• Home  
  • ದೇಶದ ಆರ್ಥಿಕತೆಗೆ ಸಹಕಾರಿ ಕ್ಷೇತ್ರದ ಕೊಡುಗೆ ಮಹತ್ವದ್ದಾಗಿದೆ: ಎಸ್.ಆರ್. ಸತೀಶ್ ಚಂದ್ರ (Contribution of co-operative sector to country’s economy is significant: S.R. Satish Chandra)
- ಸಂಘ, ಸಂಸ್ಥೆಗಳು

ದೇಶದ ಆರ್ಥಿಕತೆಗೆ ಸಹಕಾರಿ ಕ್ಷೇತ್ರದ ಕೊಡುಗೆ ಮಹತ್ವದ್ದಾಗಿದೆ: ಎಸ್.ಆರ್. ಸತೀಶ್ ಚಂದ್ರ (Contribution of co-operative sector to country’s economy is significant: S.R. Satish Chandra)

Share: ದೇಶದ ಆರ್ಥಿಕತೆಗೆ ಸಹಕಾರಿ ಕ್ಷೇತ್ರದ ಕೊಡುಗೆ ಮಹತ್ವದ್ದಾಗಿದೆ: ಎಸ್.ಆರ್. ಸತೀಶ್ ಚಂದ್ರ ಶಿರ್ವ ವ್ಯವಸಾಯ ಸೇವಾ ಸಹಕಾರಿ ಸಂಘದ ಸಭಾಭವನದಲ್ಲಿ ನಡೆದ ಕಾರ್ಯಕಾರಿಣಿ (Shirva) ಶಿರ್ವ : ದೇಶದ ಆರ್ಥಿಕ ಅಭಿವೃದ್ಧಿಯಲ್ಲಿ ಸಹಕಾರಿ ಕ್ಷೇತ್ರದ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ವಿಶೇಷವಾಗಿ ಗ್ರಾಮೀಣ ಆರ್ಥಿಕತೆಯನ್ನು ಸದೃಢಗೊಳಿಸುವಲ್ಲಿ ಸಹಕಾರಿ ಸಂಸ್ಥೆಗಳು ಪ್ರಮುಖ ಪಾತ್ರ ವಹಿಸುತ್ತಿವೆ ಎಂದು ಸಹಕಾರ ಭಾರತಿ ರಾಷ್ಟ್ರೀಯ ಸಂಘಟನಾ ಪ್ರಮುಖರಾದ ಎಸ್.ಆರ್. ಸತೀಶ್ ಚಂದ್ರ ಹೇಳಿದರು.   ಅವರು ಮಂಗಳವಾರ ಶಿರ್ವ ವ್ಯವಸಾಯ ಸೇವಾ ಸಹಕಾರಿ […]

(Shirva) ಶಿರ್ವ : ದೇಶದ ಆರ್ಥಿಕ ಅಭಿವೃದ್ಧಿಯಲ್ಲಿ ಸಹಕಾರಿ ಕ್ಷೇತ್ರದ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ವಿಶೇಷವಾಗಿ ಗ್ರಾಮೀಣ ಆರ್ಥಿಕತೆಯನ್ನು ಸದೃಢಗೊಳಿಸುವಲ್ಲಿ ಸಹಕಾರಿ ಸಂಸ್ಥೆಗಳು ಪ್ರಮುಖ ಪಾತ್ರ ವಹಿಸುತ್ತಿವೆ ಎಂದು ಸಹಕಾರ ಭಾರತಿ ರಾಷ್ಟ್ರೀಯ ಸಂಘಟನಾ ಪ್ರಮುಖರಾದ ಎಸ್.ಆರ್. ಸತೀಶ್ ಚಂದ್ರ ಹೇಳಿದರು.

  ಅವರು ಮಂಗಳವಾರ ಶಿರ್ವ ವ್ಯವಸಾಯ ಸೇವಾ ಸಹಕಾರಿ ಸಂಘದ ಸಭಾಭವನದಲ್ಲಿ ನಡೆದ ಸಹಕಾರ ಭಾರತಿ ಮೈಸೂರು ವಿಭಾಗದ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

   ಸಹಕಾರಿ ಸಂಸ್ಥೆಗಳು ಹೆಚ್ಚಿನ ವೃತ್ತಿಪರತೆ, ಪಾರದರ್ಶಕತೆ ಹಾಗೂ ತಂತ್ರಜ್ಞಾನದ ಪರಿಣಾಮಕಾರಿ ಬಳಕೆಗೆ ಒತ್ತು ನೀಡಬೇಕಿದ್ದು, ಸದಸ್ಯ ಕೇಂದ್ರಿತ ಸೇವೆಗಳ ಮೂಲಕ ಸಹಕಾರಿ ಚಳವಳಿಯನ್ನು ಮತ್ತಷ್ಟು ಬಲಪಡಿಸಬೇಕೆಂದು ಅವರು ಕರೆ ನೀಡಿದರು.

