ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಕೋಟ ಶ್ರೀ ಕ್ಷೇತ್ರ ಅಮೃತೇಶ್ವರೀ ದೇಗುಲ ಭೇಟಿ (dist minister laxmi hebbalkar visit kota amrutheshwari temple)
ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಕೋಟ ಶ್ರೀ ಕ್ಷೇತ್ರ ಅಮೃತೇಶ್ವರೀ ದೇಗುಲ ಭೇಟಿ
(kota) ಕೋಟ: ಕೋಟದ ಶ್ರೀ ಕ್ಷೇತ್ರ ಅಮೃತೇಶ್ವರೀ ಹಲವು ಮಕ್ಕಳ ತಾಯಿ ದೇವಸ್ಥಾನಕ್ಕೆ ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಶನಿವಾರ ಭೇಟಿ ನೀಡಿ, ದೇವರ ದರ್ಶನ ಪಡೆದರು.
ಈ ಸಂದರ್ಭದಲ್ಲಿ ದೇವಸ್ಥಾನದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ ಶಾಲು ಹೋದಿಸಿ ಪ್ರಸಾದ ವಿತರಿಸಿ ಗೌರವಿಸಿದರು.
ದೇಗುಲ ಮಾಜಿ ಅಧ್ಯಕ್ಷ ಆನಂದ್ ಸಿ ಕುಂದರ್, ವ್ಯವಸ್ಥಾಪಕ ಗಣೇಶ್ ಹೊಳ್ಳ, ಕಾಂಗ್ರೆಸ್ ಮುಖಂಡರಾದ ಮೊಳಹಳ್ಳಿ ದಿನೇಶ್ ಹೆಗ್ಡೆ, ಚಂದ್ರ ಆಚಾರ್, ದೇವೇಂದ್ರ ಗಾಣಿಗ, ರವೀಂದ್ರ ಐತಾಳ್, ಸುಭಾಷ್ ಶೆಟ್ಟಿ, ಸುಬ್ರಾಯ ಜೋಗಿ, ಗಣೇಶ್ ಪೂಜಾರಿ, ದೇವದಾಸ್ ಕಾಂಚನ್, ವಿಶ್ವನಾಥ್ ಶೆಟ್ಟಿ, ಅರ್ಚಕರಾದ ದಿನೇಶ್ ಜೋಗಿ, ಅಮೃತ್ ಜೋಗಿ ಮತ್ತಿತರರು ಇದ್ದರು.