# Tags
#ಧಾರ್ಮಿಕ

ಧಾರ್ಮಿಕ ದತ್ತಿ ಇಲಾಖಾಧಿಕಾರಿಯವರಿಗೆ ಕಾಪು ಹೊಸಮಾರಿಗುಡಿ ಬ್ರಹ್ಮಕಲಶೋತ್ಸವಕ್ಕೆ ಆಹ್ವಾನ (Invitation to the Director of Religious Endowments for the Kaup Hosamarigudi Brahma Kalashotsava)

ಧಾರ್ಮಿಕ ದತ್ತಿ ಇಲಾಖಾಧಿಕಾರಿಯವರಿಗೆ ಕಾಪು ಹೊಸಮಾರಿಗುಡಿ ಬ್ರಹ್ಮಕಲಶೋತ್ಸವಕ್ಕೆ ಆಹ್ವಾನ

(Kaup) ಕಾಪು : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಫೆ.25ರಿಂದ ಮಾ. 5ರವರೆಗೆ ಜರಗಲಿರುವ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ  ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯ ಆಯುಕ್ತ ಡಾ. ವೆಂಕಟೇಶ್  ಅವರಿಗೆ ಶ್ರೀ ಕ್ಷೇತ್ರದ ವತಿಯಿಂದ ಆಹ್ವಾನ ಪತ್ರಿಕೆ ನೀಡಿ ಆಹ್ವಾನಿಸಲಾಯಿತು.

  ಈ ಸಂದರ್ಭ ದೇವಳದ ಅಭಿವೃದ್ಧಿ ಸಮಿತಿಯ ಗೌರವಾಧ್ಯಕ್ಷರು ಮತ್ತು ಕರ್ನಾಟಕ ಸರಕಾರದ ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ, ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಕಾಪು ಇದರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ ಹಾಗೂ ಸದಸ್ಯರಾದ ಮಾಧವ ಆರ್. ಪಾಲನ್ ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

Emedia Advt3