ಮುಂಡ್ಕೂರು ವಿದ್ಯಾವರ್ಧಕ ಪದವಿ ಪೂರ್ವ ಕಾಲೇಜು ಹಳೆ ವಿದ್ಯಾರ್ಥಿಗಳ ಪುನರ್ಮಿಲನ
ಸಮಾವೇಶ, ಕ್ರೀಡೋತ್ಸವ ಹಾಗೂ ಸಾಂಸ್ಕೃತಿಕ ವೈಭವ ನಡೆಯಲಿದೆ
(Mundkuru) ಮುಂಡ್ಕೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಂಡ್ಕೂರು ಹಾಗೂ ವಿದ್ಯಾವರ್ಧಕ ಪದವಿಪೂರ್ವ ಕಾಲೇಜು ಮುಂಡ್ಕೂರು ಇಲ್ಲಿನ ಪೂರ್ವ ವಿದ್ಯಾರ್ಥಿಗಳ ಪುನರ್ಮಿಲನ ಸಮಾವೇಶ, ಕ್ರೀಡೋತ್ಸವ ಹಾಗೂ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ಡಿಸೆಂಬರ್ 13 ಶನಿವಾರ ಹಾಗೂ ಡಿಸೆಂಬರ್ 14 ರವಿವಾರದಂದು ಕಾಲೇಜಿನ ಮೈದಾನದಲ್ಲಿ ನಡೆಯಲಿದೆ.
ಡಿಸೆಂಬರ್ 13 ಶನಿವಾರದಂದು ಪೂರ್ವ ವಿದ್ಯಾರ್ಥಿಗಳ ಪುನರ್ಮಿಲನದ ಸಮಾವೇಶದ ಅಂಗವಾಗಿ ಕ್ರೀಡೋತ್ಸವ, ಪೂರ್ವ ವಿದ್ಯಾರ್ಥಿಗಳಿಗೆ ಕಬ್ಬಡಿ, ವಾಲಿಬಾಲ್ ಅಥ್ಲೆಟಿಕ್ಸ್ ಕ್ರೀಡಾಕೂಟ ನಡೆಯಲಿದೆ.
ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅದ್ಯಕ್ಷ ಸುರೇಂದ್ರ ಶೆಟ್ಟಿ ಕೋರಿಬೆಟ್ಟು ಗುತ್ತು ವಹಿಸಲಿದ್ದು, ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕ ವೇದಮೂರ್ತಿ ರಾಮದಾಸ ಆಚಾರ್ಯ ಆಶೀರ್ವಚನ ನೀಡಲಿದ್ದಾರೆ.
ಅಂತರಾಷ್ಟ್ರೀಯ ಶಾಟ್ ಪುಟ್ ಎಸೆತಗಾರ್ತಿ ಸುಚರಿತ ಶೆಟ್ಟಿ ಮುಂಬೈ, ರಾಜ್ಯಮಟ್ಟದ ಉದ್ದ ಜಿಗಿತ ಪಟು ಗುಣಶ್ರೀ ಗುರುನಾಥ್ ಉದ್ಘಾಟಿಸಲಿದ್ದಾರೆ.
ವಿದ್ಯಾ ವರ್ಧಕ ಪದವಿ ಪೂರ್ವ ಕಾಲೇಜಿನ ಸಂಚಾಲಕ ಡಾ. ಬಾಲಕೃಷ್ಣ ಆಳ್ವ ಧ್ವಜಾರೋಹಣ ನೆರವೇರಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮುಂಡ್ಕೂರು ಗ್ರಾಮ ಪಂಚಾಯತ್ ಅಧ್ಯಕ್ಷ ದೇವಪ್ಪ ಸಪಳಿಗ, ವಿದ್ಯಾವರ್ಧಕ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಪ್ರಸಾದ್ ಎಮ್. ಶೆಟ್ಟಿ ಅಂಗಡಿ ಗುತ್ತು, ವಿದ್ಯಾವರ್ಧಕ ಪದವಿಪೂರ್ವ ಕಾಲೇಜಿನ ಕೋಶಾಧಿಕಾರಿ ಪ್ರಭಾಕರ ಶೆಟ್ಟಿಗಾರ್, ಕಾಲೇಜಿನ ಆಡಳಿತ ಮಂಡಳಿ ಕಾರ್ಯದರ್ಶಿ ಪಾಂಡುರಂಗ ಪ್ರಭು, ಅಶೋಶ್ ಶೆಟ್ಟಿ ಪದ್ಮಸದನ , ಮುಲ್ಕಿ ಬಂಟರ ಸಂಘದ ಅಧ್ಯಕ್ಷ ಅಶೋಕ್ ಶೆಟ್ಟಿ, ವಿದ್ಯಾವರ್ಧಕ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಮಾಲತೇಶ್ ಇಂಗಳಕಿ, ಹಿರಿಯ ಸಹ ಶಿಕ್ಷಕಿ ಸವಿತಾ ಸದಾನಂದ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಮುಖ್ಯ ಶಿಕ್ಷಕ ರಂಗಸ್ವಾಮಿ ಉಪಸ್ಥಿತರಿಲಿದ್ದಾರೆ.
ಕ್ರೀಡಾಕೂಟದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಇನ್ನಾ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ದಿವಾಕರ ಶೆಟ್ಟಿ ವಹಿಸಲಿದ್ದು, ಇತರ ಗಣ್ಯರು ಭಾಗವಹಿಸಲಿದ್ದಾರೆ.
ಡಿಸೆಂಬರ್ 14 ಆದಿತ್ಯವಾರದಂದು ಪುನರ್ಮಿಲನ, ಸಾಂಸ್ಕೃತಿಕ ವೈಭವದ ಸಮಾವೇಶ ಸಮಾರಂಭದ ಉದ್ಘಾಟನೆ ನಡೆಯಲಿದ್ದು, ಉದಯ ಕೃಷ್ಣಯ್ಯ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಮುನಿಯಾಲು ಉದಯಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ.
ಮಧ್ಯಾಹ್ನ 3 ಗಂಟೆಗೆ ಸಾಯಿನಾಥ್ ಶೆಟ್ಟಿ, ನೇತೃತ್ವದಲ್ಲಿ ವಿಶೇಷ ಸಂವಾದ ಕಾರ್ಯಕ್ರಮ ನಡೆಯಲಿದೆ.
ರಂಗ ನಿರ್ದೇಶಕ ವಿಜಯಕುಮಾರ್ ಕುಡಿಯಾಲ್ ಬೈಲ್ ರವರು ಸಮಾರೋಪ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ಸಂಜೆ ಆರು ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ.
ಸಾಧಕ ಹಳೆ ವಿದ್ಯಾರ್ಥಿ ಉದ್ಯಮಿ ರತ್ನಾಕರ ಶೆಟ್ಟಿ ಮುಂಡ್ಕೂರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಜಾರಿಗೆ ಕಟ್ಟೆ ಶ್ರೀ ಕೊರಗಜ್ಜ ಕೊರಗರ ಪಂರ್ಜುಲಿ ಕ್ಷೇತ್ರದ ಧರ್ಮದರ್ಶಿ ದಿವಾಕರ ಪೂಜಾರಿ ಆಶೀರ್ವಚನ ನೀಡಲಿದ್ದಾರೆ.
ವಿವಿಧ ಗಣ್ಯರು ಭಾಗವಹಿಸಲಿದ್ದು, ಪ್ರತಿಭಾ ಪುರಸ್ಕಾರ, ವಿವಿಧ ಸಂಘ ಸಂಸ್ಥೆಗಳಿಂದ ಸಾಂಸ್ಕೃತಿಕ ವೈಭವ ನಡೆಯಲಿದೆ.
ರಾತ್ರಿ 7.30 ರಿಂದ ಲಕುಮಿ ತಂಡದ ಕುಸಾಲ್ದ ಕಲಾವಿದೆರ್ ಅಭಿನಯದ ತುಳು ಹಾಸ್ಯಮಯ ನಾಟಕ “ಆಂಟಿ ಬೊಕ್ಕ ಅಂಕಲ್” ನಾಟಕ ನಡೆಯಲಿದೆ ಎಂದು ಕಾರ್ಯಾಧ್ಯಕ್ಷ ಸಾಯಿನಾಥ್ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶರತ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

