• Home  
  • “ದೈನಂದಿನ ಜೀವನದಲ್ಲಿ ವಿವೇಕನಂದರ ಚಿಂತನೆಗಳು” ಎಂಬ ವಿಷಯದ ಕುರಿತು ಉಪನ್ಯಾಸ (Invited Talk on Swami Vivekananda’s Thoughts in Daily Life Held at SMVITM Bantakal)
- ಶಾಲಾ ಕಾಲೇಜು

“ದೈನಂದಿನ ಜೀವನದಲ್ಲಿ ವಿವೇಕನಂದರ ಚಿಂತನೆಗಳು” ಎಂಬ ವಿಷಯದ ಕುರಿತು ಉಪನ್ಯಾಸ (Invited Talk on Swami Vivekananda’s Thoughts in Daily Life Held at SMVITM Bantakal)

Share:   “ದೈನಂದಿನ ಜೀವನದಲ್ಲಿ ವಿವೇಕನಂದರ ಚಿಂತನೆಗಳು” ಎಂಬ ವಿಷಯದ ಕುರಿತು ಉಪನ್ಯಾಸ ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದಲ್ಲಿ ನಡೆದ ಕಾರ್ಯಕ್ರಮ  (Bantakal) ಬಂಟಕಲ್: ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯು ಮಂಗಳೂರಿನ ರಾಮಕೃಷ್ಣ ಆಶ್ರಮದ ಸಹಯೋಗದೊಂದಿಗೆ ದೈನಂದಿನ ಜೀವನದಲ್ಲಿ ವಿವೇಕನಂದರ ಚಿಂತನೆಗಳು ಎಂಬ ವಿಷಯದ ಕುರಿತು ಉಪನ್ಯಾಸವನ್ನು ಆಯೋಜಿಸಲಾಗಿತ್ತು.   ಉಪನ್ಯಾಸದಲ್ಲಿ ಮುಖ್ಯ ಅತಿಥಿಗಳಾಗಿ ರಾಮಕೃಷ್ಣ ಆಶ್ರಮದ  ಅಘರಾನಂದಜೀ ಅವರು ಭಾಗವಹಿಸಿದ್ದರು.   ಅವರು ಮಾತನಾಡಿ, […]

 (Bantakal) ಬಂಟಕಲ್: ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯು ಮಂಗಳೂರಿನ ರಾಮಕೃಷ್ಣ ಆಶ್ರಮದ ಸಹಯೋಗದೊಂದಿಗೆ ದೈನಂದಿನ ಜೀವನದಲ್ಲಿ ವಿವೇಕನಂದರ ಚಿಂತನೆಗಳು ಎಂಬ ವಿಷಯದ ಕುರಿತು ಉಪನ್ಯಾಸವನ್ನು ಆಯೋಜಿಸಲಾಗಿತ್ತು.

  ಉಪನ್ಯಾಸದಲ್ಲಿ ಮುಖ್ಯ ಅತಿಥಿಗಳಾಗಿ ರಾಮಕೃಷ್ಣ ಆಶ್ರಮದ  ಅಘರಾನಂದಜೀ ಅವರು ಭಾಗವಹಿಸಿದ್ದರು.

  ಅವರು ಮಾತನಾಡಿ, ಸ್ವಾಮಿ ವಿವೇಕನಂದರ ದೈನಂದಿನ ಚಿಂತನೆಗಳ ಬಗ್ಗೆ ಮಾಹಿತಿಯನ್ನು ನೀಡಿ,  ವಿದ್ಯಾರ್ಥಿಗಳು ಜೀವನದಲ್ಲಿ ಸ್ವಯಂ ಶಿಸ್ತು, ಸಕರಾತ್ಮಕ ಚಿಂತನೆಗಳು ಮತ್ತು ಸೇವಾ ಆಧಾರಿತ ಮನಸ್ಥಿತಿಯನ್ನು ಬೆಳೆಸಿಕೊಳ್ಳಬೇಕು ಎಂದರು.

  ಈ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ನೈತಿಕ ಮೌಲ್ಯಗಳು ಮತ್ತು ಆಧ್ಯಾತ್ಮಿಕ ಜ್ಞಾನವನ್ನು ತಮ್ಮ ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಲು ಪ್ರೇರಣೆ ನೀಡಿತು.

   ಶ್ರೀ ಸೋದೆ ಸಮೂಹ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಡಾ. ರಾಧಾಕೃಷ್ಣ ಐತಾಳ್, ಸಂಸ್ಥೆಯ ಪ್ರಾಂಶುಪಾಲ ಡಾ. ನಾಗರಾಜ್ ಭಟ್ ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜಕರಾದ ಸಚಿನ್ ಭಟ್ ಸಮಾರಂಭದಲ್ಲಿ ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.