• Home  
  • ದ್ವಿತೀಯ ಪಿಯುಸಿ ಪರೀಕ್ಷೆ: ಉಡುಪಿ ಜಿಲ್ಲೆ ಪ್ರಥಮ ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಶ್ಲಾಘನೆ (Second PUC Exam: Udupi District Chief Minister Lakshmi Hebbalkar praised)
- ಶಾಲಾ ಕಾಲೇಜು

ದ್ವಿತೀಯ ಪಿಯುಸಿ ಪರೀಕ್ಷೆ: ಉಡುಪಿ ಜಿಲ್ಲೆ ಪ್ರಥಮ ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಶ್ಲಾಘನೆ (Second PUC Exam: Udupi District Chief Minister Lakshmi Hebbalkar praised)

Share: ದ್ವಿತೀಯ ಪಿಯುಸಿ ಪರೀಕ್ಷೆ: ಉಡುಪಿ ಜಿಲ್ಲೆ ಪ್ರಥಮ ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಶ್ಲಾಘನೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Bengaluru) ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇಕಡ 96.39 ರಷ್ಟು ಫಲಿತಾಂಶ ಪಡೆಯುವ ಮೂಲಕ ಕರ್ನಾಟಕಕ್ಕೆ ಮೊದಲ ಸ್ಥಾನ ಪಡೆದ ಉಡುಪಿ ಜಿಲ್ಲೆಯ ಸಾಧನೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಶ್ರೀಮತಿ ಲಕ್ಷ್ಮೀ ಹೆಬ್ಬಾಳಕರ್ ಅವರು ಶ್ಲಾಘನೆ […]

(Bengaluru) ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇಕಡ 96.39 ರಷ್ಟು ಫಲಿತಾಂಶ ಪಡೆಯುವ ಮೂಲಕ ಕರ್ನಾಟಕಕ್ಕೆ ಮೊದಲ ಸ್ಥಾನ ಪಡೆದ ಉಡುಪಿ ಜಿಲ್ಲೆಯ ಸಾಧನೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಶ್ರೀಮತಿ ಲಕ್ಷ್ಮೀ ಹೆಬ್ಬಾಳಕರ್ ಅವರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

   ಕರಾವಳಿ ಜಿಲ್ಲೆ ಉಡುಪಿ ಶೈಕ್ಷಣಿಕವಾಗಿ ಮುಂದಿರುವ ಜಿಲ್ಲೆ ಜಿಲ್ಲೆಯ ಹೊರಭಾಗಗಳಿಂದಲೂ ಬಂದು ಇಲ್ಲಿ ವ್ಯಾಸಾಂಗ ಮಾಡುತ್ತಾರೆ. ಹಲವು ವರ್ಷಗಳಿಂದ ಪಿಯುಸಿ ಪರೀಕ್ಷೆಯಲ್ಲಿ ಅಗ್ರ ಎರಡು ಸ್ಥಾನ ಕಾಯ್ದುಕೊಂಡಿರುವ ಉಡುಪಿ ಜಿಲ್ಲೆಯ ಸಾಧನೆ ನಿಜಕ್ಕೂ ಮೆಚ್ಚುವಂಥದ್ದು ಎಂದು ಸಚಿವರು ತಿಳಿಸಿದ್ದಾರೆ.

   ಜಿಲ್ಲೆ ಅಗ್ರಸ್ಥಾನ ಪಡೆಯಲು ಕಾರಣಿಭೂತರಾದ ಶಿಕ್ಷಣ ಇಲಾಖೆಯ ಸಿಬ್ಬಂದಿ ವರ್ಗದವರಿಗೆ, ಎಲ್ಲಾ ಕಾಲೇಜುಗಳಿಗೆ, ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ. ವಿದ್ಯಾರ್ಥಿಗಳ ಜೀವನ ಉಜ್ವಲವಾಗಿರಲಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.