• Home  
  • ಚೈತ್ರಾ ಕುಂದಾಪುರ ಪ್ರಕರಣಕ್ಕೂ ನಮಗೂ ಸಂಬಂಧವಿಲ್ಲ: ಮಂಗಳೂರಿನಲ್ಲಿ ಬೊಮ್ಮಾಯಿ ಹೇಳಿಕೆ
- ಅಪರಾಧ - ರಾಜಕೀಯ

ಚೈತ್ರಾ ಕುಂದಾಪುರ ಪ್ರಕರಣಕ್ಕೂ ನಮಗೂ ಸಂಬಂಧವಿಲ್ಲ: ಮಂಗಳೂರಿನಲ್ಲಿ ಬೊಮ್ಮಾಯಿ ಹೇಳಿಕೆ

Share: ಚೈತ್ರಾ ಕುಂದಾಪುರ ಪ್ರಕರಣಕ್ಕೂ ನಮಗೂ ಸಂಬಂಧವಿಲ್ಲ: ಮಂಗಳೂರಿನಲ್ಲಿ ಬೊಮ್ಮಾಯಿ ಹೇಳಿಕೆ ಮಂಗಳೂರು, ಸೆ 14 : ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಂಧನಕ್ಕೊಳಗಾದ ಚೈತ್ರಾ ಕುಂದಾಪುರ ಪ್ರಕರಣಕ್ಕೂ ನಮಗೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ಮಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಕರಾವಳಿ ಮೂಲದ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬುವವರಿಗೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಬಹುಕೋಟಿ ರೂಪಾಯಿ ವಂಚನೆ ಮಾಡಿರುವ ಆರೋಪ ಎಹಿಂದೂಪರ ನಾಯಕಿ ಚೈತ್ರಾ ಕುಂದಾಪುರ […]

ಚೈತ್ರಾ ಕುಂದಾಪುರ ಪ್ರಕರಣಕ್ಕೂ ನಮಗೂ ಸಂಬಂಧವಿಲ್ಲ: ಮಂಗಳೂರಿನಲ್ಲಿ ಬೊಮ್ಮಾಯಿ ಹೇಳಿಕೆ

ಮಂಗಳೂರು, ಸೆ 14 : ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಂಧನಕ್ಕೊಳಗಾದ ಚೈತ್ರಾ ಕುಂದಾಪುರ ಪ್ರಕರಣಕ್ಕೂ ನಮಗೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ಮಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಕರಾವಳಿ ಮೂಲದ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬುವವರಿಗೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಬಹುಕೋಟಿ ರೂಪಾಯಿ ವಂಚನೆ ಮಾಡಿರುವ ಆರೋಪ ಎಹಿಂದೂಪರ ನಾಯಕಿ ಚೈತ್ರಾ ಕುಂದಾಪುರ ಎದುರಿಸುತ್ತಿದ್ದಾರೆ.

ಚೈತ್ರಾ ಕುಂದಾಪುರ ಕೇಸ್ ನ ವ್ಯವಹಾರಕ್ಕೂ ನಮಗೂ ಸಂಬಂಧವಿಲ್ಲ. ಈ ಪ್ರಕರಣದಲ್ಲಿ ಸಮಗ್ರ ತನಿಖೆ ಆಗಬೇಕು. ಯಾರೇ ಇದ್ದರೂ ಉಗ್ರ ಶಿಕ್ಷೆ ಆಗಲಿ. ಸ್ವಾಮೀಜಿ ಅಲ್ಲ, ಯಾರೇ ಇದ್ದರೂ ಅವರನ್ನು ಬಂಧಿಸಿ ತನಿಖೆಗೊಳಪಡಿಸಬೇಕು.

  ಟಿಕೆಟ್ ಕೊಡಿಸುತ್ತೇವೆ ಎಂದು ಹಣ ಪಡೆದಿರೋದನ್ನ ನಾವು ಗಂಭೀರವಾಗಿ ಪರಿಗಣಿಸ್ತೇವೆ. ಬಿಜೆಪಿಗೆ ಇದರಲ್ಲಿ ಯಾವುದೇ ಸಂಬಂಧ ಇಲ್ಲ ಎನ್ನುವುದು ಸ್ಪಷ್ಟ. ಹೋರಾಟ ಹಲವರು ಮಾಡ್ತಾರೆ, ಹಾಗಂತ ಅದಕ್ಕೆಲ್ಲವಕ್ಕೂ ಪಕ್ಷಕ್ಕೆ ಸಂಬಂಧ ಇಲ್ಲ. ತನಿಖೆ ಆಗಲಿ, ದೊಡ್ಡ ದೊಡ್ಡ ಹೆಸರನ್ನು ಅಪರಾಧಿ ಸ್ಥಾನದಲ್ಲಿ ಇದ್ದವರು ಹೇಳುತ್ತಾರೆ. ಆದರೆ ತನಿಖೆ ಆಗಿ ಅದರ ಸತ್ಯ ಹೊರ ಬರಲಿ ಎಂದು ಹೇಳಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.