# Tags
#ಮನೋರಂಜನೆ

ನವೆಂಬರ್ 24 : ಉದ್ಯಾವರದಲ್ಲಿ ಎಚ್‌ಪಿಆರ್‌ ಫಿಲಂಸ್  ಪ್ರಾಯೋಜಿತ ಆದರ್ಶ ದಂಪತಿ ಸ್ಪರ್ಧೆ (“Ideal Couple” Cometition Sponsored by HPR Flms at Udyavara)

ನವೆಂಬರ್ 24 : ಉದ್ಯಾವರದಲ್ಲಿ ಎಚ್‌ಪಿಆರ್‌ ಫಿಲಂಸ್  ಪ್ರಾಯೋಜಿತ ಆದರ್ಶ ದಂಪತಿ ಸ್ಪರ್ಧೆ

(Udyavara) ಉದ್ಯಾವರ : ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ನೇತೃತ್ವದಲ್ಲಿ ವಾರ್ಷಿಕ ವಿವಿಧ ಸೇವಾ ಮತ್ತು ಸಾಮಾಜಿಕ ಚಟುವಟಿಕೆಗಳ ಸಹಾಯಾರ್ಥವಾಗಿ ಎಚ್‌ಪಿಆರ್‌ ಫಿಲಂಸ್ ಪ್ರಾಯೋಜಿತ ಆದರ್ಶ ದಂಪತಿ ಸ್ಪರ್ಧೆ ನವಂಬರ್ 24ರಂದು ಉದ್ಯಾವರ ಚರ್ಚ್ ವಠಾರದಲ್ಲಿ ನಡೆಯಲಿದೆ.

  25 ಸ್ಪರ್ಧಿಗಳು ಭಾಗವಹಿಸುತ್ತಿರುವ  ಈ ಸ್ಪರ್ಧೆಯು ಮೂರು ಸುತ್ತುಗಳಲ್ಲಿ ನಡೆಯಲಿದ್ದು, ಕ್ಷಣ ಕ್ಷಣಕ್ಕೂ ಕುತೂಹಲದೊಂದಿಗೆ ಸಂಗೀತ ಸುಧೆ, ಹಾಸ್ಯ ಲಹರಿ, ಸಾಂಸ್ಕೃತಿಕ ವೈಭವದೊಂದಿಗೆ ಅದ್ದೂರಿಯಾಗಿ ನಡೆಯಲಿದೆ.

  ಲಯನ್ಸ್ ಜಿಲ್ಲಾ ಗವರ್ನರ್ ಲಯನ್ ಮಹಮದ್ ಹನೀಫ್ ಎಮ್’ಜೆಎಫ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಲಯನ್ಸ್ ಮತ್ತು ಸಾಮಾಜಿಕ ನಾಯಕರುಗಳು ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

 ಜೆಸಿಐನ ರಾಷ್ಟ್ರೀಯ ತರಬೇತುದರಾಗಿರುವ ಜೆಸಿ ರಾಜೇಂದ್ರ ಭಟ್ ಕಾರ್ಯಕ್ರಮದ ನಿರೂಪಣೆ ನಡೆಸಲಿದ್ದಾರೆ.

  ವಿಶೇಷ ಆಕರ್ಷಣೆಯಾಗಿ ತುಳುರಂಗಭೂಮಿಯ ಪ್ರಭುದ್ಧ ಹಾಸ್ಯ ಮತ್ತು ಚಲನಚಿತ್ರ ನಟರಾದ ಅರವಿಂದ ಬೋಳಾರ್, ದಾಯ್ಜಿ ವರ್ಲ್ಡ್ ಮುಖ್ಯಸ್ಥ ವಾಲ್ಟರ್ ನಂದಳಿಕೆ, ಗಿನ್ನೆಸ್ ದಾಖಲೆ ಖ್ಯಾತಿಯ ಯೋಗರತ್ನ ತನುಶ್ರೀ ಪಿತ್ರೋಡಿ, ಖ್ಯಾತ ಜೀವ ರಕ್ಷಕ ಈಶ್ವರ ಮಲ್ಪೆ ಮತ್ತು ಮಿಡಲ್ ಕ್ಲಾಸ್ ಫ್ಯಾಮಿಲಿ ಚಲನಚಿತ್ರ ತಂಡ ಹಾಜರಿರಲಿದ್ದಾರೆ.

 ಪ್ರತಿಷ್ಠಿತ ಎಚ್‌ಪಿಆರ್‌ ಫಿಲಂಸ್ ಪ್ರಾಯೋಜಿತ ಆದರ್ಶ ದಂಪತಿ ಸ್ಪರ್ಧೆಯು ಉಚಿತ ಪ್ರವೇಶವಾಗಿದ್ದು, ಪ್ರಥಮ ಬಹುಮಾನ ರೂ. 15,000 ಮೌಲ್ಯದ ಗಿಫ್ಟ್ ವೋಚರ್ ಮತ್ತು ಟ್ರೋಫಿ, ದ್ವಿತೀಯ ಬಹುಮಾನ 10 ಸಾವಿರ ರೂ. ಮೌಲ್ಯದ ಗಿಫ್ಟ್ ವೋಚರ್ ಮತ್ತು ಟ್ರೋಫಿ, ತೃತೀಯ ಬಹುಮಾನ ರೂ. 7500 ವೆಚ್ಚದ ಗಿಫ್ಟ್ ವೋಚರ್ ಮತ್ತು ಟ್ರೋಫಿ, ಫೈನಲ್ ಸ್ಪರ್ಧಿಗಳಿಗೆ ಹಾಗೂ ಭಾಗವಹಿಸಿದ ಎಲ್ಲಾ ಸ್ಪರ್ಧಿಗಳಿಗೆ ಪ್ರತಿಷ್ಠಿತ ಕಂಪನಿಗಳ ಗಿಫ್ಟ್ ವೋಚರ್ ಲಭಿಸಲಿದೆ.

 ಲಯನ್ಸ್ ಕ್ಲಬ್ ಮತ್ತು ಸಾರ್ವಜನಿಕರಿಗೂ ಈ ಸ್ಪರ್ಧೆಯಲ್ಲಿ ಭಾಗವಹಿಸಲು ಮುಕ್ತ ಅವಕಾಶವಿದ್ದು, ಹೆಸರು ನೋಂದಾಯಿಸಲು ಕಾರ್ಯಕ್ರಮದ ಸಂಚಾಲಕ ಲಯನ್ ಸ್ಟೀವನ್ ಕುಲಾಸೊ (9901701381) ಇವರನ್ನು ಸಂಪರ್ಕಿಸಬಹುದಾಗಿದೆ.

 ಮಾತ್ರವಲ್ಲದೆ ಕರಾವಳಿಯ ಮಾಂಸಾಹಾರಿ, ಸಸ್ಯಾಹಾರಿ, ಮೀನು ಮತ್ತು ತಂಪು ಪಾನೀಯಗಳು ಲಭ್ಯವಿದ್ದು, ಪ್ರೇಕ್ಷಕರಿಗೂ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ನ ಪ್ರಕಟನೆ ತಿಳಿಸಿದೆ.

Leave a comment

Your email address will not be published. Required fields are marked *

Emedia Advt5 Emedia Advt3 Emedia Advt1 Emedia Advt2