ನರೇಂದ್ರ ನೇತೃತ್ವದ ಕೇಂದ್ರ ಸರ್ಕಾರಕ್ಕೆ 4399 ದಿನ: ಕಾಪು ಶ್ರೀ ಲಕ್ಷ್ಮೀ ಜನಾರ್ಧನ ದೇಗುಲದಲ್ಲಿ ವಿಶೇಷ ಪೂಜೆ
ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನೇತೃತ್ವದಲ್ಲಿ ಕಾಪು ಮಂಡಲ ಬಿಜೆಪಿ ವತಿಯಿಂದ ಪೂಜೆ
(Kaup) ಕಾಪು : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರ ಯಶಸ್ವಿಯಾಗಿ 4399 ದಿನ ಪೂರೈಸಿದ ಸಲುವಾಗಿ ಬುದವಾರ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರ ನೇತೃತ್ವದಲ್ಲಿ ಕಾಪು ಮಂಡಲ ಬಿಜೆಪಿ ವತಿಯಿಂದ ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದಲ್ಲಿ ನರೇಂದ್ರ ಮೋದಿ ಅವರ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಿ ಅವರ ಉತ್ತಮ ಆರೋಗ್ಯ, ದೀರ್ಘಾಯುಷ್ಯಕ್ಕಾಗಿ ಪ್ರಾರ್ಥನೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್, ಶರಣ್ ಕುಮಾರ್ ಮಟ್ಟು ಹಾಗೂ ಪಕ್ಷದ ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

