ಚೈತ್ರಾ ಕುಂದಾಪುರಳ ವೈಯಕ್ತಿಕ ಸಂಪರ್ಕ ನನಗೆ ಇಲ್ಲ: ಉಡುಪಿಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ
ಚೈತ್ರಾ ಕುಂದಾಪುರಳ ವೈಯಕ್ತಿಕ ಸಂಪರ್ಕ ನನಗೆ ಇಲ್ಲ: ಉಡುಪಿಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ
ಚೈತ್ರಾ ನನ್ನೊಂದಿಗೆ ಫೋಟೋ ತೆಗೆದಿರಬಹುದು ಆದ್ರೆ ಆಕೆಯ ಸಂಪರ್ಕ ನನಗೆ ಇಲ್ಲ.
ಕುಂದಾಪುರ: ಚೈತ್ರ ಕುಂದಾಪುರ ಅರೆಸ್ಟ್ ಆಗಿರುವುದನ್ನು ಮಾಧ್ಯಮಗಳಲ್ಲಿ ನೋಡಿದ್ದೇನೆ. ಚೈತ್ರಾ ಕುಂದಾಪುರ ಅವರ ವೈಯಕ್ತಿಕ ಸಂಪರ್ಕ ನನಗೆ ಇರಲಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸ್ಪಷ್ಟಪಡಿಸಿದ್ದಾರೆ.
ಚೈತ್ರಾ ಕುಂದಾಪುರ ಪ್ರಕರಣದ ಕುರಿತು ಉಡುಪಿಯಲ್ಲಿ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ನನಗೆ ಅವರ ವೈಯಕ್ತಿಕ ಪರಿಚಯ ಇರಲಿಲ್ಲ, ಕಾರ್ಯಕ್ರಮಗಳಲ್ಲಿ ಸಿಕ್ಕಾಗ ಫೋಟೋ ತೆಗೆದಿರಬಹುದು, ಗೊತ್ತಿಲ್ಲ ಎಂದು ಹೇಳಿದರು.
ರಾಜಕೀಯ ಸಾಮಾಜಿಕ ಜೀವನದಲ್ಲಿ ಯಾರೇ ತಪ್ಪು ಮಾಡಿದರೂ ಶಿಕ್ಷೆ ಆಗಬೇಕು. ಪ್ರಕರಣದ ಕುರಿತು ತನಿಖೆ ಆಗುತ್ತಿದೆ ನಿಷ್ಪಕ್ಷವಾಗಿ ತನಿಖೆಯಾಗಲಿ. ತಪ್ಪು ಮಾಡಿದ್ರೆ ಶಿಕ್ಷೆ ಆಗಲಿ. ತಪ್ಪು ಮಾಡದೆ ಇದ್ದರೆ ಅನಾವಶ್ಯಕವಾಗಿ ತೊಂದರೆ ಕೊಡುವುದು ಬೇಡ ಎಂದು ರಾಜ್ಯ ಸರ್ಕಾರಕ್ಕೆ ಶೋಭಾ ಕರಂದ್ಲಾಜೆ ಮನವಿ ಮಾಡಿದರು.
ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ನನ್ನ ಹೆಸರನ್ನು ದುರುಪಯೋಗ ಮಾಡಿಕೊಂಡರೆ ಕ್ರಮ ಕೈಗೊಳ್ಳಬೇಕು. ಯಾರು ಯಾರು ಡೆಲ್ಲಿ ನಾಯಕರ, ರಾಜ್ಯನಾಯಕರ ಹೆಸರು ದುರುಪಯೋಗ ಮಾಡಿಕೊಂಡಿದ್ದಾರೆ. ಈ ಲಿಂಕ್ ತನಿಖೆ ಆಗಬೇಕು,. ಕುಮ್ಮಕ್ಕು ನೀಡಿದವರ ಬಗ್ಗೆಯೂ ತನಿಖೆ ನಡೆಯಲಿ ಎಂದರು.
ಭಾರತೀಯ ಜನತಾ ಪಾರ್ಟಿಯಲ್ಲಿ ದುಡ್ಡು ತೆಗೆದುಕೊಂಡು ಟಿಕೆಟ್ ನೀಡುವ ಸ್ಥಿತಿಯು ಇಲ್ಲ. ಮುಂದೆ ಬರುವುದೂ ಇಲ್ಲ. ಅಂತಹ ಪಾರ್ಟಿ ಕೂಡ ಭಾರತೀಯ ಜನತಾ ಪಾರ್ಟಿಯಲ್ಲ ಎಂದು ಅವರು ತಿಳಿಸಿದರು.