• Home  
  •   ದುಬೈನಲ್ಲಿ 2023 ಯೂತ್ ಐಕಾನ್ ಅಂತಾರಾಷ್ಟ್ರೀಯ ಪ್ರಶಸ್ತಿಗೆ ಕಾಪುವಿನ ಖ್ಯಾತ ಸಮಾಜ ಸೇವಕ ಫಾರೂಕ್ ಚಂದ್ರನಗರ ಆಯ್ಕೆ (Farook Chandranagara Got, youth icon 2023 dubai International Award)
- ಜೀವನಶೈಲಿ - ದೇಶ-ವಿದೇಶ

  ದುಬೈನಲ್ಲಿ 2023 ಯೂತ್ ಐಕಾನ್ ಅಂತಾರಾಷ್ಟ್ರೀಯ ಪ್ರಶಸ್ತಿಗೆ ಕಾಪುವಿನ ಖ್ಯಾತ ಸಮಾಜ ಸೇವಕ ಫಾರೂಕ್ ಚಂದ್ರನಗರ ಆಯ್ಕೆ (Farook Chandranagara Got, youth icon 2023 dubai International Award)

Share:   ದುಬೈನಲ್ಲಿ 2023 ಯೂತ್ ಐಕಾನ್ ಅಂತಾರಾಷ್ಟ್ರೀಯ ಪ್ರಶಸ್ತಿಗೆ ಕಾಪುವಿನ ಖ್ಯಾತ ಸಮಾಜ ಸೇವಕ ಫಾರೂಕ್ ಚಂದ್ರನಗರ ಆಯ್ಕೆ ಕಾಪು:  ಶಿರ್ವ ರೋಟರಿ ಕ್ಲಬ್  ಇದರ ಅಧ್ಯಕ್ಷ, ಯುವ ನಾಯಕರು ಉದ್ಯಮಿ ಮೊಹಮ್ಮದ್ ಫಾರೂಕ್ ಚಂದ್ರನಗರರವರು  ಕಾಪು ಪರಿಸರದಲ್ಲಿ ಕಳೆದ 25 ವರ್ಷಗಳಿಂದ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದು, ಅವರ ಸೇವೆಯನ್ನು ಗುರುತಿಸಿ ಡಿಸೆಂಬರ್ 10ರಂದು ದುಬೈ ಅಲ್ ಖುಷಿಸ್ ಉಡ್ಲಮ್ ಪಾರ್ಕ್ ದುಬೈ ಶಾಲಾ ಸಭಾಂಗಣದಲ್ಲಿ ನಡೆಯುವ ಗಡಿನಾಡ ಉತ್ಸವ ಕಾರ್ಯಕ್ರಮದಲ್ಲಿ ಹಲವಾರು ದೇಶ ಹಾಗೂ ವಿದೇಶದ […]

  ದುಬೈನಲ್ಲಿ 2023 ಯೂತ್ ಐಕಾನ್ ಅಂತಾರಾಷ್ಟ್ರೀಯ ಪ್ರಶಸ್ತಿಗೆ ಕಾಪುವಿನ ಖ್ಯಾತ ಸಮಾಜ ಸೇವಕ ಫಾರೂಕ್ ಚಂದ್ರನಗರ ಆಯ್ಕೆ

