತರ ಸಿಕ್ಕಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Criticism of guarantee scheme, response from people : Udupi Dist Minister Laxmi Hebbalkar)

   ಗ್ಯಾರಂಟಿಗೆ ಟೀಕೆ, ಜನರಿಂದ ಉತ್ತರ ಸಿಕ್ಕಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

  ಉಪ‌ ಚುನಾವಣಾ ಫಲಿತಾಂಶ ವಿಪಕ್ಷಗಳ ಆರೋಪಕ್ಕೆ ಜನರಿಂದಲೇ ಚಾಟಿ ಏಟು

(Kanakapura) ಕನಕಪುರ: ಜನರ ಆಶೀರ್ವಾದದಿಂದ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಗೆದ್ದಿದೆ. ವಿರೋಧಿಗಳ ಟೀಕೆಗೆ ಜನ ಉತ್ತರ ಕೊಟ್ಟಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ, ಉಸ್ತುವಾರಿ ಸಚಿವೆ ಶ್ರೀಮತಿ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

 ಕನಕಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಮಹಿಳೆಯರ ಸಬಲೀಕರಣಕ್ಕೆ ಸರ್ಕಾರ ಗ್ಯಾರಂಟಿಗಳನ್ನು ನೀಡಿದೆ. ಮಹಿಳೆಯರು ಕೂಡ ಗ್ಯಾರಂಟಿಗಳ ಪ್ರಯೋಜನ ಪಡೆದುಕೊಂಡಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ಅನುಕೂಲ ಆಗಿದೆ. ಗ್ಯಾರಂಟಿಗಳ ಬಗ್ಗೆ ವಿರೋಧಿಗಳು ಪದೇ ಪದೇ ಟೀಕೆ ಮಾಡುತ್ತಿದ್ದರು. ಈ ಎಲ್ಲಾ ಟೀಕೆಗಳಿಗೂ ಮತದಾರರು ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಉತ್ತರ ನೀಡಿದ್ದಾರೆ‌ ಎಂದು ಹೇಳಿದರು.

 ಬಿಜೆಪಿಯವರು ಸರ್ಕಾರದ ವಿರುದ್ಧ ಸುಖಾಸುಮ್ಮನೆ ಆರೋಪಗಳನ್ನು ಮಾಡುತ್ತಿದ್ದರು. ಏನೂ ಇಲ್ಲದಿದ್ದರೂ ಬಿಜೆಪಿಯವರು ಹಗರಣ ಇದೆ ಎಂದು ಆರೋಪ ಮಾಡುತ್ತಿದ್ದರು‌. ಉಪ ಚುನಾವಣೆಯಲ್ಲಿ ಅದಕ್ಕೆಲ್ಲಾ ಶಾಸ್ತಿ‌ಯಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

Leave a comment

Your email address will not be published. Required fields are marked *

Emedia Advt5 Emedia Advt3 Emedia Advt1 Emedia Advt2