ನಂದಳಿಕೆ: ಬೈಕ್ ಡಿಕ್ಕಿ, ಬಾಲಕಿ ಮೃತ್ಯು
(Karkala) ಕಾರ್ಕಳ: ಪಾದಾಚಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬಾಲಕಿ ಮೃತಪಟ್ಟ ಧಾರುಣ ಘಟನೆ ನಂದಳಿಕೆಯಲ್ಲಿ ಶನಿವಾರ ಸಂಜೆ ಸಂಭವಿಸಿದೆ.
ಮುಲ್ಲಡ್ಕ ಸೇಂಟ್ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿಯ ವಿದ್ಯಾರ್ಥಿ ಪ್ರಣಮ್ಯ 14 ವರ್ಷ ಮೃತಪಟ್ಟ ದುರ್ದೈವಿಯಾಗಿದ್ದಾಳೆ.
ಲಕ್ಷ್ಮಿ ಜನಾರ್ಧನ ದೇವಸ್ಥಾನದಲ್ಲಿ ಪೂಜೆ ಮುಗಿಸಿ ಮನೆಗೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವ ಸಂದರ್ಭ ಪ್ರಣಮ್ಯಳಿಗೆ ಬೈಕ್ ಡಿಕ್ಕಿ ಹೊಡೆದಿದೆ. ತೀವ್ರ ಗಾಯಗೊಂಡ ಆಕೆಯನ್ನು ಆಸ್ಪತ್ರೆಗೆ ಸಾಗಿಸುವ ಹಾದಿಯಲ್ಲಿ ಮೃತಪಟ್ಟಿದ್ದಾಳೆ.
ಈ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

