# Tags
#ನಿಧನ

ತೆಂಕುತಿಟ್ಟಿನ ಪ್ರಸಿದ್ದ ಹಾಸ್ಯಗಾರ, ಹಿರಿಯ ಯಕ್ಷಗಾನ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ನಿಧನ (Yakshagana comedian artist   Bantwala Jayarama Acharya passes away)

 ತೆಂಕುತಿಟ್ಟಿನ ಪ್ರಸಿದ್ದ ಹಾಸ್ಯಗಾರ, ಹಿರಿಯ ಯಕ್ಷಗಾನ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ನಿಧನ    

(Bantwala) ಬಂಟ್ವಾಳ: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ತೆಂಕುತಿಟ್ಟಿನ ಪ್ರಸಿದ್ದ ಹಾಸ್ಯಗಾರರಾದ ಹಿರಿಯ ಯಕ್ಷಗಾನ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ (67) ಅವರು ಹೃದಯಾಘಾತದಿಂದ ಬೆಂಗಳೂರಿನಲ್ಲಿ ಸೋಮವಾರ ಮುಂಜಾನೆ ದೈವಾಧೀನರಾಗಿದ್ದಾರೆ.

ಬಂಟ್ವಾಳ ಕಾಲೇಜ್ ರಸ್ತೆಯಲ್ಲಿ ನಿವಾಸ ಹೊಂದಿರುವ ಅವರು ಪತ್ನಿ, ಒರ್ವ ಪುತ್ರ, ಒರ್ವಪುತ್ರಿ ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.

ಬೆಂಗಳೂರಿನಲ್ಲಿ ಯಕ್ಷಗಾನ ಕಾರ್ಯಕ್ರಮವೊಂದಕ್ಕೆ ಭಾಗವಹಿಸಲು ತೆರಳಿದ್ದ ಅವರು, ಇಂದು ಮುಂಜಾನೆ ನಾಲ್ಕು ಗಂಟೆಗೆ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣ ಅವರನ್ನು ಸಹ  ಕಲಾವಿದರು ಆಸ್ಪತ್ರೆಗೆ ಸೇರಿಸಿದರೂ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಬಂಟ್ವಾಳದಲ್ಲಿ 1957, ಅಕ್ಟೋಬರ್ 12ರಂದು ಬಂಟ್ವಾಳ ಗಣಪತಿ ಆಚಾರ್ಯ, ಭವಾನಿ ಅಮ್ಮ ಅವರ ಪುತ್ರರಾಗಿ ಜನಿಸಿದ ಜಯರಾಮ ಆಚಾರ್ಯರು, ಬಂಟ್ವಾಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ (ಬೋರ್ಡ್ ಶಾಲೆ)ಯಲ್ಲಿ ವಿದ್ಯಾಭ್ಯಾಸ ನಡೆಸಿ, ತಂದೆಯವರ ಪ್ರೇರಣೆಯಿಂದ ಅಮ್ಟಾಡಿ, ಸೊರ್ನಾಡು ಮೇಳಗಳಲ್ಲಿ ತಿರುಗಾಟ ನಡೆಸಿ ವೇಷವನ್ನೂ ಮಾಡಿದ್ದರು.

 ಬಳಿಕ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನಡೆಸಲ್ಪಡುತ್ತಿದ್ದ `ಲಲಿತ ಕಲಾ ಕೇಂದ್ರ’ಕ್ಕೆ ಸೇರಿ ಯಕ್ಷಗಾನ ಹೆಜ್ಜೆಗಾರಿಕೆ ಕಲಿತರು. ಅದಾದ ಬಳಿಕ ಕಟೀಲು ಮೇಳದಲ್ಲಿ 4 ವರ್ಷ, ಪುತ್ತೂರು ಮೇಳ, ಕದ್ರಿ ಮೇಳ, ಕುಂಬಳೆ ಮೇಳದಲ್ಲಿ ತಿರುಗಾಟ ನಡೆಸಿದರು. ಮತ್ತೆ ಕಟೀಲು ಮೇಳ, ಎಡನೀರು ಮೇಳ, ಹೊಸನಗರ ಮೇಳ, ಬಳಿಕ ಹನುಮಗಿರಿ ಮೇಳ ಹೀಗೆ ಸುಮಾರು 50 ವರ್ಷಗಳ ಯಕ್ಷಗಾನ ತಿರುಗಾಟದಲ್ಲಿ ಹಾಸ್ಯಗಾರ ಪಾತ್ರವಲ್ಲದೆ, ಅಗತ್ಯ ಬಿದ್ದರೆ ಇತರ ಪಾತ್ರಗಳನ್ನೂ ಅವರು ನಿರ್ವಹಿಸುತ್ತಿದ್ದರು.

ಮೃತರ ನಿಧನಕ್ಕೆ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

Leave a comment

Your email address will not be published. Required fields are marked *

Emedia Advt3 Emedia Advt1 Emedia Advt2