ಕಾಪು:  ಶಿರ್ವ ರೋಟರಿ ಕ್ಲಬ್  ಇದರ ಅಧ್ಯಕ್ಷ, ಯುವ ನಾಯಕರು ಉದ್ಯಮಿ ಮೊಹಮ್ಮದ್ ಫಾರೂಕ್ ಚಂದ್ರನಗರರವರು  ಕಾಪು ಪರಿಸರದಲ್ಲಿ ಕಳೆದ 25 ವರ್ಷಗಳಿಂದ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದು, ಅವರ ಸೇವೆಯನ್ನು ಗುರುತಿಸಿ ಡಿಸೆಂಬರ್ 10ರಂದು ದುಬೈ ಅಲ್ ಖುಷಿಸ್ ಉಡ್ಲಮ್ ಪಾರ್ಕ್ ದುಬೈ ಶಾಲಾ ಸಭಾಂಗಣದಲ್ಲಿ ನಡೆಯುವ ಗಡಿನಾಡ ಉತ್ಸವ ಕಾರ್ಯಕ್ರಮದಲ್ಲಿ ಹಲವಾರು ದೇಶ ಹಾಗೂ ವಿದೇಶದ ಗಣ್ಯತಿಗಣ್ಯರ ಸಮ್ಮುಖದಲ್ಲಿ 2023 ರ ಪ್ರತಿಷ್ಠಿತ ಅಂತಾರಾಷ್ಟ್ರೀಯ ಪ್ರಶಸ್ತಿ ಯೂತ್ ಐಕಾನ್ ಪಡೆಯಲಿದ್ದಾರೆ ಎಂದು ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ(ರಿ) ದುಬೈ ಘಟಕದ ಅಧ್ಯಕ್ಷರಾದ ನ್ಯಾಯವಾದಿ ಇಬ್ರಾಹಿಂ ಖಲೀಲ್ ಅರಿಮಲೆ ಮತ್ತು ಕಾರ್ಯದರ್ಶಿ ಅಮರದೀಪ ಕಲ್ಲುರಾಯ ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಫಾರುಕ್‌ ಮಹಮ್ಮದ್‌ರವರು ಜಾತಿ, ಮತ ಭೇದ ಇಲ್ಲದೆ ಎಲ್ಲರೊಂದಿಗೆ ಉತ್ತಮ ಬಾಂದವ್ಯ ಹೊಂದಿದ್ದು, ಗ್ರಾಮ ಮಟ್ಟದಲ್ಲಿ ಜನರಿಗೆ ತನ್ನಿಂದ ಆಗುವ ಸಹಾಯ ಮಾಡುತ್ತಿದ್ದಾರೆ.

  ಕುಡಿಯುವ ನೀರು, ರಸ್ತೆ ನಿರ್ಮಾಣ ಸಹಿತ ಕೊರೋನಾ  ಮಹಾಮಾರಿಯ ಸಂದರ್ಭ ಸಂತ್ರಸ್ತರಿಗೆ  ಕಾಪು ಸಮಾಜ ಸೇವಾ ವೇದಿಕೆಯ ಅಧ್ಯಕ್ಷರಾಗಿ, ಅದರ ಮುಖಾಂತರ ಸುಮಾರು 6000 ಕ್ಕೂ ಮಿಕ್ಕಿ ಮನೆಗೆ ಅಕ್ಕಿ ಪಡಿತರ ಕಿಟ್ ನೀಡಿ ಶ್ಲಾಘನೀಯ ಸೇವೆ ಮಾಡಿದ್ದಾರೆ.

 ಫಾರೂಕ್‌ರವರ ಸಾಮಾಜಿಕ ಸೇವೆಯನ್ನು ಗುರುತಿಸಿ ಕರ್ನಾಟಕ ಸರಕಾರದ ಪ್ರತಿಷ್ಠಿತ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಏಷ್ಯಾ ಫೇಷಿಫಿಕ್ ಗೋಲ್ಡ್ ಸ್ಟಾರ್ ಅವಾರ್ಡ್ ದೆಹಲಿ, ಜನಸೇವಾ ಸದ್ಭಾವನ್ ಪುರಸ್ಕಾರ್ ಅವಾರ್ಡ್ ಗೋವಾ, ಕೈರಲಿ ಪ್ರಕಾಶನ ಕೊಡಲ್ಪಟ್ಟ ಸಮಾಜ ರತ್ನ ಕೇರಳ, ಕರ್ನಾಟಕ ಜಾನಪದ ಪರಿಷತ್ ಬೆಂಗಳೂರು ಸಾಧಕ ರತ್ನ ಪ್ರಶಸ್ತಿ, ಕರ್ನಾಟಕ ರಾಷ್ಟ್ರ ಸಮಿತಿ ಉಡುಪಿ ವತಿಯಿಂದ ಸಮಾಜ ರತ್ನ ಪ್ರಶಸ್ತಿ ಸೇರಿದಂತೆ ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಹಲವಾರು ಪ್ರಶಸ್ತಿ ಪಡೆದು ನೂರಾರು ಸಂಘ ಸಂಸ್ಥೆಗಳಿಂದ ಸನ್ಮಾನ ಮತ್ತು ಅಭಿನಂದನೆ ಫಾರೂಕ್‌ ಪಡೆದಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.