• Home  
  • ದೆಹಲಿಯ ಏಮ್ಸ್‌ ಆಸ್ಪತ್ರೆಯಲ್ಲಿ ಬೆಂಕಿ ಅವಗಡ: ರೋಗಿಗಳು ಸುರಕ್ಷಿತ
- Uncategorised

ದೆಹಲಿಯ ಏಮ್ಸ್‌ ಆಸ್ಪತ್ರೆಯಲ್ಲಿ ಬೆಂಕಿ ಅವಗಡ: ರೋಗಿಗಳು ಸುರಕ್ಷಿತ

Share: ದೆಹಲಿಯ ಏಮ್ಸ್‌ ಆಸ್ಪತ್ರೆಯಲ್ಲಿ ಬೆಂಕಿ ಅವಗಡ: ರೋಗಿಗಳು ಸುರಕ್ಷಿತ ನವದೆಹಲಿ: ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್‌ ಆಫ್ ಮೆಡಿಕಲ್ ಸೈನ್ಸಸ್ (ಎಐಐಎಂಎಸ್) ಕಟ್ಟಡದ ಮಹಡಿಯಲ್ಲಿ ಸೋಮವಾರ ಬೆಂಕಿ ಕಾಣಿಸಿಕೊಂಡಿದೆ.  ಏಮ್ಸ್‌ನ ತುರ್ತು ಚಿಕಿತ್ಸಾ ವಿಭಾಗದಿಂದ ಸೋಮವಾರ ಬೆಳಗ್ಗೆ 11.54ಕ್ಕೆ ಬೆಂಕಿ ಅವಘಡ ಉಂಟಾಗಿರುವ ಕುರಿತು ಕರೆ ಬಂದಿದ್ದು, ಒಟ್ಟು 8 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ ಎಂದು ದೆಹಲಿ ಅಗ್ನಿಶಾಮಕ ಸೇವೆಗಳ ನಿರ್ದೇಶಕ ಅತುಲ್ ಗಾರ್ಗ್ ಹೇಳಿದ್ದಾರೆ.  ಮೂಲಗಳ ಪ್ರಕಾರ, ಕಟ್ಟಡದ ಎಂಡೋಸ್ಕೋಪಿ ಕೊಠಡಿಯಲ್ಲಿ ಬೆಂಕಿ […]

ದೆಹಲಿಯ ಏಮ್ಸ್‌ ಆಸ್ಪತ್ರೆಯಲ್ಲಿ ಬೆಂಕಿ ಅವಗಡ: ರೋಗಿಗಳು ಸುರಕ್ಷಿತ

ನವದೆಹಲಿ: ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್‌ ಆಫ್ ಮೆಡಿಕಲ್ ಸೈನ್ಸಸ್ (ಎಐಐಎಂಎಸ್) ಕಟ್ಟಡದ ಮಹಡಿಯಲ್ಲಿ ಸೋಮವಾರ ಬೆಂಕಿ ಕಾಣಿಸಿಕೊಂಡಿದೆ.

 ಏಮ್ಸ್‌ನ ತುರ್ತು ಚಿಕಿತ್ಸಾ ವಿಭಾಗದಿಂದ ಸೋಮವಾರ ಬೆಳಗ್ಗೆ 11.54ಕ್ಕೆ ಬೆಂಕಿ ಅವಘಡ ಉಂಟಾಗಿರುವ ಕುರಿತು ಕರೆ ಬಂದಿದ್ದು, ಒಟ್ಟು 8 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ ಎಂದು ದೆಹಲಿ ಅಗ್ನಿಶಾಮಕ ಸೇವೆಗಳ ನಿರ್ದೇಶಕ ಅತುಲ್ ಗಾರ್ಗ್ ಹೇಳಿದ್ದಾರೆ.

 ಮೂಲಗಳ ಪ್ರಕಾರ, ಕಟ್ಟಡದ ಎಂಡೋಸ್ಕೋಪಿ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ.

 ಎಲ್ಲಾ ರೋಗಿಗಳನ್ನು ಸುರಕ್ಷಿತವಾಗಿ ಹೊರ ಸಾಗಿಸಲಾಗಿದೆ  ಎಂದು ಮೂಲಗಳು ಹೇಳಿವೆ. ಬೆಂಕಿ ಅನಾಹುತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.

Leave a comment

Your email address will not be published. Required fields are marked *

eMedia Kannada  @2025. All Rights Reserved.