• Home  
  • ದ.ಕ ಮೂಲದ ತಹಶೀಲ್ದಾರ್ ಮನೆಯಲ್ಲಿ ರಾಶಿ ರಾಶಿ ಹಣ
- ಅಪರಾಧ

ದ.ಕ ಮೂಲದ ತಹಶೀಲ್ದಾರ್ ಮನೆಯಲ್ಲಿ ರಾಶಿ ರಾಶಿ ಹಣ

Share: ಬೆಂಗಳೂರು; ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೆ.ಆರ್.ಪುರಂ ತಹಶೀಲ್ದಾರ್ ‘ಅಜಿತ್ ರೈ’ ಬಂಧಿಸಲಾಗಿದೆ. . ತಹಶೀಲ್ದಾರ್​ ಅಜಿತ್ ರೈ ಮನೆ ಮೇಲೆ ನಿನ್ನೆ ದಾಳಿ ನಡೆಸಿ ಶೋಧ ಕಾರ್ಯ ನಡೆಸಿದ್ದ ಲೋಕಾಯುಕ್ತ ಪೊಲೀಸರು ಲಕ್ಷಾಂತರ ನಗದು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ. ಹೆಚ್ಚಿನ ವಿಚಾರಣೆಗಾಗಿ ಅವರನ್ನು ಲೋಕಾಯುಕ್ತ ಪೋಲಿಸರು ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಅಜಿತ್​ ರೈಗೆ ಸಂಬಂಧಿಸಿದ 10 ಕಡೆ ದಾಳಿ ನಡೆಸಿದ್ದ ಲೋಕಾಯುಕ್ತ ಪೊಲೀಸರು 40 ಲಕ್ಷ ನಗದು, 1.90 ಕೋಟಿ ಮೌಲ್ಯದ ವಸ್ತುಗಳನ್ನು ವಶಕ್ಕೆ […]

ಬೆಂಗಳೂರು; ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೆ.ಆರ್.ಪುರಂ ತಹಶೀಲ್ದಾರ್ ‘ಅಜಿತ್ ರೈ’ ಬಂಧಿಸಲಾಗಿದೆ. .

ತಹಶೀಲ್ದಾರ್​ ಅಜಿತ್ ರೈ ಮನೆ ಮೇಲೆ ನಿನ್ನೆ ದಾಳಿ ನಡೆಸಿ ಶೋಧ ಕಾರ್ಯ ನಡೆಸಿದ್ದ ಲೋಕಾಯುಕ್ತ ಪೊಲೀಸರು ಲಕ್ಷಾಂತರ ನಗದು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ.

ಹೆಚ್ಚಿನ ವಿಚಾರಣೆಗಾಗಿ ಅವರನ್ನು ಲೋಕಾಯುಕ್ತ ಪೋಲಿಸರು ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.

ಅಜಿತ್​ ರೈಗೆ ಸಂಬಂಧಿಸಿದ 10 ಕಡೆ ದಾಳಿ ನಡೆಸಿದ್ದ ಲೋಕಾಯುಕ್ತ ಪೊಲೀಸರು 40 ಲಕ್ಷ ನಗದು, 1.90 ಕೋಟಿ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದ್ದು,  ದಾಳಿ ವೇಳೆ ಅಜಿತ್ ರೈಗೆ ಸೇರಿದ 100 ಎಕರೆಗೂ ಅಧಿಕ ವಿವಿಧ ಆಸ್ತಿ ಪತ್ರಗಳು ಸೇರಿದಂತೆ ಇತರೆ ಕಡೆಗಳಲ್ಲಿ ಬೇನಾಮಿ ಹೆಸರಿನಲ್ಲಿ ಅವರು ಆಸ್ತಿಯನ್ನು ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.

ಪುತ್ತೂರು ತಾಲೂಕಿನ ಸೊರಕೆ ಮೂಲದ ಅಜಿತ್ ರೈ ಗೆ ಸರ್ಕಾರಿ ಸರ್ವೇಯರ್ ಆಗಿ ಕೆಲಸ ಮಾಡುತ್ತಿದ್ದ ತಂದೆ ಆನಂದ್ ನಿಧನದ ಬಳಿಕ ಅನುಕಂಪದ ಆಧಾರದಲ್ಲಿ ಅಜಿತ್ ಸರ್ಕಾರಿ ಕೆಲಸ ಸಿಕ್ಕಿತ್ತು.

ಕಂದಾಯ ನಿರೀಕ್ಷಕರಾಗಿ ಆಗಿ ಬೆಂಗಳೂರಿನಲ್ಲೇ ಸರ್ಕಾರಿ ಕೆಲಸಕ್ಕೆ ನೇಮಕವಾಗಿದ್ದ ಇವರು, ಅಲ್ಲಿಂದ ಭಡ್ತಿ ಪಡೆದು ಉಪ ತಹಶೀಲ್ದಾರ್ ಬಳಿಕ ತಹಶಿಲ್ದಾರ್ ಹುದ್ದೆಗೆ ನೇಮಕವಾಗಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.