• Home  
  • ತೆಂಕ ಎರ್ಮಾಳು ಕಿನಾರ ಆಂಗ್ಲ ಮಾಧ್ಯಮ ಶಾಲೆ ಯಲ್ಲಿ ಮಾದಕ ವಸ್ತು ವಿರೋಧಿ ದಿನಾಚರಣೆ (Anti drug day Celebration at Tenka Yermala Kinara English Medium School)
- ಶಾಲಾ ಕಾಲೇಜು

ತೆಂಕ ಎರ್ಮಾಳು ಕಿನಾರ ಆಂಗ್ಲ ಮಾಧ್ಯಮ ಶಾಲೆ ಯಲ್ಲಿ ಮಾದಕ ವಸ್ತು ವಿರೋಧಿ ದಿನಾಚರಣೆ (Anti drug day Celebration at Tenka Yermala Kinara English Medium School)

Share: ತೆಂಕ ಎರ್ಮಾಳು ಕಿನಾರ ಆಂಗ್ಲ ಮಾಧ್ಯಮ ಶಾಲೆ ಯಲ್ಲಿ ಮಾದಕ ವಸ್ತು ವಿರೋಧಿ ದಿನಾಚರಣೆ (Yermal) ಎರ್ಮಾಳು: ಎರ್ಮಾಳು ತೆಂಕ ಎಜುಕೇಶನ್ ಸೊಸೈಟಿ ಸಂಚಾಲಿತ ಕಿನಾರ ಆಂಗ್ಲ ಮಾಧ್ಯಮ ಶಾಲೆ ಯಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ ಆಚರಿಸಲಾಯಿತು.  ಪಡುಬಿದ್ರಿ ಪೊಲೀಸ್ ಠಾಣೆಯ ಸಹಾಯಕ ಸಬ್ ಇನ್ಸ್ಪೆಕ್ಟರ್ ಶಸುರೇಶ್ ಭಟ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅವರಉ ಈ ಸಂದರ್ಭ ಮಾದಕ ವಸ್ತು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಮಾತನಾಡಿದರು. ಅಲ್ಲದೆ  ತಂಬಾಕು ಸೇವನೆಯು ಕಾನೂನು ಬಾಹಿರವಾಗಿದ್ದು, […]

ತೆಂಕ ಎರ್ಮಾಳು ಕಿನಾರ ಆಂಗ್ಲ ಮಾಧ್ಯಮ ಶಾಲೆ ಯಲ್ಲಿ ಮಾದಕ ವಸ್ತು ವಿರೋಧಿ ದಿನಾಚರಣೆ

(Yermal) ಎರ್ಮಾಳು: ಎರ್ಮಾಳು ತೆಂಕ ಎಜುಕೇಶನ್ ಸೊಸೈಟಿ ಸಂಚಾಲಿತ ಕಿನಾರ ಆಂಗ್ಲ ಮಾಧ್ಯಮ ಶಾಲೆ ಯಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ ಆಚರಿಸಲಾಯಿತು.

 ಪಡುಬಿದ್ರಿ ಪೊಲೀಸ್ ಠಾಣೆಯ ಸಹಾಯಕ ಸಬ್ ಇನ್ಸ್ಪೆಕ್ಟರ್ ಶಸುರೇಶ್ ಭಟ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಅವರಉ ಈ ಸಂದರ್ಭ ಮಾದಕ ವಸ್ತು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಮಾತನಾಡಿದರು. ಅಲ್ಲದೆ  ತಂಬಾಕು ಸೇವನೆಯು ಕಾನೂನು ಬಾಹಿರವಾಗಿದ್ದು, ತಮಗೇನಾದರೂ ಅಂತಹ ವಿಚಾರಗಳು ಕಂಡು ಬಂದಲ್ಲಿ ಪೊಲೀಸರಿಗೆ ದೂರು ನೀಡುವುದು ಹಾಗೂ  ಇತರರಿಗೆ ಇದರ ಬಗ್ಗೆ ತಿಳಿ ಹೇಳಬೇಕೆಂದು ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು.

 ಈ ಸಂದರ್ಭ ಎಲ್ಲಾ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಮಾದಕ ವಸ್ತುಗಳನ್ನು ಯಾವುದೇ ಕಾರಣಕ್ಕೂ ತೆಗೆದುಕೊಳ್ಳುವುದಿಲ್ಲ ಎಂಬ ಪ್ರತಿಜ್ಞೆಗೈದರು.

 ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎರ್ಮಾಳು ತೆಂಕ ಎಜುಕೇಶನ್ ಸೊಸೈಟಿಯ ಅಧ್ಯಕ್ಷರಾದ ಕಿಶೋರ್ ಕುಮಾರ್ ವಹಿಸಿದ್ದರು.

 ಪಡುಬಿದ್ರಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್  ಹೇಮರಾಜ್, ಎರ್ಮಾಳು ತೆಂಕ ಎಜುಕೇಶನ್ ಸೊಸೈಟಿಯ ಕಾರ್ಯದರ್ಶಿ ಪ್ರಭಾಕರ್ ಪುತ್ರನ್ ಉಪಸ್ಥಿತರಿದ್ದರು.

  ಮುಖ್ಯೋಪಾಧ್ಯಾಯನಿ ಶ್ರೀಮತಿ ಪ್ರೀತಿ ಸುವರ್ಣ ಸ್ವಾಗತಿಸಿದರು. ಸಹ ಶಿಕ್ಷಕಿ ಶ್ರೀಮತಿ ಸರಿತಾ ಸಂದೇಶ್ ನಿರೂಪಿಸಿ ವಂದಿಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.