# Tags
#ಕ್ರೀಡೆ

ತುಮಕೂರು: ರಾಜ್ಯ ಮಟ್ಟದ ಪತ್ರಕರ್ತರ ಕ್ರೀಡಾಕೂಟ, ಉಡುಪಿ ತಂಡ ಸಾಧನೆ (Tumakuru : State Level Journalists Games, Udupi Team achievement)

ತುಮಕೂರು: ರಾಜ್ಯ ಮಟ್ಟದ ಪತ್ರಕರ್ತರ ಕ್ರೀಡಾಕೂಟ, ಉಡುಪಿ ತಂಡ ಸಾಧನೆ

(Tumakuru) ತುಮಕೂರು, ನ.24: ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ತುಮಕೂರು ಜಿಲ್ಲಾ ಘಟಕದ ಅತಿಥ್ಯದಲ್ಲಿ ತುಮಕೂರಿನಲ್ಲಿ ನ. 24ರಂದು ಹಮ್ಮಿಕೊಳ್ಳಲಾದ ರಾಜ್ಯಮಟ್ಟದ ಪತ್ರಕರ್ತರ ವಾರ್ಷಿಕ ಕ್ರೀಡಾ ಕೂಟದಲ್ಲಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ತಂಡ ಉತ್ತಮ ಸಾಧನೆ ಮಾಡಿದೆ.

  50 ವರ್ಷ ಮೇಲ್ಪಟ್ಟ ವಿಭಾಗದಲ್ಲಿ ಸುರೇಶ್ ಎರ್ಮಾಳು 100 ಮೀಟರ್ ಮತ್ತು 200 ಮೀಟರ್ ಓಟದಲ್ಲಿ ಪ್ರಥಮ, ಮಹಮ್ಮದ್ ಶರೀಫ್ ಗುಂಡು ಎಸೆತ ಮತ್ತು ಉದ್ದ ಜಿಗಿತದಲ್ಲಿ ತೃತೀಯ, ಉದಯ ಮುಂಡ್ಕೂರು 100ಮೀ, 200 ಮೀಟರ್ ಓಟ ಹಾಗೂ ಗುಂಡು ಎಸೆತದಲ್ಲಿ ದ್ವಿತೀಯ ಸ್ಥಾನ, 40ವರ್ಷದೊಳಗಿನ ವಿಭಾಗದಲ್ಲಿ ಚೇತನ್ ಮಟಪಾಡಿ 100 ಮೀಟರ್ ಮತ್ತು 200 ಮೀಟರ್ ಓಟದಲ್ಲಿ ಪ್ರಥಮ, ಅನಿಲ್ ಕೈರಂಗಳ ಉದ್ದ ಜಿಗಿತದಲ್ಲಿ ಪ್ರಥಮ, 200ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ.

 ಸಂಘದ ಸದಸ್ಯರ ಈ ಸಾಧನೆಗೆ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ, ರಾಜ್ಯ ಸಮಿತಿ ಸದಸ್ಯ ಕಿರಣ್ ಮಂಜನಬೈಲು, ರಾಷ್ಟ್ರೀಯ ಸದಸ್ಯ ಅರುಣ್ ಕುಮಾರ್ ಶಿರೂರು, ಉಪಾಧ್ಯಕ್ಷ ಬಾಲಕೃಷ್ಣ ಪೂಜಾರಿ ಉಚ್ಚಿಲ ಹಾಗೂ ಪದಾಧಿಕಾರಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Leave a comment

Your email address will not be published. Required fields are marked *

Emedia Advt5 Emedia Advt3 Emedia Advt1 Emedia Advt2