• Home  
  • ದ್ವಿತೀಯ ಪಿಯುಸಿ ಫಲಿತಾಂಶ : ಉಡುಪಿ ಪ್ರಥಮ, ದ.ಕ ದ್ವಿತೀಯ (Second PUC result: Udupi first, D.K second)
- ಶಾಲಾ ಕಾಲೇಜು

ದ್ವಿತೀಯ ಪಿಯುಸಿ ಫಲಿತಾಂಶ : ಉಡುಪಿ ಪ್ರಥಮ, ದ.ಕ ದ್ವಿತೀಯ (Second PUC result: Udupi first, D.K second)

Share: ದ್ವಿತೀಯ ಪಿಯುಸಿ ಫಲಿತಾಂಶ : ಉಡುಪಿ ಪ್ರಥಮ, ದ.ಕ ದ್ವಿತೀಯ file photo (Bengaluru) ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ನಡೆಸುವ ಮೂಲಕ ಫಲಿತಾಂಶ ಘೋಷಣೆ ಮಾಡಿದ್ದಾರೆ.  6,81,079 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅವರಲ್ಲಿ 4,68,439 ಮಂದಿ ತೇರ್ಗಡೆಯಾಗಿದ್ದಾರೆ.  ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ 93.90% ಸಾಧನೆ ಮಾಡುವ ಮೂಲಕ ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದೆ. ಎರಡನೇ ಸ್ಥಾನ ದಕ್ಷಿಣ ಕನ್ನಡ (93.57%), […]

(Bengaluru) ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ನಡೆಸುವ ಮೂಲಕ ಫಲಿತಾಂಶ ಘೋಷಣೆ ಮಾಡಿದ್ದಾರೆ.

 6,81,079 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅವರಲ್ಲಿ 4,68,439 ಮಂದಿ ತೇರ್ಗಡೆಯಾಗಿದ್ದಾರೆ.

 ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ 93.90% ಸಾಧನೆ ಮಾಡುವ ಮೂಲಕ ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದೆ. ಎರಡನೇ ಸ್ಥಾನ ದಕ್ಷಿಣ ಕನ್ನಡ (93.57%), ಮೂರನೇ ಸ್ಥಾನವನ್ನು ಬೆಂಗಳೂರು ದಕ್ಷಿಣ(85.36%) ಪಡೆದುಕೊಂಡಿದೆ.

 ರಾಜ್ಯದಲ್ಲಿ ಒಟ್ಟು 73.45% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಒಟ್ಟು 7,13,862 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು.

 ಮಧ್ಯಾಹ್ನ 1:30ರಿಂದ www.karresults.nic.in . ವೆಬ್‌ಸೈಟಿನಲ್ಲಿ ಫಲಿತಾಂಶ ಲಭ್ಯವಿದೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.