ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ವರ್ಗಾವಣೆ, ಮುಲ್ಲೈ ಮುಹಿಲನ್ ನೂತನ ಜಿಲ್ಲಾಧಿಕಾರಿಯಾಗಿ ಆಯ್ಕೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಮುಲ್ಲೈ ಮುಹಿಲನ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಲಾಗಿದೆ.
ನಿಕಟಪೂರ್ವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ವರ್ಗಾವಣೆಗೊಂಡಿದ್ದು, ಅವರಿಂದ ತೆರವಾದ ಸ್ಥಾನಕ್ಕೆ ಮುಲ್ಲೈ ಮುಹಿಲನ್ ಅವರನ್ನು ನೇಮಕ ಮಾಡಲಾಗಿದೆ.
2013ರ ಸಾಲಿನ ಐಎಎಸ್ ಅಧಿಕಾರಿಯಾಗಿರುವ ಮುಲ್ಲೈ ಮುಹಿಲನ್ ಸದ್ಯ ಬೆಂಗಳೂರಿನ ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್ ಎಕ್ಸಿಕ್ಯೂಟಿವ್ ಡೈರೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದರು.

