# Tags
#ಶಾಲಾ ಕಾಲೇಜು #ಸಂಘ, ಸಂಸ್ಥೆಗಳು

ಜೀವನದಲ್ಲಿ ಶಿಸ್ತು, ಸಾಧಿಸುವ ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ : ಉಡುಪಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ (Develop discipline in life, desire to achieve, self confidence : Udupi DC Dr. K Vidyakumari)

ಜೀವನದಲ್ಲಿ ಶಿಸ್ತು, ಸಾಧಿಸುವ ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ : ಉಡುಪಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ  

ಜಿಲ್ಲಾಮಟ್ಟದ ರೇಂಜರ್ ಗಳ ಪ್ರೇರಣ ಶಿಬಿರ ಉದ್ಘಾಟನೆ

 (Udupi) ಉಡುಪಿ: ಸ್ಕೌಟ್ಸ್ ಮತ್ತು ಗೈಡ್ಸ್‌ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು, ಸಾಧಿಸುವ ಛಲ, ಆತ್ಮಸ್ಥೈರ್ಯವನ್ನು ಬೆಳೆಸಿಕೊಳ್ಳಬಹುದು. ಅಲ್ಲದೆ, ನಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಂಡು, ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಇದು ಪ್ರೇರಣೆಯಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದರು.

 ಭಾರತೀಯ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ಜಿಲ್ಲಾ ಸಂಸ್ಥೆ ಉಡುಪಿ ಹಾಗೂ ಅಜ್ಜರಕಾಡು ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಐಕ್ಯೂಎಸಿ ಮತ್ತು ರೇಂಜರ್ಸ್ ಘಟಕಗಳ ಸಹಯೋಗದಲ್ಲಿ ಅಜ್ಜರಕಾಡು ಡಾ. ಜಿ. ಶಂಕರ್ ಸರಕಾರಿ ಮಹಿಳಾ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿದ ಜಿಲ್ಲಾಮಟ್ಟದ ರೇಂಜರ್ ಗಳ ಪ್ರೇರಣ ಶಿಬಿರವನ್ನು ಉದ್ಘಾಟಿಸಿ ಜಿಲಲಾಧಿಕಾರಿ ಮಾತನಾಡಿದರು.

ಉಡುಪಿ ಶಾಸಕ ಯಶ್ಪಾಲ್‌ ಸುವರ್ಣ ಮಾತನಾಡಿ, ಮಕ್ಕಳು ತಮ್ಮ ಭವಿಷ್ಯ ರೂಪಿಸಿಕೊಳ್ಳಲು ಇಂತಹ ಶಿಬಿರಗಳು ಸಹಕಾರಿಯಾಗಲಿವೆ. ಜಿಲ್ಲೆಯಲ್ಲಿ ಐಎಎಸ್, ಐಪಿಎಸ್ ಪರೀಕ್ಷೆ ಬರೆಯುವವರ ಸಂಖ್ಯೆ ಕಡಿಮೆ ಇದೆ. ಹೀಗಾಗಿ ಮುಂದಿನ ದಿನಗಳಲ್ಲಿ ಪ್ರತಿ ವರ್ಷ ಕನಿಷ್ಟ ಐದು ಮಂದಿಯಾದರೂ ಐಎಎಸ್, ಐಪಿಎಸ್ ಪರೀಕ್ಷೆ ಬರೆದು ತೇರ್ಗಡೆಯಾಗುವ ಛಲ ಹೊಂದಬೇಕು. ಆ ಮೂಲಕ ಜಿಲ್ಲೆಯ ಅಭಿವೃದ್ಧಿಗೆ ಸಹಕಾರ ನೀಡಬೇಕು ಎಂದರು.

ಅಜ್ಜರಕಾಡು ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಧರ್ ಪ್ರಸಾದ್ ಕೆ. ಅಧ್ಯಕ್ಷತೆ ವಹಿಸಿದ್ದರು.

ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್‌ನ ಜಿಲ್ಲಾ ಮುಖ್ಯ ಆಯುಕ್ತ ಇಂದ್ರಾಳಿ ಜಯಕರ ಶೆಟ್ಟಿ, ಜಿಲ್ಲಾ ಸ್ಕೌಟ್ಸ್ ಆಯುಕ್ತ ಜನಾರ್ದನ ಕೊಡವೂರು, ಜಿಲ್ಲಾ ಗೈಡ್ಸ್ ಆಯುಕ್ತೆ ಜ್ಯೋತಿ ಜೆ. ಪೈ, ಜಿಲ್ಲಾ ಕಾರ್ಯದರ್ಶಿ ಆನಂದ ಟಿ. ಅಡಿಗ, ರಾಜ್ಯ ಸಹಾಯಕ ಸಂಘಟನಾ ಆಯುಕ್ತೆ ಸುಮನ್ ಶೇಖರ್, ಶಿಬಿರ ನಾಯಕಿ ಜ್ಯೋತಿ ಲಕ್ಷಣ್ ರಾವ್ ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

Emedia Advt5 Emedia Advt3 Emedia Advt1 Emedia Advt2