# Tags
#ರಾಜಕೀಯ

ಜಾತಿಗಣತಿ ವರದಿಯನ್ನು ಸ್ವೀಕಾರ ಮಾಡಿ: ಹಿಂದುಳಿದ ವರ್ಗಗಳ ಸ್ವಾಮೀಜಿಗಳ ಮನವಿ (Accept Caste Census Report : Appeal to CM by Backward Classes Seers)

ಜಾತಿಗಣತಿ ವರದಿಯನ್ನು ಸ್ವೀಕಾರ ಮಾಡಿ: ಹಿಂದುಳಿದ ವರ್ಗಗಳ ಸ್ವಾಮೀಜಿಗಳ ಮನವಿ

  ಕಾನೂನು ಸಲಹೆ ಪಡೆದು ಮುಂದುವರೆಯಲಾಗುವುದು: ಮುಖ್ಯಮಂತ್ರಿ ಸಿದ್ದರಾಮಯ್ಯ( We will proceed after taking legal advice: Chief Minister Siddaramaiah)

ಬೆಂಗಳೂರು, ಜನವರಿ 07 :  ಜಾತಿಗಣತಿ ವರದಿಯನ್ನು ಸ್ವೀಕಾರ ಮಾಡಬೇಕು ಎಂದು ಹಿಂದುಳಿದ ಸಮುದಾಯಗಳ ಮಠಾಧೀಶರು ಇಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದರು.

 ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣದಲ್ಲಿ ಇಂದು ಅವರನ್ನು ಭೇಟಿಮಾಡಿ ಈ ಮನವಿ ಸಲ್ಲಿಸಿದರು.

 ಶ್ರಮಿಕ ವರ್ಗದವರಿಗೆ  ಗ್ಯಾರಂಟಿಗಳು ಹೆಚ್ಚು ಉಪಯುಕ್ತ ವಾಗಿವೆ ಎಂದು ಸ್ವಾಮೀಜಿಗಳು ಅಭಿಪ್ರಾಯ ಪಟ್ಟರು.

 ಇದಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯ ಮಂತ್ರಿಗಳು ವರದಿ ನೀಡಲು  ಎರಡು  ತಿಂಗಳ ಕಾಲ ಅವಧಿ ವಿಸ್ತರಣೆ ಯಾಗಿದೆ. ಜಯಪ್ರಕಾಶ್ ಹೆಗ್ಡೆ ಅವರು ಕಾಂತರಾಜು ಅವರ ವರದಿಯನ್ನೇ ಕೊಡಲು ಸಾಧ್ಯವಿಲ್ಲ ಎಂದಿದ್ದು, ಈ ಬಗ್ಗೆ ಕಾನೂನು ಸಲಹೆ ಪಡೆದು ಮುಂದುವರೆಯಲಾಗುವುದು ಎಂದರು.

 ಇದೇ ಸಂದರ್ಭದಲ್ಲಿ ಮಠಗಳಿಗೆ ಜಮೀನು ಕೊಡುವ ಬಗ್ಗೆ ಸ್ವಾಮೀಜಿಗಳು  ಪ್ರಸ್ತಾಪಿಸಿದರು.  ತಹಸೀಲ್ದಾರ್ ಅವರು ಈ ಬಗ್ಗೆ ವರದಿ ನೀಡಲು ಸೂಚಿಸಿದ್ದು, ವರದಿಯನ್ನು ಶೀಘ್ರವಾಗಿ ನೀಡುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳಿಗೆ ದೂರವಾಣಿ ಮೂಲಕ ಮಾತನಾಡಿ ಸೂಚಿಸಿದರು.

  ಭೋವಿ ಸಮುದಾಯ ಚಿತ್ರದುರ್ಗದ ಸಿದ್ದರಾಮೇಶ್ವರ ಸ್ವಾಮೀಜಿ, ವಾಲ್ಮೀಕಿ ಪ್ರಸನ್ನಾನಂದಪುರಿ ಸ್ವಾಮೀಜಿ, ಕಾಗಿನೆಲೆ ಮಹಾಸಂಸ್ಥಾನದ ಕನಕ ಗುರುಪೀಠದ ಜಗದ್ಗುರು ನಿರಂಜನಾನಂದಪುರಿ ಶ್ರೀಗಳು ಹಾಗೂ ಹಿಂದುಳಿದ ಜಾತಿಗಳ ಮಠಗಳ ಸ್ವಾಮೀಜಿಗಳು,  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತ  ಕೆ.ಎ. ದಯಾನಂದ ಉಪಸ್ಥಿತರಿದ್ದರು. (Siddarameshwar Swamiji of Bhovi Community Chitradurga, Valmiki Prasannanandpuri Swamiji, Jagadguru Niranjananandpuri Sri of Kanaka Gurpeeth of Kaginele Mahasansthan and Seers of Backward Castes Mutt, Backward Classes Welfare Department Commissioner K.A. Dayananda were present.)

Leave a comment

Your email address will not be published. Required fields are marked *

Emedia Advt5 Emedia Advt3 Emedia Advt1 Emedia Advt2