ಮಾಸ್ಕ್ ಮ್ಯಾನ್ ಗೆ ಸಹಕರಿಸಿದ ಆರೋಪ.
(Belthangadi) ಬೆಳ್ತಂಗಡಿ : ಸೌಜನ್ಯ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಎಸ್ಐಟಿ ಅಧಿಕಾರಿಗಳು ಇಂದು ಬೆಳಗ್ಗೆ ಶಾಕ್ ಕೊಟ್ಟಿದ್ದಾರೆ.
ಸರ್ಚ್ ವಾರೆಂಟ್ ಪಡೆದು ಎಸ್ಐಟಿ ಅದಿಕಾರಿಗಳು ನೇರವಾಗಿ ತಿಮರೋಡಿ ಮನೆಗೆ ಎಂಟ್ರಿಕೊಟ್ಟಿದ್ದಾರೆ.
ಧರ್ಮಸ್ಥಳ ಪ್ರಕರಣದ ತನಿಖೆಯಲ್ಲಿ ಇಂದು ಮಹತ್ವದ ಬೆಳವಣಿಗೆಯಾಗಿದೆ. ದೂರುದಾರ ಚಿನ್ನಯ್ಯ ಅಲಿಯಾಸ್ ಮಾಸ್ಕ್ ಮ್ಯಾನ್ ವಿಚಾರಣೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳು ಇದೀಗ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಮನೆ ಮೇಲೆ ದಾಳಿ ನಡೆಸಿದ್ದಾರೆ. ಆರೋಪಿ ಚಿನ್ನಯ ಜೊತೆ ಎಸ್ಐಟಿ ಅಧಿಕಾರಿಗಳು ಉಜಿರೆ ಬಳಿ ಇರುವ ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ಎಂಟ್ರಿಕೊಟ್ಟಿದ್ದಾರೆ. ಸರ್ಚ್ ವಾರಂಟ್ ಪಡೆದ ಎಸ್ಐಟಿ ಅಧಿಕಾರಿಗಳು ಮಹೇಶ್ ಶೆಟ್ಟಿ ತಿಮರೋಡಿ ಮನೆ ಪರಿಶೋಧನೆ, ಸ್ಥಳ ಮಹಜರು ನಡೆಸಲು ದಿಢೀರ್ ಎಂಟ್ರಿ ಕೊಟ್ಟಿದ್ದಾರೆ.
ಆರೋಪಿಯಾಗಿರುವ ದೂರುದಾರ ಚಿನ್ನಯ್ಯ ಜೊತೆಗೆ ಎಸ್ಐಟಿ ತಂಡ ತಿಮರೋಡಿ ಮನೆಗೆ ಪ್ರವೇಶಿಸಿದ್ದಾರೆ.

