ನಂದಿಕೂರು ರೈಲ್ವೇ ಸಂಪರ್ಕ ಸೇತುವೆ ಹಾನಿ ವೀಕ್ಷಿಸಿದ ಶಾಸಕ ಗುರ್ಮೆ ಮತ್ತು ಸಂಸದ ಕೋಟಾ
(Nandikuru) ನಂದಿಕೂರು : ಪಲಿಮಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ನಂದಿಕೂರು ರೈಲ್ವೇ ಸಂಪರ್ಕ ಸೇತುವೆ ಕೆಲ ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ಹಾನಿಯಾಗಿದ್ದು ಈ ಸಂಬಂಧ ಶುಕ್ರವಾರ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಮತ್ತು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ತಕ್ಷಣವೇ ಸೇತುವೆ ಇಕ್ಕೆಲಗಳಲ್ಲಿ ನಿಂತ ನೀರು ಸರಾಗವಾಗಿ ಹರಿದು ಹೋಗಲು ವ್ಯವಸ್ಥೆ ಮಾಡುವಂತೆ, ಜೊತೆಗೆ ಮಳೆ ಕಡಿಮೆಯಾದ ಕೂಡಲೇ ರಸ್ತೆ ದುರಸ್ತಿ ಕಾರ್ಯವನ್ನು ನಿರ್ವಹಿಸಲು ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ಸೂಚಿಸಲಾಯಿತು.
ಈ ಸಂದರ್ಭದಲ್ಲಿ ಪಲಿಮಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಸೌಮ್ಯಲತಾ ಶೆಟ್ಟಿ, ಉಪಾಧ್ಯಕ್ಷ ರಾಯೇಶ್ ಪೈ, ಶಶಿಕಾಂತ್ ಪಡುಬಿದ್ರಿ, ಪಲಿಮಾರು ಗ್ರಾಮ ಪಂಚಾಯತ್ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

