• Home  
  •  ಧಾರ್ಮಿಕ, ಸಾಮಾಜಿಕ ಮುಂದಾಳು ಶೇಖರ ಆಚಾರ್ಯ ಕಾಪು ನಿಧನ (Shekhara Acharya Kaup Passed away)
- ಅಪಘಾತ

 ಧಾರ್ಮಿಕ, ಸಾಮಾಜಿಕ ಮುಂದಾಳು ಶೇಖರ ಆಚಾರ್ಯ ಕಾಪು ನಿಧನ (Shekhara Acharya Kaup Passed away)

Share: ಧಾರ್ಮಿಕ, ಸಾಮಾಜಿಕ ಮುಂದಾಳು ಶೇಖರ ಆಚಾರ್ಯ ಕಾಪು ನಿಧನ (Kaup) ಕಾಪು: ಧಾರ್ಮಿಕ, ಸಾಮಾಜಿಕ, ಸಹಕಾರಿ ಕ್ಷೇತ್ರದ ಮುಂದಾಳು ಕಾಪು ಶ್ರೀ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ ಶೇಖರ ಆಚಾರ್ಯ ಕಾಪು (೭೪) ಅವರು ಶುಕ್ರವಾರ ನಿಧನ ಹೊಂದಿದರು. ಇತ್ತೀಚೆಗೆ ನಡೆದ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಶೇಖರ ಆಚಾರ್ಯ ರವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿ ಆಗದೆ ಅವರು ಶುಕ್ರವಾರ ಮೃತಪಟ್ಟಿದ್ದಾರೆ. ವಿಶ್ವಬ್ರಾಹ್ಮಣ ಸಮಾಜದ ನಾಯಕರಾಗಿಯೇ ಗುರುತಿಸಿಕೊಂಡಿದ್ದು, ಕಾಪು ಶ್ರೀ ಕಾಳಿಕಾಂಬಾ ದೇವಸ್ಥಾನದ ಅಭೂತಪೂರ್ವ […]

ಧಾರ್ಮಿಕ, ಸಾಮಾಜಿಕ ಮುಂದಾಳು ಶೇಖರ ಆಚಾರ್ಯ ಕಾಪು ನಿಧನ

(Kaup) ಕಾಪು: ಧಾರ್ಮಿಕ, ಸಾಮಾಜಿಕ, ಸಹಕಾರಿ ಕ್ಷೇತ್ರದ ಮುಂದಾಳು ಕಾಪು ಶ್ರೀ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ ಶೇಖರ ಆಚಾರ್ಯ ಕಾಪು (೭೪) ಅವರು ಶುಕ್ರವಾರ ನಿಧನ ಹೊಂದಿದರು.

ಇತ್ತೀಚೆಗೆ ನಡೆದ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಶೇಖರ ಆಚಾರ್ಯ ರವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿ ಆಗದೆ ಅವರು ಶುಕ್ರವಾರ ಮೃತಪಟ್ಟಿದ್ದಾರೆ.

ವಿಶ್ವಬ್ರಾಹ್ಮಣ ಸಮಾಜದ ನಾಯಕರಾಗಿಯೇ ಗುರುತಿಸಿಕೊಂಡಿದ್ದು, ಕಾಪು ಶ್ರೀ ಕಾಳಿಕಾಂಬಾ ದೇವಸ್ಥಾನದ ಅಭೂತಪೂರ್ವ ಬೆಳವಣಿಗೆಗೆ ಕಾರಣೀಕರ್ತರಾಗಿದ್ದರು.

 ಕಾಪು ವಿಕಾಸ ಕೋ ಆಪರೇಟಿವ್ ಸೊಸೈಟಿಯ ಸಂಸ್ಥಾಪಕ, ಆಡಳಿತ ಮಂಡಳಿಯ ಅಧ್ಯಕ್ಷರಾಗಿದ್ದರು. ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ಸಮಿತಿಯಲ್ಲಿದ್ದು, ಸಕ್ರಿಯರಾಗಿ ಜೀರ್ಣೋದ್ಧಾರದ ಸಂದರ್ಭ ತಮ್ಮನ್ನು ತೊಡಗಿಸಿಕೊಂಡಿದ್ದರು.

ಕಾಪು ಸಿ.ಎ. ಬ್ಯಾಂಕ್‌ನ ಜನರಲ್ ಮ್ಯಾನೇಜರ್ ಆಗಿ ನಿವೃತ್ತರಾಗಿದ್ದರು. ಆನೆಗುಂದಿ ಕುಲಗುರು ಪೀಠದ ಶಿಷ್ಯರಾಗಿದ್ದು, ಆನೆಗುಂದಿ ಮಹಾಸಂಸ್ಥಾನದ ಪುನರುತ್ಥಾನದ ಅವಧಿಯಿಂದಲೇ ತನ್ನನ್ನು  ತೊಡಗಿಸಿಕೊಂಡಿದ್ದು, ಆನೆಗುಂದಿ ಪ್ರತಿಷ್ಠಾನದ ವಿಶ್ವಸ್ಥರಾಗಿ ಮಹಾಸಂಸ್ಥಾನದ ಅಭಿವೃದ್ಧಿ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದರು. ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಹೊಸಮಾರಿಗುಡಿ ಜೀರ್ಣೋದ್ಧಾರ ಸಮಿತಿಯಲ್ಲಿ ವಿಶ್ವಕರ್ಮ ಸಮಾಜವನ್ನು ಪ್ರತಿನಿಧಿಸುತ್ತಿದ್ದು, ಕಾಪು ಕ್ಷೇತ್ರದಾದ್ಯಂತ ಧಾರ್ಮಿಕ, ಸಾಮಾಜಿಕ ಕ್ಷೇತ್ರಗಳಲ್ಲಿ ಸೇವೆಗೈದು ಜನಾನುರಾಗಿಯಾಗಿದ್ದರು.

ಮೃತರು ಪತ್ನಿ, ಮೂವರು ಗಂಡು ಮಕ್ಕಳನ್ನು ಅಗಲಿದ್ದಾರೆ.

ಕಾಪು ಕ್ಷೇತ್ರ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ ಶಾಸಕ ಯಶ್‌ಪಾಲ್ ಎ.ಸುವರ್ಣ, ಕಟಪಾಡಿ ಪಡುಕುತ್ಯಾರು ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠಾಧೀಶ್ವರ ಶ್ರೀ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀಜಿ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ವಿವಿಧ ದೇವಾಲಯಗಳು ಆಡಳಿತ ಮೊಕ್ತೇಸರರು, ಸಂಘ ಸಂಸ್ಥೆಗಳ ಅಧ್ಯಕ್ಷರು, ಪ್ರಮುಖರು, ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠ ಪ್ರತಿಷ್ಠಾನ, ಸಹ ಟ್ರಸ್ಟಿಗಳಾದ ಅಸೆಟ್, ಗೋ ಪರ್ಯಾವರಣ್ ಸಂರಕ್ಷಣಾ ಟ್ರಸ್ಟ್ ಮತ್ತು ಆನೆಗುಂದಿ ಗುರುಸೇವಾ ಪರಿಷತ್, ಸರಸ್ವತೀ ಮಾತೃಮಂಡಳಿ ಪಡುಕುತ್ಯಾರು ಇದರ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಸಂತಾಪವನ್ನು ಸೂಚಿಸಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.