ತೆಕ್ಕಟ್ಟೆ ಬಳಿ ಭೀಕರ ಅಪಘಾತ: ಹಲವರಿಗೆ ಗಾಯ, ಇಬ್ಬರು ಗಂಭೀರ
ಸಿಸಿ ಕ್ಯಾಮೆರಾದಲ್ಲಿ ಭೀಕರ ದೃಶ್ಯ ಸೆರೆ
(Thekkatte) ತೆಕ್ಕಟ್ಟೆ: ಇನ್ನೋವಾ ಕಾರಿಗೆ ಹಿಂದಿನಿಂದ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಕುಂಭಾಶಿ ಸಮೀಪ ಚಂಡಿಕಾ ದುರ್ಗಾಪರಮೇಶ್ವರೀ ದೇವಸ್ಥಾನದ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಜೆ ಸಂಭವಿಸಿದೆ.
ಏಳು ಮಂದಿ ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಕೊಲ್ಲೂರು ದೇವರ ದರ್ಶನ ಮುಗಿಸಿ ಕೇರಳ ಕಡೆಗೆ ಪ್ರಯಾಣಿಸುತ್ತಿದ್ದ ಸಂದರ್ಭ, ಕುಂಭಾಶಿ ಚಂಡಿಕಾ ದುರ್ಗಾಪರಮೇಶ್ವರೀ ದೇವಸ್ಥಾನದ ಬಳಿ ಚಾಲಕ ರಿವರ್ಸ್ ತೆಗೆಯುತ್ತಿದ್ದ. ಈ ವೇಳೆ ಹೆದ್ದಾರಿಯಲ್ಲಿ ವೇಗವಾಗಿ ಬಂದ ಮೀನಿನ ಲಾರಿ ಕಾರಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.
ಪರಿಣಾಮ ಕಾರಿನಲ್ಲಿದ್ದವರಿಗೆ ತೀವ್ರ ಗಾಯವಾಗಿದ್ದು, ಅವರನ್ನು ಕೋಟೇಶ್ವರ ಹಾಗೂ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರ ಸ್ಥಿತಿ ಗಂಭೀರವಾಗಿದೆ.
ಕಾರಿನಲ್ಲಿದ್ದವರು ಕೇರಳ ಮೂಲದವರು ಎನ್ನಲಾಗಿದೆ.
ಘಟನೆಯಲ್ಲಿ ಎರಡೂ ವಾಹನಗಳು ಜಖಂಗೊಂಡಿವೆ. ಕುಂದಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

