ಮಂಗಳೂರು : ಇಲ್ಲಿನ ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ಸೇವೆ ಸಲ್ಲಿಸುತ್ತಿದ್ದ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ನಡೆದಿದೆ.
ಕೀರ್ತನ್ ಕುಮಾರ್(38) ಎಂಬುವವರು ಕಚೇರಿ ಆವರಣದ ಗೋದಾಮಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅನಾರೋಗ್ಯದಿಂದಾಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.
ಮೃತರು ಪತ್ನಿ ಮತ್ತು ಮಗುವನ್ನು ಅಗಲಿದ್ದಾರೆ. ಈ ಬಗ್ಗೆ ಉರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

