ಜೆಡಿಎಸ್ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಆರ್ ಧನರಾಜ್ ನೇಮಕ
ತುಳು ಚಲನ ಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಡಾ. ಆರ್ ಧನರಾಜ್
(Mangaluru) ಮಂಗಳೂರು: ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಡಾ. ಆರ್ ಧನರಾಜ್ ನೇಮಕಗೊಂಡಿದ್ದಾರೆ.
ಜೆಡಿಎಸ್ ನ ರಾಷ್ಟ್ರೀಯ ಅಧ್ಯಕ್ಷರಾದ ಎಚ್ ಡಿ ದೇವೇಗೌಡ ಅವರು ನೇಮಕಾತಿ ಆದೇಶವನ್ನು ಹೊರಡಿಸಿದ್ದಾರೆ.
ದೇವೇಗೌಡರ ಆದೇಶದಲ್ಲಿ ಪಕ್ಷದ ತತ್ವ ಹಾಗೂ ಸಿದ್ದಾಂತಗಳಿಗೆ ಬದ್ದರಾಗಿ ರಾಜ್ಯದಲ್ಲಿ ಜನತಾದಳ ಪಕ್ಷವನ್ನು ಪರಿಣಾಮಕಾರಿಯಾಗಿ ಸಂಘಟಿಸಿ ಬಲವರ್ಧನೆಗೊಳಿಸುವ ನಿಟ್ಟಿನಲ್ಲಿ ಕಾರ್ಯೋನುಖರಾಗುವಂತೆ ಆದೇಶಿಸಿದ್ದಾರೆ.
ಆರ್ ಧನರಾಜ್ ಅವರು ತುಳು ಚಲನ ಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾಗಿದ್ದಾರೆ.