   ಸಭೆಯ ಅಧ್ಯಕ್ಷತೆಯನ್ನು ಸಹಕಾರ ಭಾರತಿ ರಾಜ್ಯ ಉಪಾಧ್ಯಕ್ಷ ಸುಬ್ರಹ್ಮಣ್ಯ ಎಡಗೆರೆ ವಹಿಸಿದ್ದರು.

   ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಾಣೂರು ನರಸಿಂಹ ಕಾಮತ್ ಮಾತನಾಡಿ, ಪ್ರತಿ ಜಿಲ್ಲೆಯಲ್ಲಿ ನಿಗದಿತ ದಿನಾಂಕದಂದು ನಿಯಮಿತ ಜಿಲ್ಲಾ ಕಾರ್ಯಕಾರಿಣಿ ಸಭೆಗಳನ್ನು ನಡೆಸುವ ಜೊತೆಗೆ, ಪ್ರತಿ ತಿಂಗಳು ವಿವಿಧ ತಾಲೂಕುಗಳಲ್ಲಿ ಸಭೆಗಳನ್ನು ಆಯೋಜಿಸುವ ಮೂಲಕ ತಾಲೂಕು ಮಟ್ಟದಲ್ಲಿ ಸಂಘಟನೆಯನ್ನು ಇನ್ನಷ್ಟು ಬಲಪಡಿಸಬೇಕೆಂದು ಜಿಲ್ಲಾ ಪ್ರಮುಖರಿಗೆ ಮಾರ್ಗದರ್ಶನ ನೀಡಿದರು.

   ರಾಜ್ಯ ಕಾರ್ಯದರ್ಶಿ ಮಾಧುಸ್ವಾಮಿ ಮಾತನಾಡಿ, ನವೆಂಬರ್‌ನಲ್ಲಿ ಮೈಸೂರು ನಗರದ ಹೊರವಲಯದ ಬನ್ನೂರಿನಲ್ಲಿ ಮೈಸೂರು ವಿಭಾಗದ ಹೈನುಗಾರ ಪ್ರಕೋಷ್ಟದ ಸಮಾವೇಶ ಆಯೋಜಿಸಲಾಗುವುದು ಎಂದರು.

ಸಹಕಾರ ಭಾರತಿ ಕೊಡಗು ಜಿಲ್ಲಾಧ್ಯಕ್ಷ ಅಜಯ್ ಕುಮಾರ್ ರವರು, ಡಿಸೆಂಬರ್‌ನಲ್ಲಿ ಮಡಿಕೇರಿಯಲ್ಲಿ ಮೈಸೂರು ವಿಭಾಗದ ಒಂದು ದಿನದ ಪ್ಯಾಕ್ಸ್ ಪ್ರಕೋಷ್ಟದ ಅಭ್ಯಾಸ ವರ್ಗ ಆಯೋಜಿಸಲಾಗುವುದು ಎಂದು ಹೇಳಿದರು.

ರಾಜ್ಯ ಸಂಘಟನಾ ಕಾರ್ಯದರ್ಶಿ ಶ್ರೀ ಮಂಜುನಾಥ ಬಿ.ಆರ್. ಮಾತನಾಡಿ, ಹಾಸನ, ಮಂಡ್ಯ ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಆಗಸ್ಟ್ 31ರೊಳಗೆ ಪೂರ್ಣ ಪ್ರಮಾಣದ ಜಿಲ್ಲಾ ಸಮಿತಿಗಳನ್ನು ರಚಿಸಿ ಸಂಘಟನೆಯ ಚಟುವಟಿಕೆಗಳಿಗೆ ವೇಗ ನೀಡುವಂತೆ ವಿಭಾಗದ ಪ್ರಮುಖರಿಗೆ ಸೂಚಿಸಿದರು.

   ಮಂಡ್ಯದಲ್ಲಿ ಮೈಸೂರು ವಿಭಾಗದ ತಾಲೂಕು ಪ್ರಧಾನ ಕಾರ್ಯದರ್ಶಿಗಳು ಮತ್ತು ಸಂಘಟನಾ ಕಾರ್ಯದರ್ಶಿಗಳಿಗೆ ಒಂದು ದಿನದ ಅಭ್ಯಾಸ ವರ್ಗವನ್ನು ಆಯೋಜಿಸಲಾಗುವುದು ಎಂದು ತಿಳಿಸಿದರು.

