ದಂಡತೀರ್ಥ ಸಮೂಹ ವಿದ್ಯಾಸಂಸ್ಥೆಗಳಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಪ್ರಾಂಶುಪಾಲ ನೀಲಾನಂದ ನಾಯ್ಕ್
(Kaup) ಕಾಪು : ದಂಡತೀರ್ಥ ಸಮೂಹ ವಿದ್ಯಾಸಂಸ್ಥೆಗಳಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ. ಆರ್. ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾಲೇಜಿನ ಪ್ರಾಂಶುಪಾಲರಾದ ಎಂ. ನೀಲಾನಂದ ನಾಯ್ಕ್ ಇವರು ದೀಪ ಬೆಳಗಿಸಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕನ್ನಡ ಮಾಧ್ಯಮ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಕೃಪ ಅಮ್ಮನ್ನ, ಶ್ರೀಮತಿ ಜಾನೆಟ್, ಕಾಲೇಜು ಉಪನ್ಯಾಸಕರಾದ ಸೂರತ್ ಕುಮಾರ್ ಹಾಗೂ ಶಿಕ್ಷಕ -ಶಿಕ್ಷಕೇತರ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