   ಮೈಸೂರು ವಿಭಾಗದ ಮೈಸೂರು ನಗರ, ಮೈಸೂರು ಗ್ರಾಮಾಂತರ, ಹಾಸನ, ಮಂಡ್ಯ, ಕೊಡಗು, ದಕ್ಷಿಣ ಕನ್ನಡ, ಮಂಗಳೂರು ಮಹಾನಗರ, ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಪ್ರಮುಖರು ತಮ್ಮ ಜಿಲ್ಲೆಗಳ ಕಾರ್ಯಚಟುವಟಿಕೆಗಳ ವರದಿಯನ್ನು ಮಂಡಿಸಿದರು.

ಸಭೆಯಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಬೃಹತ್ ಹೈನುಗಾರರ ಸಮಾವೇಶ, ಮಂಗಳೂರು ಮಹಾನಗರದಲ್ಲಿ ಕ್ರೆಡಿಟ್ ಸಹಕಾರಿ ಸಮಾವೇಶ ಹಾಗೂ ಚಿಕ್ಕಮಗಳೂರಿನಲ್ಲಿ ಜಿಲ್ಲಾ ಮಟ್ಟದ ಪ್ಯಾಕ್ಸ್ ಸಮಾವೇಶ ಆಯೋಜಿಸಲು ನಿರ್ಧರಿಸಲಾಯಿತು.

  ಇದೇ ಸಂದರ್ಭದಲ್ಲಿ ದೇಶದ ಪ್ರತಿಷ್ಠಿತ ಕ್ಯಾಂಪ್ಕೋ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಪ್ರಥಮ ಬಾರಿಗೆ ಸಂಸ್ಥೆಗೆ ಆಗಮಿಸುತ್ತಿರುವ ಶ್ರೀ ಎಸ್ ಆರ್ ಸತೀಶ್ ಚಂದ್ರರವರಿಗೆ ಶಿರ್ವ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ಪರವಾಗಿ ಸನ್ಮಾನಿಸಿ, ಗೌರವಿಸಲಾಯಿತು.

    ಸಭೆಯಲ್ಲಿ ಮೈಸೂರು ನಗರ, ಮೈಸೂರು ಗ್ರಾಮಾಂತರ, ಹಾಸನ, ಮಂಡ್ಯ, ಕೊಡಗು, ದಕ್ಷಿಣ ಕನ್ನಡ, ಮಂಗಳೂರು ಮಹಾನಗರ, ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಂದ ಆಗಮಿಸಿದ್ದ ಸುಮಾರು 40 ಮಂದಿ ರಾಷ್ಟ್ರೀಯ, ರಾಜ್ಯಮಟ್ಟದ ಜವಾಬ್ದಾರಿಯುಳ್ಳ ಪ್ರಮುಖರು ಹಾಗೂ ಜಿಲ್ಲಾ ಮಟ್ಟದ ಪದಾಧಿಕಾರಿಗಳು ಭಾಗವಹಿಸಿ ಸಂಘಟನೆಯ ಮುಂದಿನ ಕಾರ್ಯಯೋಜನೆಗಳ ಕುರಿತು ಸಮಗ್ರ ಚರ್ಚೆ ನಡೆಸಿದರು.

  ವೇದಿಕೆಯಲ್ಲಿ ರಾಜ್ಯ ಮಹಿಳಾ ಪ್ರಮುಖ್ ಶ್ರೀಮತಿ ವಿದ್ಯಾ ಪೈ, ರಾಷ್ಟ್ರೀಯ ಗ್ರಾಹಕ ಭಂಡಾರ ಪ್ರಮುಖ ಶ್ರೀಮತಿ ಭಾರತಿ ಭಟ್, ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರಾದ ಮಂಜುನಾಥ ಎಸ್ಕೆ ಯವರು ಉಪಸ್ಥಿತರಿದ್ದರು.

  ಉಡುಪಿ ಜಿಲ್ಲಾಧ್ಯಕ್ಷ ದಿನೇಶ್ ಹೆಗಡೆ ಆತ್ರಾಡಿ ಸ್ವಾಗತಿಸಿದರು. ಮೈಸೂರು ವಿಭಾಗ ಪ್ರಮುಖ ಮೋಹನ್ ಕುಂಬಳೇಕರ್ ಕಾರ್ಯಕ್ರಮ ನಿರೂಪಿಸಿದರು. ಶಿರ್ವ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಹಾಗೂ ಸಹಕಾರ ಭಾರತಿ ಉಡುಪಿ ಜಿಲ್ಲಾ ಕೋಶಾಧ್ಯಕ್ಷ ಪ್ರಸಾದ್ ಶೆಟ್ಟಿ ವಂದಿಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.